
ನವದೆಹಲಿ(ಜ.20): ಜನವರಿ 29ರಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಸಲವೂ ಸಕಲ ಮುಂಜಾಗ್ರತೆಯೊಂದಿಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಜ.27 ಹಾಗೂ 28ರಂದು ಎಲ್ಲ ಸದಸ್ಯರಿಗೆ ಹಾಗೂ ಸಂಸತ್ತಿನ ಸಿಬ್ಬಂದಿಗೆ ಕೋವಿಡ್ ಆರ್‌ಟಿಪಿಸಿಆರ್ ಟೆಸ್ಟ್ ನಡೆಸಲಾಗುತ್ತದೆ.
ಲೋಕಭಾಧ್ಯಕ್ಷ ಓಂ ಬಿರ್ಲಾ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸಂಸದರಿಗೆ ಸಂಸತ್ ಆವರಣದಲ್ಲಿ ಹಾಗೂ ಅವರವರ ಮನೆಯ ಬಳಿಯೇ ಕೋವಿಡ್ ಟೆಸ್ಟ್ ನ ನಡೆಸಲಾಗುತ್ತದೆ ಎಂದರು.
ಈ ಹಿಂದಿನಂತೆಯೇ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಸಾಮಾಜಿಕ ಅಂತರ ಪಾಲನೆಯೊಂದಿಗೆ 2 ಪ್ರತ್ಯೇಕ ಅವಧಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಲೋಕಸಭೆ ಕಲಾಪ ನಡೆಯಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ