ವಾಷಿಂಗ್ಟನ್ ಹಿಂಸಾಚಾರದಿಂದ ದುಃಖವಾಯ್ತು, ಶಾಂತಿಯುತವಾಗಿ ಅಧಿಕಾರ ಹಸ್ತಾಂತರವಾಗಲಿ: ಮೋದಿ!

Published : Jan 07, 2021, 12:33 PM IST
ವಾಷಿಂಗ್ಟನ್ ಹಿಂಸಾಚಾರದಿಂದ ದುಃಖವಾಯ್ತು, ಶಾಂತಿಯುತವಾಗಿ ಅಧಿಕಾರ ಹಸ್ತಾಂತರವಾಗಲಿ: ಮೋದಿ!

ಸಾರಾಂಶ

ವಾಷಿಂಗ್ಟನ್ ಹಿಂಸಾಚಾರ, ಘಟನೆ ಖಂಡಿಸಿದ ಮೋದಿ| ಶಾಂತಿಯುತವಾಗಿ ಅಧಿಕಾರ ಹಸ್ತಾಂತರವಾಗಲಿ ಎಂದ ಮೋದಿ| ವಾಷಿಂಗ್ಟನ್ ಹಿಂಸಾಚಾರದಿಂದ ದುಃಖವಾಯ್ತು

ವಾಷಿಂಗ್ಟನ್(ಜ.07): ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಬೆಂಬಲಿಗರಿಂದ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಬಗ್ಗೆ ಪಿಎಂ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಘರ್ಷವನ್ನು ಖಂಡಿಸಿರುವ ಮೋದಿ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಕೆಡಿಸಲು ಅವಕಾಶ ನೀಡಬಾರದು ಎಂದು ಟ್ವೀಟ್ ಮಾಡಿದ್ದಾರೆ.

ಅಮೆರಿಕದ ಸಂಸತ್ ಭವನದಲ್ಲಿ ಹಿಂಸಾಚಾರ ನಡೆದಿದ್ದು, ಟ್ರಂಪ್ ಬೆಂಬಲಿಗರು ಮತ್ತು ಪೊಲೀಸರ ನಡುವೆ ಸಂಘರ್ಷದ ಬೆನ್ನಲ್ಲೇ ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಪಿಎಂ ಮೋದಿ ‘ವಾಷಿಂಗ್ಟನ್ ಡಿಸಿಯಲ್ಲಿ ಗಲಭೆ ಮತ್ತು ಹಿಂಸಾಚಾರದ ಸುದ್ದಿಯನ್ನು ನೋಡಿ ದುಃಖಿತವಾಗಿದೆ. ಅಧಿಕಾರ ಹಸ್ತಾಂತರವನ್ನು ಸುವ್ಯವಸ್ಥಿತ ಮತ್ತು ಶಾಂತಿಯುತವಾಗಿ ಮುಂದುವರಿಸಬೇಕು. ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಕಾನೂನು ಬಾಹಿರ ಪ್ರತಿಭಟನೆಗಳ ಮೂಲಕ ಬುಡಮೇಲು ಮಾಡಲು ಅವಕಾಶ ನೀಡಬಾರದು’ ಎಂದಿದ್ದಾರೆ.

ಅಮೆರಿಕದ ವಾಷಿಂಗ್ಟನ್ ಡಿಸಿಯ ಸಂಸತ್ ನಲ್ಲಿ ಎಲೆಕ್ಟೋರಲ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟೋಲ್ ಕಟ್ಟಡಕ್ಕೆ ನುಗ್ಗಿದ ನೂರಾರು ಪ್ರತಿಭಟನಾಕಾರರು ಧಾಂದಲೆ ನಡೆಸಿದ್ದರು. ಇವರನ್ನು ತಡೆಯಲು ಮುಂದಾದ ಪೊಲೀಸರ ಜೊತೆ ಸಂಘರ್ಷವೇರ್ಪಟ್ಟಿದ್ದು, ಘಟನೆಯಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!