ಮಾರ್ಚ್‌ನಿಂದ 2ನೇ ಹಂತದ ಕೊರೋನಾ ಲಸಿಕೆ ವಿತರಣೆ; 50 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್!

By Suvarna NewsFirst Published Feb 15, 2021, 10:13 PM IST
Highlights

ಭಾರತದಲ್ಲಿ ಕೊರೋನಾ ವಿರುದ್ಧ ಲಸಿಕೆ ವಿತರಣೆ ಭರ್ಜರಿಯಾಗಿ ನಡೆಯುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದೆ. ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಕುರಿತು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. 

ನವದೆಹಲಿ(ಫೆ.15): ಕಳೆದ ಒಂದು ತಿಂಗಳಿನಿಂದ ಭಾರತದಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯುತ್ತಿದೆ. ದೇಶದ ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಉಚಿತವಾಗಿ ಕೊರೋನಾ ಲಸಿಕೆ ನೀಡುತ್ತಿದೆ. ಇದೀಗ 2ನೇ ಹಂತದ ಕೊರೋನಾ ಲಸಿಕೆ ವಿತರಣೆ ಮಾರ್ಚ್ ತಿಂಗಳಿನಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಹೇಳಿದ್ದಾರೆ.

ಕಚೇರಿಗಳಲ್ಲಿ ಮಾಸ್ಕ್‌, ಅಂತರ ಕಡ್ಡಾಯ: ಸರ್ಕಾರದಿಂದ ಮಾರ್ಗಸೂಚಿ!.

ಶೇಕಡಾ 80 ರಿಂದ 85 ರಷ್ಟು ಆರೋಗ್ಯ ಕಾರ್ಯಕರ್ತರು, ಫ್ರಂಟ್‌ಲೈನ್ ವರ್ಕಸ್‌ಗೆ ಕೊರೋನಾ ಲಸಿಕೆ ನೀಡಲಾಗಿದೆ. ಫೆಬ್ರವರಿ ಅಂತ್ಯದೊಳಗೆ ದೇಶದ ಎಲ್ಲಾ ಕಾರ್ಯಕರ್ತರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಬಳಿಕ ಮಾರ್ಚ್ ತಿಂಗಳಿನಿಂದ 50 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ವಿತರಿಸಲಾಗುವುದು ಎಂದು ಹರ್ಷವರ್ಧನ್ ಹೇಳಿದ್ದಾರೆ.

ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ. ಕಳೆದ 7 ದಿನಗಳಲ್ಲಿ 188 ಜಿಲ್ಲೆಗಳಲ್ಲಿ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ವಿಶ್ವವನ್ನೇ ಬೆಚ್ಚಿ ಬೀಳಿಸಿದ ಕೊರೋನಾ ವಿರುದ್ಧ ಭಾರತ ಶಕ್ತವಾಗಿ ಹೋರಾಡುತ್ತಿದೆ. ಇದೀಗ ಭಾರತದ ಲಸಿಕೆಗಳಿಗೆ ವಿದೇಶದಿಂದ ಬೇಡಿಕೆ ಹೆಚ್ಚಾಗುತ್ತಿದೆ. ಈಗಾಗಲು ಹಲವು ರಾಷ್ಟ್ರಗಳಿಗೆ ಲಸಿಕೆ ನೀಡಲಾಗಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
 

click me!