
ನವದೆಹಲಿ(ನ.30): ಲಸಿಕೆ ಸಿಗುವವರೆಗೂ ಕೋವಿಡ್ ನಿರ್ಬಂಧ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸುಪ್ರೀಂಕೋರ್ಟ್ ಸೂಚನೆ ಬೆನ್ನಲ್ಲೇ, ಮಾಸ್ಕ್ ಧರಿಸದೇ ಇದ್ದಿದ್ದಕ್ಕೆ ದಂಡ ವಿಧಿಸುವುದು ಮಾತ್ರವಲ್ಲ ಜೈಲು ಶಿಕ್ಷೆಗೆ ಗುರಿಪಡಿಸುವ ಕಠಿಣ ನಿಯಮವನ್ನು ಹಿಮಾಚಲ ಪ್ರದೇಶ ಸರ್ಕಾರ ಜಾರಿಗೊಳಿಸಿದೆ.
ರಾಜ್ಯ ಸರ್ಕಾರದ ಹೊಸ ಆದೇಶದ ಅನ್ವಯ ಯಾವುದೇ ವ್ಯಕ್ತಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ ಪೊಲೀಸರು ವಾರೆಂಟ್ ಇಲ್ಲದೇ ಬಂಧಿಸಬಹುದಾಗಿದ್ದು, 8 ದಿನಗಳ ಕಾಲ ಜೈಲಿನಲ್ಲಿ ಇಡಬಹುದಾಗಿದೆ. ಜೊತೆಗೆ 5000 ರು.ವರೆಗೂ ದಂಡ ವಿಧಿಸಬಹುದಾಗಿದೆ.
ದೆಹಲಿಯಲ್ಲಿ ಮಾಸ್ಕ್‌ಗೆ ದಂಡದ ಮೊತ್ತವನ್ನು ಇತ್ತೀಚೆಗೆ 2 ಸಾವಿರದಿಂದ 5 ಸಾವಿರಕ್ಕೆ ಹೆಚ್ಚಿಸಲಾಗಿದೆ. ಆದರೆ, ಜೈಲು ಶಿಕ್ಷೆ ಜಾರಿ ಮಾಡಿರುವುದು ಇದೇ ಮೊದಲು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ