
ನವದೆಹಲಿ (ಆ.27): ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಕಾಶ್ಮೀರವನ್ನು ಅಕ್ರಮವಾಗಿ ಇಟ್ಟುಕೊಂಡಿವೆ ಎಂದು ಫೇಸ್‌ಬುಕ್ ಪೋಸ್ಟಮಾಡಿದ್ದ, ನಿಮ್ಮ ಇಬ್ಬರೂ ಸಲಹೆಗಾರರನ್ನು ವಜಾ ಮಾಡಿ.
ಇಲ್ಲವೇ ನಾವೇ ಆ ಕೆಲಸ ಮಾಡಬೇಕಾಗುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್‌ಸಿಂಗ್ ಸಿಧುಗೆ ಪಕ್ಷದ ರಾಜ್ಯ ಉಸ್ತುವಾರಿ ಹರೀಶ್ ರಾವತ್ ಎಚ್ಚರಿಕೆ ನೀಡಿದ್ದಾರೆ.
ಕಾಶ್ಮೀರ ಭಾರತದ್ದಲ್ಲ ಎಂದ ಸಿಧು ಸಲಹೆಗಾರನಿಗೆ ಕ್ಯಾಪ್ಟನ್ ಕ್ಲಾಸ್!
ಅಲ್ಲದೆ ಜಮ್ಮು-ಕಾಶ್ಮೀರವು ಭಾರತದ ಭಾಗವೆಂಬುದು ಪಕ್ಷದ ನೀತಿ. ಇದನ್ನು ಯಾರು ಸಹ ಮೀರಬಾರದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಎಂ ಅಮರೀಂದರ್ ವಿರುದ್ಧ ಹಲ್ಲು ಮಸೆಯುತ್ತಿರುವ ಸಿಧುಗೆ ಒಂದಿಷ್ಟುಕಡಿವಾಣ ಹಾಕುವ ಯತ್ನವನ್ನು ಪಕ್ಷದ ಹೈಕಮಾಂಡ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ