ಬುಲ್ಡೋಜರ್ ಬಳಸಿ ಸಮಾಜವಾದಿ ಪಕ್ಷದ ಶಾಸಕನ ಪೆಟ್ರೋಲ್ ಪಂಪ್ ಕೆಡವಿದ ಯೋಗಿ ಸರ್ಕಾರ!

Published : Apr 07, 2022, 04:09 PM IST
ಬುಲ್ಡೋಜರ್ ಬಳಸಿ ಸಮಾಜವಾದಿ ಪಕ್ಷದ ಶಾಸಕನ ಪೆಟ್ರೋಲ್ ಪಂಪ್ ಕೆಡವಿದ ಯೋಗಿ ಸರ್ಕಾರ!

ಸಾರಾಂಶ

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಕೆಲವೇ ದಿನದ ಅಂತರದಲ್ಲಿ ಸಮಾಜವಾದಿ ಪಕ್ಷದ ಶಾಸಕ ಶಾಜಿಲ್ ಇಸ್ಲಾಂ ಅವರ ಒಡೆತನದ ಪೆಟ್ರೋಲ್ ಪಂಪ್ ಅನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ.  

ಲಕ್ನೋ (ಏ. 7): ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ಶಾಸಕ ಶಾಜಿಲ್ ಇಸ್ಲಾಂ ಅನ್ಸಾರಿ (MLA Shazil Islam) ಒಡೆತನದ ಪೆಟ್ರೋಲ್ ಪಂಪ್ ಅನ್ನು ಅಗತ್ಯ ಪರವಾನಿಗೆ ಇಲ್ಲದೆ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳು ಗುರುವಾರ ಧ್ವಂಸಗೊಳಿಸಿದ್ದಾರೆ. ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ವಿರುದ್ಧ ಅನ್ಸಾರಿ ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು.

ದೆಹಲಿ-ರಾಮ್‌ಪುರ ಹೆದ್ದಾರಿಯಲ್ಲಿರುವ (Dehli-Rampur Highway) ಪೆಟ್ರೋಲ್ ಪಂಪ್ (petrol pump) ಅನ್ನು ಸರ್ಕಾರದಿಂದ ಸರಿಯಾದ ಅನುಮತಿಯನ್ನು ಪಡೆಯದೆ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿದೆ. ಪರಿಣಾಮವಾಗಿ, ಅದನ್ನು ಕೆಡವಲಾಗಿದೆ. ಈ ವಾರದ ಆರಂಭದಲ್ಲಿ, ಶಾಜಿಲ್ ಇಸ್ಲಾಂ ಅವರು ಯೋಗಿ ಆದಿತ್ಯನಾಥ್ ಅವರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೊ ಕ್ಲಿಪ್ ವೈರಲ್ ಆದ ಬಳಿಕ ಅವರ ಪೆಟ್ರೋಲ್ ಪಂಪ್ ಅನ್ನು ನೆಲಸಮ ಮಾಡಲಾಗಿದೆ ಎನ್ನುವುದು ವಿಶೇಷ.

ಬರೇಲಿಯಲ್ಲಿ ಎಸ್‌ಪಿ (SP Supporters ) ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಶಾಸಕ,  "ಯೋಗಿ ಆದಿತ್ಯನಾಥ್ ನಮ್ಮ ವಿರುದ್ಧ ಏನಾದರೂ ಹೇಳಿದರೆ, ನಮ್ಮ ಬಂದೂಕುಗಳು ಬರೀ ಹೊಗೆಯನ್ನು ಹೊರಸೂಸುವುದಿಲ್ಲ. ಬದಲಿಗೆ ಗುಂಡುಗಳನ್ನು ಹಾರಿಸುತ್ತವೆ" ಎಂದು ಹೇಳಿದ್ದರು. ನಾವು ಕೇವಲ ವಿಧಾನಸಭೆಯಲ್ಲಿ ಮಾತ್ರವಲ್ಲ ರಸ್ತೆಯಲ್ಲೂ ನಿಂತೂ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಇಳಿಯಲಿದ್ದೇವೆ ಎಂದು ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ಅಖಿಲೇಶ್ ಯಾದವ್ ಹೇಳಿದ್ದಾರೆ ಎಂದಿದ್ದರು. ಹಿಂದಿನ ಬಾರಿ ಸರ್ಕಾರವಿದ್ದಾಗ ವಿಧಾನಸಭೆಯಲ್ಲಿ (Assembley ) ನಮ್ಮ ಪಕ್ಷದ ಕಡಿಮೆ ಸದಸ್ಯರಿದ್ದರು. ಆದರೆ, ಈ ಬಾರಿ ಹಾಗಾಗುವುದಿಲ್ಲ. ಈ ಬಾರಿಯೂ ಯೋಗಿ ಆದಿತ್ಯನಾಥ್ ನಮ್ಮ ವಿರುದ್ಧ ವಾಗ್ದಾಳಿ ನಡೆಸಿದರೆ, ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ. ಅವರಿಗೆ ಅಲ್ಲೇ ಉತ್ತರ ನೀಡಲು ನಾವು ಸಿದ್ಧ ಎಂದಿದ್ದರು.

ಮುಖ್ಯಮಂತ್ರಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಶಾಜಿಲ್ ಇಸ್ಲಾಂ ಮತ್ತು ಪಕ್ಷದ ಇತರ ಕೆಲವು ನಾಯಕರ ವಿರುದ್ಧ ಎಫ್‌ಐಆರ್ ( FIR ) ದಾಖಲಿಸಲಾಗಿದೆ. ಅವರ ವಿರುದ್ಧ ಸೆಕ್ಷನ್ 504 (ಶಾಂತಿ ಕದಡುವುದು), 506 (ಬೆದರಿಕೆ) ಮತ್ತು 153ಎ (ಗಲಭೆಗಳನ್ನು ಪ್ರಚೋದಿಸುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಭೋಜಿಪುರ ( Bhojipur ) ಶಾಸಕನಾಗಿರುವ ಶಾಜಿಲ್, ತಮ್ಮ ಹೇಳಿಕೆಗಳನ್ನು ತಿರುಚಲಾಗಿದೆ ಎಂದು ತಿಳಿಸಿದ್ದು, ವೀಡಿಯೊ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ್ದಾರೆ.

ಈ ಕುರಿತಾಗಿ ಮಾತನಾಡಿರುವ ಬರೇಲಿ ಅಭಿವೃದ್ಧಿ ಪ್ರಾಧಿಕಾರದ ( bareilly development authority ) ಉಪಾಧ್ಯಕ್ಷ ಜೋಗೇಂದ್ರ ಸಿಂಗ್, "ಬರೇಲಿ-ದೆಹಲಿ ರಾಷ್ಟ್ರೀಯ ಹೆದ್ದಾರಿಯ ಪರ್ಸಖೇಡದಲ್ಲಿ ಪೆಟ್ರೋಲ್ ಪಂಪ್ ನಿರ್ಮಾಣವಾಗಿತ್ತು. ಅದನ್ನು ಬುಲ್ಡೋಜರ್ ಬಳಸಿ ಕೆಡವಲಾಗಿದೆ. ಎಸ್ ಪಿ ಶಾಸಕ ಶಾಜಿಲ್ ಇಸ್ಲಾಂ ಅವರ ಒಡೆತನದ ಪೆಟ್ರೋಲ್ ಪಂಪ್ ಇದಾಗಿದೆ. ಪಾಸಿಂಗ್ ಮ್ಯಾಪ್ ಇಲ್ಲದೆಯೇ ಪೆಟ್ರೋಲ್ ಪಂಪ್ ಅನ್ನು ಕಟ್ಟಲಾಗಿದೆ. ಈ ಕುರಿತಾಗಿ ಸಾಕಷ್ಟು ಬಾರಿ ನೋಟಿಸ್ ಅನ್ನು ಕೂಡ ಕಳುಹಿಸಲಾಗಿತ್ತು. ಆದರೆ, ಅವರಿಂದ ಯಾವುದೇ ಉತ್ತರವೂ ಬಂದಿರಲಿಲ್ಲ ಎಂದು ಹೇಳಿದ್ದಾರೆ. ಇನ್ನೊಂದೆಡೆ ಶಾಜಿಲ್, ಪೆಟ್ರೋಲ್ ಪಂಪ್ ನಿರ್ಮಾಣಕ್ಕೆ ನಿರಾಕ್ಷೇಪಣಾ ಪತ್ರವನ್ನು ಪಡೆಯಲಾಗಿತ್ತು ಎಂದಿದ್ದಾರೆ.

ಇನ್ನೊಂದೆಡೆ, ಕೈರಾಣದ ಎಸ್ ಪಿ ಶಾಸಕ ನಹೀದ್ ಹುಸೇನ್, ಶಾಮ್ಲಿ ಜಿಲ್ಲೆಯಲ್ಲಿ 10 ಭಿಗಾ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ಕಟ್ಟಿದ್ದರು. ಇದನ್ನೂ ಕೂಡ ಜಿಲ್ಲಾಡಳಿತ ಬುಲ್ಡೋಜರ್ ಬಳಸಿ ಕೆಡವಿ ಹಾಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಭಾರತ-ಆಫ್ರಿಕಾ ಫೈನಲ್ ಫೈಟ್ - ಟೆಸ್ಟ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌