ಪಿಎಫ್‌ಐ ರಾರ‍ಯಲಿಯಲ್ಲಿ ಬಾಲಕನಿಂದ ಹಿಂದೂ, ಕ್ರೈಸ್ತ ವಿರೋಧಿ ಘೋಷಣೆ!

Published : May 24, 2022, 09:02 AM ISTUpdated : May 24, 2022, 09:07 AM IST
ಪಿಎಫ್‌ಐ ರಾರ‍ಯಲಿಯಲ್ಲಿ ಬಾಲಕನಿಂದ ಹಿಂದೂ, ಕ್ರೈಸ್ತ ವಿರೋಧಿ ಘೋಷಣೆ!

ಸಾರಾಂಶ

* ಪುಟ್ಟ ಬಾಲಕನಿಂದ ಹಿಂದೂ ಮತ್ತು ಕ್ರೈಸ್ತರ ವಿರುದ್ಧ ಎಚ್ಚರಿಕೆ ಸ್ವರೂಪದ ಘೋಷಣೆ * ಗೌರವಯುತವಾಗಿದ್ದರೆ ನಮ್ಮ ಜಾಗದಲ್ಲಿ ನೀವು ಬಾಳಬಹುದು * ಇಲ್ಲದಿದ್ದರೆ ಆಹಾರ ಸಿದ್ಧವಾಗಿಡಿ, ಮನೆಗೆ ಯಮ ಬರುತ್ತಾನೆ!

ಅಲಪ್ಪುಳ(ಮೇ.24): ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಮುಸ್ಲಿಂ ಸಂಘಟನೆ ಕಳೆದ ಶನಿವಾರ ಇಲ್ಲಿ ಆಯೋಜಿಸಿದ್ದ ಬೃಹತ್‌ ರಾರ‍ಯಲಿ ವೇಳೆ ಪುಟ್ಟಬಾಲಕನೊಬ್ಬ ಹಿಂದೂ ಮತ್ತು ಕ್ರೈಸ್ತರ ವಿರುದ್ಧ ಎಚ್ಚರಿಕೆ ಸ್ವರೂಪದ ಘೋಷಣೆ ಕೂಗಿದ ಆತಂಕಕಾರಿ ಬೆಳವಣಿಗೆ ನಡೆದಿದೆ.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕು ಆಯೋಗದ ಮುಖ್ಯಸ್ಥೆ ಪ್ರಿಯಾಂಕಾ, ಮಕ್ಕಳನ್ನು ಇಂಥ ಕೃತ್ಯಗಳಿಗೆ ಬಳಸಿಕೊಳ್ಳುವುದು ಬಾಲಪರಾಧ ನ್ಯಾಯ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ಏನು ಘೋಷಣೆ?:

ರಾರ‍ಯಲಿಯಲ್ಲಿ ವ್ಯಕ್ತಿಯೊಬ್ಬನ ಹೆಗಲ ಮೇಲೆ ಕುಳಿತಿದ್ದ ಪುಟ್ಟಬಾಲಕನೊಬ್ಬ ‘ಆಹಾರವನ್ನು ಸಿದ್ಧಪಡಿಸಿಡಿ. ಯಮ ನಿಮ್ಮ ಮನೆ ಬಾಗಿಲಿಗೆ ಬರುತ್ತಾನೆ. ನೀವು ಇಲ್ಲಿ ಗೌರವಯುತವಾಗಿ ಬಾಳಿದರೆ, ನಮ್ಮ ಜಾಗದಲ್ಲಿ ವಾಸಿಸಬಹುದು. ಇಲ್ಲದೇ ಹೋದಲ್ಲಿ, ಏನಾಗುತ್ತದೆಯೋ ನಮಗೆ ಗೊತ್ತಿಲ್ಲ’ ಎಂದು ಹಿಂದೂ, ಕ್ರೈಸ್ತರ ವಿರುದ್ಧ ಘೋಷಣೆ ಕೂಗಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ಸಾಕಷ್ಟುಟೀಕೆಗೆ ಗ್ರಾಸವಾಗುತ್ತಲೇ ಪ್ರತಿಕ್ರಿಯಿಸಿರುವ ಪಿಎಫ್‌ಐ ವಕ್ತಾರ ರೌಫ್‌ ಪಟ್ಟಾಂಬಿ, ‘ನಾವು ಆಯೋಜಿಸಿದ್ದ ಸಮ್ಮೇಳನದಲ್ಲಿ ಈ ಘೋಷಣೆ ಕೂಗಿಲ್ಲ. ಅದನ್ನು ಕೂಗಿರುವುದು ಸಾವಿರಾರು ಜನ ಭಾಗಿಯಾಗಿದ್ದ ರಾರ‍ಯಲಿಯಲ್ಲಿ. ಜೊತೆಗೆ ಘೋಷಣೆ ಕೂಗಿದ್ದು ಕೂಡಾ ಹಿಂದೂ ಮತ್ತು ಕ್ರೈಸ್ತರ ವಿರುದ್ಧವಲ್ಲ. ಬದಲಾಗಿ ಹಿಂದುತ್ವವಾದಿ ಉಗ್ರರು ಮತ್ತು ಮತೀಯ ಶಕ್ತಿಗಳ ವಿರುದ್ಧ. ಕೆಲವರು ಹಿಂದೂ ಭಯೋತ್ಪಾದನೆ ವಿರುದ್ಧ ಘೋಷಣೆ ಕೂಗಿದ್ದಾರೆ. ಈ ವೇಳೆ ಬಾಲಕ ಕೂಡಾ ಅಂಥದ್ದೇ ಘೋಷಣೆ ಕೂಗಿದ್ದಾನೆ. ಅಲ್ಲಿ ಬಳಸಿದ ಕೆಲ ಪದಗಳ ಬಗ್ಗೆ ನಮಗೆ ವಿಷಾದವಿದೆ’ ಎಂದು ಸಮಜಾಯಿಷಿ ನೀಡುವ ಯತ್ನ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್