ದೆಹಲಿ ಸಿಎಂ ಸ್ಥಾನದಿಂದ ಅರವಿಂದ್‌ ಕೇಜ್ರಿವಾಲ್‌ ವಜಾ ಮಾಡಿ: ಹೈಕೋರ್ಟ್‌ಗೆ ಪಿಐಎಲ್‌ ಅರ್ಜಿ

Published : Mar 22, 2024, 05:01 PM ISTUpdated : Mar 22, 2024, 05:21 PM IST
ದೆಹಲಿ ಸಿಎಂ ಸ್ಥಾನದಿಂದ ಅರವಿಂದ್‌ ಕೇಜ್ರಿವಾಲ್‌ ವಜಾ ಮಾಡಿ: ಹೈಕೋರ್ಟ್‌ಗೆ ಪಿಐಎಲ್‌ ಅರ್ಜಿ

ಸಾರಾಂಶ

ಅಕ್ರಮ ಮದ್ಯನೀತಿ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ನವದೆಹಲಿ (ಮಾ.22): ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಗುರುವಾ ಬಂಧಿಸಿದೆ. ಅರವಿಂದ್‌ ಕೇಜ್ರಿವಾಲ್‌ ಅವರ ವಿಚಾರಣೆ ಬಾಕಿ ಇದೆ. ಈ ಕಾರಣಕ್ಕೆ 10 ದಿನ ಕಾಲ ಬಂಧನ ಕೋರಿ ಇಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪ್ರಸ್ತುತ ನಗರದ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ ನಡೆಯುತ್ತಿದೆ. ರೈತ ಮತ್ತು ಸಮಾಜ ಸೇವಕ ಎಂದು ಹೇಳಿಕೊಳ್ಳುವ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಎಂಬುವವರು ಈ ಮನವಿಯನ್ನು ಸಲ್ಲಿಸಿದ್ದಾರೆ. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯನ್ನು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಬಿಡಬಾರದು ಎಂದು ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಈ ಹುದ್ದೆಯಲ್ಲಿ ಮುಂದುವರಿಯುವುದರಿಂದ ಕಾನೂನು ಪ್ರಕ್ರಿಯೆಗೆ ಅಡ್ಡಿಯುಂಟಾಗುತ್ತದೆ ಮತ್ತು ನ್ಯಾಯದ ಹಾದಿಯನ್ನು ಬಹುತೇಕವಾಗಿ ಅಡ್ಡಿಪಡಿಸುತ್ತದೆ.  ಅದಲ್ಲದೆ, ಇದು ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಗಳ ಸ್ಥಗಿತಕ್ಕೆ ಕಾರಣವಾಗಬಹುದು ಎಂದು ಯಾದವ್‌ ಹೇಳಿದ್ದಾರೆ. ಸೆರೆವಾಸದ ಕಾರಣದಿಂದಾಗಿ ಭಾರತದ ಸಂವಿಧಾನದ ಆರ್ಟಿಕಲ್ 163 ಮತ್ತು 164 ಅನ್ನು ಅವರು ಪೂರೈಸೋದಿಲ್ಲ ಎಂದಿದ್ದಾರೆ.

ಸ್ವಯಂ ಕೃತ್ಯವೇ ಕೇಜ್ರಿವಾಲ್‌ಗೆ ಮುಳುವು, ದೆಹಲಿ ಸಿಎಂ ಬಂಧನ ಕುರಿತು ಅಣ್ಣ ಹಜಾರೆ ಪ್ರತಿಕ್ರಿಯೆ!

ಬಂಧಿತರಾಗಿರುವ ಪ್ರತಿವಾದಿಯು ಮುಖ್ಯಮಂತ್ರಿ ಕಚೇರಿಯನ್ನು ಹೊಂದಿದ್ದಾರೆ. ಅವರು ಕಸ್ಟಡಿಯಲ್ಲಿರುವ ಕಾರಣ ಸಾರ್ವಜನಿಕ ಸೇವಕರಾಗಿ ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ನಿವರ್ಹಿಸೋದು ಸಾಧ್ಯವಾಗೋದಿಲ್ಲ. ಈ ಕಾರಣಕ್ಕಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಬಿಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ನಡುವೆ ಆಮ್‌ ಆದ್ಮಿ ಪಕ್ಷದ ನಾಯಕರು ಕೇಜ್ರಿವಾಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಮತ್ತು ಅಗತ್ಯವಿದ್ದರೆ ಅವರು ಜೈಲಿನಿಂದಲೇ ಸರ್ಕಾರವನ್ನು ನಡೆಸುತ್ತಾರೆ ಎಂದು ಹೇಳಿದ್ದಾರೆ. ಜೈಲಿನಲ್ಲಿರುವ ಮುಖ್ಯಮಂತ್ರಿಯೊಬ್ಬರು ಕಾನೂನು ವಿಧಿಸುವ ಯಾವುದೇ ವ್ಯವಹಾರವನ್ನು ನಡೆಸಲು ಅಸಮರ್ಥರಾಗಿರುತ್ತಾರೆ. ಹಾಗೆ ಮಾಡಲು ಅನುಮತಿಸಿದರೆ, ಯಾವುದೇ ವಸ್ತುವಿನ ರಹಸ್ಯವನ್ನು ಲೆಕ್ಕಿಸದೆ, ಜೈಲು ಅಧಿಕಾರಿಗಳು ಅದನ್ನು ತಲುಪುವ ಮೊದಲು ಅದನ್ನು ಸಂಪೂರ್ಣವಾಗಿ ಸ್ಕ್ಯಾನ್ ಮಾಡಬೇಕಾಗುತ್ತದೆ ಎಂದು ಯಾದವ್ ಹೇಳಿದ್ದಾರೆ.   ಕೇಜ್ರಿವಾಲ್ ಹಾಗೇನಾದರೂ ಇದೇ ಸ್ಥಾನದಲ್ಲಿ ಮುಂದುವರಿದಲ್ಲಿ ಸಂವಿಧಾನದ ಮೂರನೇ ಶೆಡ್ಯೂಲ್ ಅಡಿಯಲ್ಲಿ ಸಿಎಂಗೆ ಬೋಧಿಸಲಾದ ಗೌಪ್ಯತೆಯ ಪ್ರಮಾಣವಚನದ ನೇರ ಉಲ್ಲಂಘನೆಯಾಗಿದೆ ಎಂದಿದ್ದಾರೆ.

ಕೇಜ್ರಿವಾಲ್ ಬಂಧನ ಬಳಿಕ ಸಚಿವ ಆಪ್ ಸಚಿವ ಸೌರಬ್ ಭಾರದ್ವಾಜ್, ಅತೀಶ್ ಪೊಲೀಸ್ ವಶಕ್ಕೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!