ಸಚಿವ ರಾಮವಿಲಾಸ್ ಪಾಸ್ವಾನ್ ನಿಧನದ ಹಿನ್ನಲೆ ಸಚಿವ ಪಿಯುಶ್ ಗೊಯಲ್‌ಗೆ ಹೆಚ್ಚುವರಿ ಹೊಣೆ

Suvarna News   | Asianet News
Published : Oct 09, 2020, 01:58 PM ISTUpdated : Oct 09, 2020, 05:56 PM IST
ಸಚಿವ ರಾಮವಿಲಾಸ್ ಪಾಸ್ವಾನ್ ನಿಧನದ ಹಿನ್ನಲೆ ಸಚಿವ ಪಿಯುಶ್ ಗೊಯಲ್‌ಗೆ ಹೆಚ್ಚುವರಿ ಹೊಣೆ

ಸಾರಾಂಶ

ಸಚಿವ ರಾಮವಿಲಾಸ್ ಪಾಸ್ವಾನ್ ನಿಧನದ ಹಿನ್ನಲೆ ಸಚಿವ ಪಿಯುಶ್ ಗೊಯಲ್ ಗೆ ಹೆಚ್ಚುವರಿ ಹೊಣೆ | ರಾಷ್ಟ್ರಪತಿ ಭವನದ ಪ್ರಕಟಣೆ | ಆಹಾರ ಮತ್ತು ಗ್ರಾಹಕ ವ್ಯವಹಾರ ಗಳ ಇಲಾಖೆ ಪಿಯುಶ್ ಗೊಯಲ್ ಗೆ ಹೊಣೆ

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದ್ದು, ಆಹಾರ ಮತ್ತು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಜವಾಬ್ದಾರಿ ನೀಡಲಾಗಿದೆ. ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಾರಾದ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಷ್ಟ್ರಪತಿ ಭವನ ಈ ಪ್ರಕಟಣೆ ಹೊರಡಿಸಿದೆ.

ಪ್ರಸ್ತುತ ರೈಲ್ವೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಪಿಯೂಷ್ ಗೋಯಲ್ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯನ್ನು ನೋಡಿಕೊಳ್ಳುತ್ತಿದ್ದಾರೆ. ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷದ ಫೌಂಡರ್ ರಾಮ್ ವಿಲಾಸ್ ಪಾಸ್ವಾನ್ 74ನೇ ವಯಸ್ಸಿನಲ್ಲಿ ಗುರುವಾರ ನಿಧನರಾಗಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ

ಅವರ ಪುತ್ರ ಚಿರಾಗ್ ಪಾಸ್ವಾನ್ ಈ ವಿಚಾರವನ್ನು ಟ್ವಿಟರ್ ಮೂಲಕ ತಿಳಿಸಿದ್ದರು. ಪಾಸ್ವಾನ್ ಅವರಿಗೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಹಾರ್ಟ್ ಸರ್ಜರಿ ಮಾಡಲಾಗಿತ್ತು. ಅವರು ಆಹಾರ ಮತ್ತು ಗ್ರಾಹಕ ವ್ಯವಹಾರ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಪಾಸ್ವಾನ್ ಭಾಷಣದಿಂದಲೇ ಸಿಕ್ಕಿತ್ತು ದಲಿತಗೆ ಸ್ವಾಮೀಜಿ ಪಟ್ಟ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದೇಗುಲ ಪ್ರವೇಶಿಸುವುದಿಲ್ಲ ಎಂದ ಕ್ರಿಶ್ಚಿಯನ್ ಮಿಲಿಟರಿ ಅಧಿಕಾರಿಯ ಅಮಾನತು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ ಹೇಳಿದ್ದೇನು?
ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ