ಹಿಂದೂ ಧರ್ಮ ನಾಶ ಮಾಡಿ ಪ್ರಧಾನಿ ಮೋದಿ ಕೊಲ್ಲುತ್ತೇನೆ; ಬೆದರಿಕೆ ಹಾಕಿದ ಹಕೀಮ್‌ಗಾಗಿ ಹುಡುಕಾಟ!

Published : Aug 09, 2023, 04:42 PM IST
ಹಿಂದೂ ಧರ್ಮ ನಾಶ ಮಾಡಿ ಪ್ರಧಾನಿ ಮೋದಿ ಕೊಲ್ಲುತ್ತೇನೆ; ಬೆದರಿಕೆ ಹಾಕಿದ ಹಕೀಮ್‌ಗಾಗಿ ಹುಡುಕಾಟ!

ಸಾರಾಂಶ

ಭಾರತದಲ್ಲಿ ಸರಣಿ ಬಾಂಬ್ ಸ್ಫೋಟ ಮಾಡುತ್ತೇನೆ. ಸಂಪೂರ್ಣವಾಗಿ ಹಿಂದೂ ಧರ್ಮವನ್ನು ನಾಶ ಮಾಡಿ, ಪ್ರಧಾನಿ ಮೋದಿಯನ್ನು ಕೊಲ್ಲುತ್ತೇನೆ ಎಂದು ಅನ್ಯ ಧರ್ಮದ ವೆಸ್‌ಸೈಟ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಬೆದರಿಕೆ ಹಾಕಿದ ಎಂಎ ಹಕೀಮ್ ನಾಪತ್ತೆಯಾಗಿದ್ದಾನೆ.

ಪುಣೆ(ಆ.09) ಕೋಮು ಸಂಘರ್ಷದಿಂದ ದೇಶದ ಕೆಲ ಭಾಗದಲ್ಲಿ ಭಾರಿ ಹಿಂಸಾಚಾರ ನಡೆದಿದೆ. ಕೆಲವು ಪ್ರದೇಶದಲ್ಲಿ ನಿರ್ಬಂಧಗಳು ಸಡಿಲಗೊಂಡಿಲ್ಲ. ಇದೀಗ ಪ್ರಚೋದನಕಾರಿ ಹೇಳಿಕೆ, ಪೋಸ್ಟ್‌ಗಳು ಹೆಚ್ಚಾಗುತ್ತಿದೆ. ಇದೀಗ ಎಂಎ ಹಕೀಮ್ ಅನ್ನೋ ವ್ಯಕ್ತಿಯೊಬ್ಬ, ಧಾರ್ಮಿಕ ವೆಬ್‌ಸೈಟ್‌ನಲ್ಲಿ ಬೆದರಿಕೆ ಹಾಕಿ ನಾಪತ್ತೆಯಾಗಿದ್ದಾನೆ. ನಾನು ಭಾರತದಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ತಯಾರಿ ನಡೆಸುತ್ತಿದ್ದೇನೆ. ಹಿಂದೂ ಧರ್ಮವನ್ನೇ ನಾಶ ಮಾಡಿ, ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದೇ ನನ್ನ ಗುರಿ ಎಂದು ವೆಬ್‌ಸೈಟ್‌ನಲ್ಲಿ ಹೇಳಿದ್ದಾನೆ. ಪುಣೆ ಮೂಲದ ಹಕೀಮ್ ವಿರುದ್ಧ ಪ್ರಕರಣ ದಾಖಲಾಗಿದೆ. 

ನನಗೆ ಕೆಲ ಭಯೋತ್ಪಾದಕ ಸಂಘಟನೆಗಳು ಹಣಕಾಸಿನ ನೆರವು ನೀಡುತ್ತಿದೆ. ಈಗಾಗಲೇ ತಯಾರಿಗಳು ನಡೆದಿದೆ. ಭಾರತದಲ್ಲಿ ಸರಣಿ ಬಾಂಬ್ ಸ್ಫೋಟ ನಡೆಸುತ್ತೇನೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುವುದೇ ನನ್ನ ಗುರಿಯಾಗಿದೆ. ಇದರ ಜೊತೆಗೆ ಭಾರತದಲ್ಲಿ ಹಿಂದೂ ಧರ್ಮವನ್ನು ನಾಶ ಮಾಡುತ್ತೇನೆ ಎಂದು ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ.

 

ಎನ್‌ಐಎ ತನಿಖೆ ವೇಳೆ ಶಾಕ್, ಮಂಗ್ಳೂರು ಕುಕ್ಕರ್‌ ಬಾಂಬ್‌ ಕಿಂಗ್‌ಪಿನ್‌ ಬೆಳಗಾವಿ ಲಷ್ಕರ್‌ ಉಗ್ರ!

ವೆಬ್‌ಸೈಟ್‌ನಲ್ಲಿ ಹಾಕಿರುವ ಈ ಪೋಸ್ಟ್ ಭಾರಿ ವೈರಲ್ ಆಗುತ್ತಿದ್ದಂತೆ ರಾಹುಲ್ ದುಧಾನೆ ಅನ್ನೋ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಕೃತ್ಯದ ಹಿಂದೆ ಎಂಎ ಹಕೀಮ್ ಕೈವಾಡವಿದೆ ಅನ್ನೋದನ್ನು ಪೊಲೀಸರು ಬಹಿಂಗಪಡಿಸಿದ್ದಾರೆ. ಇನ್ನು ನಚಿಖೆ ಚುರುಕುಗೊಳಿಸಿರುವ ಪೊಲೀಸರಿಗೆ ಅಚ್ಚರಿ ಕಾದಿದೆ. ಕಾರಣ ಈ ಪೋಸ್ಟ್ ಹಾಕಿದ ಐಪಿ ವಿಳಾಸ ವಿದೇಶದಲ್ಲಿದೆ. ಹೀಗಾಗಿ ಇಂದೊಂದು ದೊಡ್ಡ ಷಡ್ಯಂತ್ರದ ಭಾಗವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪುಣೆಯ ಅಲಂಕಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಎಂಎ ಹಕೀಮ್ ವಿರುದ್ದ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

 

ಎನ್‌ಐಎ ಅಧಿಕಾರಿಗಳೆದುರೇ ಪೊಲೀಸರಿಂದ ಜೈಲು ಸಿಬ್ಬಂದಿಗೆ ತರಾಟೆ!

ಪ್ರಧಾನಿ ಮೋದಿಗೆ ಹಲವು ಬಾರಿ ಬೆದರಿಕೆ ಸಂದೇಶಗಳು, ಕರೆಗಳು ಬಂದಿದೆ. ಹೀಗಾಗಿ ಮೋದಿ ಭದ್ರತೆ ಮೇಲೆ ನಿಗಾವಙಿಸಲಾಗುತ್ತಿದೆ. ಈ ವರ್ಷದ ಎಪ್ರಿಲ್ ತಿಂಗಳಲ್ಲಿ ಮೋದಿ, ಕೇರಳ ಭೇಟಿ ವೇಳೆಯೂ ಇದೇ ರೀತಿಯ ಬೆದರಿಕೆ ಬಂದಿತ್ತು. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇರಳಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೇಲೆ ಆತ್ಮಾಹುತಿ ಬಾಂಬ್‌ ದಾಳಿ ನಡೆಸುವುದಾಗಿ ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಮಲಯಾಳ ಭಾಷೆಯಲ್ಲಿ ಈ ಬೆದರಿಕೆ ಪತ್ರ ರವಾನಿಸಲಾಗಿತ್ತು. ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್‌ ಅವರ ಕಚೇರಿಗೆ ಈ ಪತ್ರ ರವಾನಿಸಲಾಗಿತ್ತು. ಈ ಪತ್ರವನ್ನು ಪೊಲೀಸರಿಗೆ ನೀಡಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪೌರತ್ವಕ್ಕೂ ಮುನ್ನ ಮತಪಟ್ಟೀಲಿ ಹೆಸರು : ಸೋನಿಯಾಗೆ ನೋಟಿಸ್‌
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ