ಕೊರೋನಾ ಸೋಂಕಿಗೆ ಪ್ರಧಾನಿ ಮೋದಿ ಚಿಕ್ಕಮ್ಮ ಬಲಿ!

By Suvarna News  |  First Published Apr 28, 2021, 12:12 PM IST

ಕೊರೋನಾ ಸೋಂಕಿಗೆ ತುತ್ತಾಗಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ| ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದ ನರ್ಮಾದಾಬೆನ್


ಅಹ್ಮದಾಬಾದ್‌(ಏ.28): ಕೊರೋನಾ ಸೋಂಕಿಗೆ ತುತ್ತಾಗಿ ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ನರ್ಮದಾಬೆನ್‌ ಮೋದಿ (80) ಅವರು ಮಂಗಳವಾರ ಕೋವಿಡ್‌ಗೆ ಬಲಿಯಾಗಿದ್ದಾರೆ.

ನರ್ಮದಾ ಬೆನ್‌, ಪ್ರಧಾನಿ ಮೋದಿ ತಂದೆ ದಾಮೋದರ ದಾಸ್‌ ಅವರ ತಮ್ಮನ ಪತ್ನಿ. ‘ಕೋರೋನಾ ದೃಢಪಟ್ಟ ಬಳಿಕ ಪರಿಸ್ಥಿತಿ ಗಂಭೀರವಾಗಿ ಚಿಕ್ಕಮ್ಮ 10 ದಿನಗಳ ಹಿಂದೆ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಕೊನೆಯುಸಿರೆಳೆದರು’ ಎಂದು ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ತಿಳಿಸಿದ್ದಾರೆ.

Tap to resize

Latest Videos

undefined

ಆಮ್ಲಜನಕ ಪೂರೈಕೆ ಬಗ್ಗೆ ಮೋದಿ, ಶಾ ಮೇಲ್ವಿಚಾರಣೆ

ಕೊರೋನಾ ಸಾಂಕ್ರಾಮಿಕವನ್ನು ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಂಗಳವಾರ 200 ಪುಟಗಳ ಪ್ರಮಾಣಪತ್ರ ಸಲ್ಲಿಸಿದೆ. ಯಾವುದೇ ದೇಶದಲ್ಲಾದರೂ ಅನಿಯಮಿತ ವೈದ್ಯಕೀಯ ಆಮ್ಲಜನಕ ಪೂರೈಕೆ ಅಸಾಧ್ಯ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರೇ ಖುದ್ದಾಗಿ ಆಮ್ಲಜನಕ ಉತ್ಪಾದನೆ ಹಾಗೂ ಪೂರೈಕೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಲಭ್ಯವಿರುವ ಎಲ್ಲಾ ಮೂಲಗಳಿಂದ ಆಮ್ಲಜನಕವನ್ನು ಉತ್ಪಾದಿಸಲಾಗುತ್ತಿದ್ದು, ಅಗತ್ಯವಿರುವ ರಾಜ್ಯಗಳಿಗೆ ಆಮ್ಲಜಕನ ಪೂರೈಕೆಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"

click me!