ಪ್ರಧಾನಿ ಅಭ್ಯರ್ಥಿಯಾಗ್ತಾರ ರಾಹುಲ್ ಗಾಂಧಿ? INDIA ಸಭೆಯಲ್ಲೇ ಮಮತಾ ಬ್ಯಾನರ್ಜಿ ಗೂಗ್ಲಿ

Published : Sep 30, 2026, 07:58 PM IST
Rahul Gandhi Mamata Banerjee

ಸಾರಾಂಶ

2029ರ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿಯನ್ನು ಮಿತ್ರ ಪಕ್ಷಗಳು ಒಪ್ಪಿಕೊಳ್ಳುತ್ತಾ? ಈ ಪ್ರಶ್ನೆಗೆ ಸಭೆಯಲ್ಲೇ ಮಮತಾ ಬ್ಯಾನರ್ಜಿ ಹೇಳಿದ್ದೇನು?

ನವದೆಹಲಿ (ಸೆ.30) ಹರಿದು ಹಂಚಿಹೋಗಿದ್ದ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಇದೀಗ ಚುನಾವಣಾ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ದದ ಹೋರಾಟದಲ್ಲಿ ಒಂದಾಗುತ್ತಿದೆ. ಇಂದು (ಸೆ.20) ದೆಹಲಿಯಲ್ಲಿ ನಡೆಗ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಟಿಎಂಸಿ ಮಾತುಕತೆ ನಡೆಸಿದೆ. ಈ ವೇಳೆ 2029ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟ ಪ್ರಧಾನಿ ಅಭ್ಯರ್ಥಿಯಾಗ್ತಾರ ಅನ್ನೋ ಪ್ರಶ್ನೆ ಎದುರಾಗಿದೆ. ಈ ಕುರಿತು ಮಮತಾ ಬ್ಯಾನರ್ಜಿ ನೀಡಿದ ಉತ್ತರ ಇಂಡಿಯಾ ಒಕ್ಕೂಟ ಭವಿಷ್ಯದ ಸೂಚನೆ ನೀಡುತ್ತಿದೆ.

ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ?

ಮಮತಾ ಬ್ಯಾನರ್ಜಿ ಮುಂಬರುವ ಲೋಕಸಭಾ ಚುನಾವಣೆಗೆ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗುತ್ತಾರಾ ಅನ್ನೋ ಪ್ರಶ್ನೆಗೆ ಉತ್ತರಿಸಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ನಾಯಕತ್ವದ ವಿಚಾರದಲ್ಲಿ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಲು ಟಿಎಂಸಿ ಹಾಗೂ ಹಲವು ಮಿತ್ರ ಪಕ್ಷಗಳು ತಯಾರಿಲ್ಲ. ರಾಹುಲ್ ಗಾಂಧಿ ಬಿಟ್ಟು ಬೇರೆ ನಾಯಕರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಲು ಕಾಂಗ್ರೆಸ್ ಸಿದ್ಧವಿಲ್ಲ. ಹೀಗಾಗಿ ಪ್ರಶ್ನೆ ಉತ್ತರಿಸಿದ ಮಮತಾ ಬ್ಯಾನರ್ಜಿ, ನಾಳೆ ಸುದ್ದಿಗೋಷ್ಠಿ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿ ಸಾಗಿದ್ದಾರೆ.

ವ್ಯಾನಿಶ್ ಕುಮಾರ್ ಎಂದ ಮಮತಾ ಬ್ಯಾನರ್ಜಿ

ಚನಾವಣಾ ಆಯೋಗ, ಮತದಾರರ ಪಟ್ಟಿ ಪರಿಷ್ಕರಣೆ ವಿರುದ್ದ ಮಮತಾ ಬ್ಯಾನರ್ಜಿ ಸತತವಾಗಿ ಹೋರಾಟ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಪ್ರಕ್ರಿಯೆ ವೇಳೆ ಮಮತಾ ಬ್ಯಾನರ್ಜಿ ಸರ್ಕಾರ ಅಧಿಕಾರದಲ್ಲಿತ್ತು. ಈ ವೇಳೆ ಸುಪ್ರೀಂ ಕೋರ್ಟ್ ನಿರ್ದೇಶದ ಮೇರೆ ಜಿಲ್ಲಾ ನ್ಯಾಯಾಧೀಶರನ್ನೊಳಗೊಂಡ ಸಮಿತಿ ಮೇಲ್ವಿಚಾರಣೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆದಿತ್ತು. ಅಂದು ಮಮತಾ ಬ್ಯಾನರ್ಜಿ ಸರ್ಕಾರ ಎಸ್ಐಆರ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಗ್ಯಾನೇಶ್ ಕುಮಾರ್ ವಿರುದ್ದ ಹರಿಹಾಯ್ದಿದ್ದರು. ಇದೀಗ ಗ್ಯಾನೇಶ್ ಕುಮಾರ್ ವಿರುದ್ದ ಮಮತಾ ಬ್ಯಾನರ್ಜಿ ಹೋರಾಟ ಮುಂದುವರಿಸಿದ್ದಾರೆ. ಆತ ಗ್ಯಾನೇಶ್ ಕುಮಾರ್ ಅಲ್ಲ,ವ್ಯಾನಿಶ್ ಕುಮಾರ್, ಅಮಾಯಕ ಮತದಾರರು, ಪಕ್ಷಗಳನ್ನು ವ್ಯಾನಿಶ್ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಮತ ದೋಚಿದ ಆಯೋಗ

ಮತದಾರರ ಪಟ್ಟಿ ಪರಿಷ್ಕರಣೆ, ಮತ ಕಳ್ಳತನವಾಗಿದೆ. ದೇಶದ ಮತದಾರರನ್ನು ಪಟ್ಟಿಯಿಂದ ತೆಗೆದು ತಮಗೆ ಬೇಕಾದವರ ಹೆಸರು ಉಳಿಸಿಕೊಂಡು ಮತದಾನದ ಹಕ್ಕನ್ನೇ ಕಸಿದುಕೊಂಡಿದ್ದಾರೆ. ಚುನಾವಣಾ ಮುಖ್ಯ ಆಯುಕ್ತ ಗ್ಯಾನೇಶ್ ಕುಮಾರ್ ವೋಟ್ ಲೂಟ್ ಮಾಡಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಿಯೋ 10ನೇ ವಾರ್ಷಿಕೋತ್ಸವ ಸಂಭ್ರಮ, 6 ತಿಂಗಳ ರೀಚಾರ್ಜ್ ಉಚಿತ, ಜಿಯೋ ಭಾರತ್ 4ಜಿ ಆಫರ್
ಕಾರಿನ ಮೇಲೆ ‘POLICE’ ಸ್ಟಿಕ್ಕರ್, ಆದರೆ ಮಾಡಿದ್ದು ಏನು ಗೊತ್ತಾ? ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ವಿಚಿತ್ರ ಘಟನೆ..!