ದೇಶಾದ್ಯಂತ ಆಮ್ಲಜನಕ ಉತ್ಪಾದನ ಘಟಕ ಸ್ಥಾಪನೆ; PM ಕೇರ್ಸ್ ಫಂಡ್‌ ಟ್ರಸ್ಟ್‌ ಘೋಷಣೆ!

By Suvarna NewsFirst Published Jan 5, 2021, 6:53 PM IST
Highlights

ದೇಶದದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನ ಘಟಕ ಸ್ಥಾಪಿಸಲು ಪ್ರಧಾನ ಮಂತ್ರಿ ಕೇರ್ಸ್ ಫಂಡ್ ಮಹತ್ವದ ಘೋಷಣೆ ಮಾಡಿದೆ. ಇದಕ್ಕಾಗಿ 201 ಕೋಟಿ ರೂಪಾಯಿ ವಿನಿಯೋಗಿಸಲು ಸಜ್ಜಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.
 

ನವದೆಹಲಿ(ಜ.5):  ದೇಶದಲ್ಲಿನ ಎಲ್ಲರಿಗೂ ಸೂಕ್ತ ಚಿಕಿತ್ಸೆ ಸಿಗುವಂತಾಗಲು ಹಲವು ಸುಧಾರಣೆಗಳು ನಡೆಯುತ್ತಿದೆ. ಇದೀಗ ಪ್ರಧಾನ ಮಂತ್ರಿ ಕೇರ್ಸ್ ಫಂಡ್ ಮೂಲಕ ದೇಶಾದ್ಯಂತ ಮೆಡಿಕಲ್ ಆಕ್ಸಿಜನ್ ಪ್ಲಾಸ್ಮೋಡಿಯಂ ಸ್ಥಾಪನೆಗೆ ನಿರ್ಧರಿಸಲಾಗಿದೆ.  ದೇಶದಲ್ಲಿ ಸಾರ್ವಜನಿಕ ಆರೋಗ್ಯ ಸೌಲಭ್ಯಗಳ ಮಟ್ಟವನ್ನು ಸುಧಾರಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ತಮ್ಮ ಉಳಿತಾಯದ 2.25 ಲಕ್ಷ ರೂ. ಪಿಎಂ ಕೇರ್ಸ್‌ ಫಂಡ್‌ಗೆ ದಾನ ಮಾಡಿದ ಮೋದಿ!.

ಬರೋಬ್ಬರಿ 201 ಕೋಟಿ ರೂಪಾಯಿ ವೆಚ್ಚದಲ್ಲಿ ದೇಶಾದ್ಯಂತ ಆಮ್ಲಜನಕ ಉತ್ಪಾದನೆ ಘಟಕ ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ.  ಈ ಯೋಜನೆ ಮೂಲಕ ಒಟ್ಟು 162 ಪ್ಲಾಂಟ್ ಸ್ಥಾಪಿಸಲಾಗುತ್ತಿದೆ. ಕರ್ನಾಟಕದಲ್ಲಿ 6 ಘಟಕ ಸ್ಥಾಪನೆಯಾಗಲಿದೆ. ಒಟ್ಟು 154 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದಿಸಲು ಯೋಜನೆ ರೂಪಿಸಲಾಗಿದೆ. ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಸ್ಮೋಡಿಯಂ ಸ್ಥಾಪನೆ ಮಾಡಲಾಗುತ್ತಿದೆ.

PM ಕೇರ್ಸ್ ಫಂಡ್‌ನಿಂದ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ಹಣ ವರ್ಗಾವಣೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಒಟ್ಟು ಯೋಜನಾ ವೆಚ್ಚವು ಸಿಎಮ್‌ಎಸ್‌ಎಸ್‌ನ ನಿರ್ವಹಣಾ ಶುಲ್ಕಗಳ 137.33 ಕೋಟಿ ರೂಪಾಯಿ. ಇನ್ನು ವಾರ್ಷಿಕ ನಿರ್ವಹಣೆ ಒಪ್ಪಂದಕ್ಕೆ ಸುಮಾರು 64.25 ಕೋಟಿ ರೂ ನಿಗದಿಪಡಿಸಲಾಗಿದೆ. ಈ ಮೂಲಕ ಒಟ್ಟು 201 ಕೋಟಿ ರೂಪಾಯಿ ಯೋಜನೆ ಘೋಷಿಸಲಾಗಿದೆ.

ಕೊರೋನಾ ವೈರಸ್ ವಕ್ಕರಿಸಿದ ಬಳಿಕ ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಸಿಲಿಂಡರ್ ಸಮಸ್ಯೆ ಗಂಭೀರವಾಗಿ ತಲೆದೋರಿತ್ತು. ಹೀಗಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ವೈದ್ಯಕೀಯ ಆಮ್ಲಜನಕದ ಲಭ್ಯತೆಯ ದೀರ್ಘಕಾಲೀನ ವ್ಯವಸ್ಥಿತ ವೃದ್ಧಿಗೆ ಅನುವು ಮಾಡಿಕೊಡುತ್ತದೆ.
 

click me!