
ನವದೆಹಲಿ (ಜುಲೈ 4, 2023): ಕೇಂದ್ರ ಸಚಿವ ಸಂಪುಟ ಪುನಾರಚನೆಯ ಬಗ್ಗೆ ವದಂತಿಗಳು ಹಬ್ಬಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ಎಲ್ಲಾ 79 ಸಚಿವರ ಜೊತೆಗೆ ಸಭೆ ನಡೆಸಿದರು. ಈ ವೇಳೆ ಹಲವು ಸಚಿವರು ತಾವು ಕೈಗೊಂಡಿರುವ ಕೆಲಸಗಳ ಪ್ರಗತಿ ವರದಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮೋದಿ, ಚುನಾವಣೆ ಇನ್ನು 9 ತಿಂಗಳಲ್ಲಿ ಬರಲಿದೆ. ಕಳೆದ 9 ವರ್ಷದಲ್ಲಿ ಮಾಡಿದ ಸಾಧನೆಯನ್ನು ಇನ್ನು 9 ತಿಂಗಳಲ್ಲಿ ಜನರಿಗೆ ತಿಳಿಸಿ ಎಂದು ಸೂಚಿಸಿದರು ಎಂದು ಮೂಲಗಳು ಹೇಳಿವೆ. ಇದೇ ವೇಳೆ 2047ರ ವೇಳೆಗೆ ದೇಶ ಸಾಧಿಸಬಹುದಾದ ಪ್ರಗತಿಯ ವಿವರಣೆಯನ್ನೂ ಸಭೆಯಲ್ಲಿ ನೀಡಲಾಯಿತು ಎಂದು ಅವು ಹೇಳಿವೆ.
ಇದನ್ನು ಓದಿ: ಸಂಪುಟ ಪುನಾರಚನೆ ಗುಸುಗುಸು ಮಧ್ಯೆ ಇಂದು ಮೋದಿ ಮಂತ್ರಿಮಂಡಲ ಸಭೆ: ಎನ್‌ಸಿಪಿ ಪ್ರಫುಲ್ ಪಟೇಲ್‌ಗೆ ಮಂತ್ರಿಗಿರಿ?
ಇನ್ನು, ಈ ಸಂಬಂಧ ಸೋಮವಾರ ರಾತ್ರಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ‘’ಮಂತ್ರಿ ಮಂಡಳಿಯೊಂದಿಗೆ ಫಲಪ್ರದ ಸಭೆ ನಡೆದಿದ್ದು, ಅಲ್ಲಿ ನಾವು ವೈವಿಧ್ಯಮಯ ನೀತಿ ಸಂಬಂಧಿತ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ’’ ಎಂದಿದ್ದು, ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2024ರ ಲೋಕಸಭೆ ಚುನಾವಣೆ ಹಾಗೂ ಈ ವರ್ಷ 5 ರಾಜ್ಯಗಳ ವಿಧಾನಸಭೆ ಚುನಾವಣೆ ನಡೆವ ಹಿನ್ನೆಲೆಯಲ್ಲಿ ಈ ಸಭೆ ಸಾಕಷ್ಟು ಮಹತ್ವ ಪಡೆದಿದ್ದು, ಸಂಪುಟ ಬದಲಾವಣೆ, ಪಕ್ಷ ಸಂಘಟನೆ, ಚುನಾವಣೆಯ ರಣತಂತ್ರದ ಬಗ್ಗೆ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಪ್ರತಿ ವರ್ಷ ಪ್ರತಿ ರೈತನಿಗೆ 50 ಸಾವಿರ, ಇದುವೇ ಮೋದಿ ಗ್ಯಾರಂಟಿ: ಕಾಂಗ್ರೆಸ್ ಗ್ಯಾರಂಟಿಗೆ ಪ್ರಧಾನಿ ಮೋದಿ ಟಾಂಗ್
ಅಲ್ಲದೇ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಆಧರಿಸಿ ವಿಪಕ್ಷಗಳು ಟೀಕೆ ಮಾಡಬಹುದು ಎಂಬ ಕಾರಣಕ್ಕೆ ಈ ಕುರಿತಾಗಿ ತಂತ್ರಗಳನ್ನು ಹೆಣೆಯಲಾಗಿದೆ. ಅಲ್ಲದೇ ಕೇಂದ್ರ ಸಂಪುಟದಲ್ಲಿ ಹಲವು ಬದಲಾವಣೆ ಜೊತೆಗೆ ವಿವಿಧ ರಾಜ್ಯಗಳಲ್ಲಿನ ಪಕ್ಷದ ಅಧ್ಯಕ್ಷ ಹುದ್ದೆ, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವು ಸಂಘಟನಾತ್ಮಕ ಹುದ್ದೆಗಳಲ್ಲೂ ಬದಲಾವಣೆ ಮಾಡುವ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: 2 ಕಾಯ್ದೆ ಇಟ್ಕೊಂಡು ದೇಶ ನಡೆಸಲು ಹೇಗೆ ಸಾಧ್ಯ? ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ಮೋದಿ ಬ್ಯಾಟಿಂಗ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ