PM Dhan-Dhaanya Krishi Yojana: 100 ಜಿಲ್ಲೆಗೆ ಪಿಎಂ ಧನ-ಧಾನ್ಯ ಸ್ಕೀಂ: ರೈತರಿಗೆ ಈ ಯೋಜನೆಯ ಲಾಭ ಏನು?

Published : Jul 17, 2025, 08:28 AM ISTUpdated : Jul 17, 2025, 10:08 AM IST
up monsoon rain forecast 2025 barish alert farmers relief vegetable crop loss

ಸಾರಾಂಶ

ಕಡಿಮೆ ಉತ್ಪಾದಕತೆ ಇರುವ 100 ಜಿಲ್ಲೆಗಳಲ್ಲಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ 6 ವರ್ಷಗಳಲ್ಲಿ ಯೋಜನೆಗೆ ₹24,000 ಕೋಟಿ ನೀಡಲಾಗುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿಗೆ ಉತ್ತೇಜನ ನೀಡಲಾಗುವುದು.

ನವದೆಹಲಿ: ಕಡಿಮೆ ಉತ್ಪಾದಕತೆ ಇರುವ ಜಿಲ್ಲೆಗಳಲ್ಲಿ ಸುಸ್ಥಿರ ಕೃಷಿಗೆ ಉತ್ತೇಜನ ನೀಡಿ, ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ದೇಶದ 100 ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆ ಜಾರಿ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಮುಂದಿನ 6 ವರ್ಷಗಳಲ್ಲಿ ಈ ಯೋಜನೆಗೆ ವಾರ್ಷಿಕ 24 ಸಾವಿರ ಕೋಟಿ ನೀಡಲೂ ಅದು ಸಮ್ಮತಿಸಿದೆ. ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಈ ಯೋಜನೆ ಹಾಲಿ ಇರುವ ಕೃಷಿ ಸಂಬಂಧಿತ 36 ಯೋಜನೆಗಳಲ್ಲಿ ಬದಲಾವಣೆ ಮತ್ತು ಬೆಳೆಯಲ್ಲಿ ವೈವಿಧ್ಯ ಮತ್ತು ಸುಸ್ಥಿರ ಕೃಷಿಗೆ ಉತ್ತೇಜನ ನೀಡಲಿದೆ. ಈ ಯೋಜನೆಯು ದೇಶದ 1.7 ಕೋಟಿ ರೈತರಿಗೆ ಅನುಕೂಲ ಮಾಡಿಕೊಡಲಿದೆ ಎಂದು ಹೇಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, ಈ ಯೋಜನೆಯು ಬೆಳೆಕಟಾವಿನ ನಂತರದ ಕೃಷಿ ಉತ್ಪನ್ನಗಳ ಶೇಖರಣೆ, ಕೃಷಿ ಸೌಲಭ್ಯಗಳ ಸುಧಾರಣೆ ಮತ್ತು ಕೃಷಿ ಉತ್ಪಾದಕತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ ಎಂದು ಹೇಳಿದರು.

ಸಮಿತಿಗಳ ರಚನೆ, ಪರಮಾಮರ್ಶೆ: ಈ 100 ಜಿಲ್ಲೆಗಳನ್ನು ಕಡಿಮೆ ಉತ್ಪಾದಕತೆ, ಕಡಿಮೆ ಸಾಲ ವಿತರಣೆ ಮತ್ತು ಕಡಿಮೆ ಬೆಳೆ ತೀವ್ರತೆ ಆಧರಿಸಿಕೊಂಡು ಆಯ್ಕೆ ಮಾಡಲಾಗುತ್ತದೆ. ಪ್ರತಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಕನಿಷ್ಠ 1 ಜಿಲ್ಲೆಯನ್ನಾದರೂ ಆಯ್ಕೆ ಮಾಡುವುದು ಕಡ್ಡಾಯ. ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಪ್ಲಾನಿಂಗ್ ಮತ್ತು ನಿಗಾಗಾಗಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುತ್ತದೆ.

ಜಿಲ್ಲೆಯ ಕೃಷಿ ಮತ್ತು ಸಂಬಂಧಿತ ಚಟುವಟಿಕೆಗಳ ಪ್ಲಾನಿಂಗ್ ಅನ್ನು ಜಿಲ್ಲಾ ಧನ್ ಧಾನ್ಯ ಸಮಿತಿ ಅಂತಿಮ ಗೊಳಿಸಲಿದೆ. ಪ್ರಗತಿಪರ ರೈತರೂ ಇದರ ಸದಸ್ಯರಾಗಿರಲಿದ್ದಾರೆ. ಜಿಲ್ಲಾ ಪ್ಲಾನ್‌ಗಳು ಮಿಶ್ರಬೆಳೆ, ನೀರಿನ ರಕ್ಷಣೆ ಮತ್ತು ಮಣ್ಣಿನ ಆರೋಗ್ಯ, ಸ್ವಾವಲಂಬನೆ, ನೈಸ ರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಗುರಿಯೊಂದಿಗೆ ಬೆಸೆದು ಕೊಂಡಿರುತ್ತವೆ. ಪ್ರತಿ ಧನ-ಧಾನ್ಯ ಜಿಲ್ಲೆಗಳ ಪ್ರಗತಿಯನ್ನು 117 ಪ್ರಮುಖ ಸಾಧನೆಗಳ ಸೂಚ್ಯಂಕಗಳನ್ನು ಆಧರಿಸಿ ಪ್ರತಿ ತಿಂಗಳು ವಿಶ್ಲೇಷಣೆ ಮಾಡಲಾಗುತ್ತದೆ.

ಮುಂಗಾರು ಅಧಿವೇಶನದಲ್ಲಿ ಕೇಂದ್ರದಿಂದ ಎಂಟು ವಿಧೇಯಕಗಳ ಮಂಡನೆ ಸಾಧ್ಯತೆ

ನವದೆಹಲಿ: ಜು.21ರಿಂದ ಆರಂಭವಾಗುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಭೂ-ಪಾರಂಪರಿಕ ತಾಣಗಳು ಮತ್ತು ಭೌಗೋಳಿಕ ಅವಶೇಷಗಳನ್ನು ಸಂರಕ್ಷಿಸುವ ಮಸೂದೆ ಸೇರಿದಂತೆ ಒಟ್ಟು 8 ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ, ಭೂ-ಪಾರಂಪರಿಕ ತಾಣಗಳು ಮತ್ತು ಭೂ-ಅವಶೇಷಗಳು (ಸಂರಕ್ಷಣೆ ಮತ್ತು ನಿರ್ವಹಣೆ) ಮಸೂದೆ, ಗಣಿ ಮತ್ತು ಖನಿಜಗಳು (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ, ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ, ಭಾರತೀಯ ನಿರ್ವಹಣಾ ಸಂಸ್ಥೆ (ತಿದ್ದುಪಡಿ) ಮಸೂದೆ ಮತ್ತು ತೆರಿಗೆ ಕಾನೂನುಗಳು (ತಿದ್ದುಪಡಿ) ಮಸೂದೆಗಳನ್ನು ಕೇಂದ್ರ ಸರ್ಕಾರವು ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಟ್ರಂಪ್‌ಗೆ ಮುಯ್ಯಿಗೆ ಮುಯ್ಯಿ, ಪುಟಿನ್‌ ಜೊತೆ ಭಾಯಿ ಭಾಯಿ!
ಇನ್ನೂ 10 ದಿನಗಳ ಕಾಲ ಇಂಡಿಗೋಳು