
ನವದೆಹಲಿ(ಜು.26): ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(NEP)ಒಂದು ವರ್ಷ ಪೂರೈಸುತ್ತಿದೆ. ಈ ಸಂಭ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ. ಜುಲೈ 29ರ ಸಂಜೆ 4.30ಕ್ಕೆ ಆಯೋಜಿಸಿರುವ NEP ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.
ರಾಮಪ್ಪ ಮಂದಿರಕ್ಕೆ ಯುನೆಸ್ಕೂ ವಿಶ್ವ ಪಾರಂಪರಿಕ ತಾಣ ಸ್ಥಾನಮಾನ; ಪ್ರಧಾನಿ ಮೋದಿ ಅಭಿನಂದನೆ!
ಭಾಷಣದಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನ, ಪ್ರಗತಿ, ಮುಂದಿನ ಕಾರ್ಯಕ್ರಮಗಳ ಕುರಿತು ಮೋದಿ ಚರ್ಚಿಸಲಿದ್ದಾರೆ. ವರ್ಚುವಲ್ ಮೂಲಕ ನಡೆಯಲಿರುವ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಪಾಲ್ಗೊಳಲಿದ್ದಾರೆ.
ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬದಲಾವಣೆ ತರಲಾಗಿತ್ತು. 1986ರ ನೀತಿಗೆ ತಿದ್ದುಪಡಿ ತಂದು ಆಧುನೀಕರಣಗೊಳಿಸಲಾಗಿತ್ತು. ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು.
ಮನ್ ಕೀ ಬಾತ್: ಕರ್ನಾಟಕದ ‘ಬಾಕಾಹು’ಗೆ ಮೋದಿ ಮನ್ನಣೆ!
ಜಾಗತಿಕ ಮಟ್ಟದಲ್ಲಿ ಭಾರತದ ಜ್ಞಾನವನ್ನು ಮಹಾಶಕ್ತಿಯನ್ನು ಪರಿವರ್ತಿಸಲು, ಶಾಲೆ ಹಾಗೂ ಉನ್ನತ ಶಿಕ್ಷಣಗಳಲ್ಲಿ ಸುಧಾರಣೆ ತರಲು ಹೊಸ ಶಿಕ್ಷಣ ತರಲು ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ