
ನವದೆಹಲಿ(ಜು.15): ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮ್ಮ ಮಂತ್ರಿ ಪರಿಷತ್ ಸದಸ್ಯರ ಜತೆ ಸಭೆ ನಡೆಸಿದರು. ಈ ವೇಳೆ ನೂತನ ಸಚಿವರಿಗೆ ‘ಹೇಗೆ ವರ್ತಿಸಬೇಕು’ ಎಂಬ ಬಗ್ಗೆ ಮೋದಿ ಅವರು ಪಾಠ ಮಾಡಿದರು.
ಸಂಪುಟ ಸಭೆ ಬಳಿಕ ಸಂಜೆ ರಾಜ್ಯ ಸಚಿವರೂ ಸೇರಿದಂತೆ ಎಲ್ಲ ಮಂತ್ರಿಗಳ ಸಭೆ ನಡೆಸಿದ ಮೋದಿ, ‘ನೂತನ ಸಚಿವರು ಸದನದ ನಿಯಮಾವಳಿಗಳನ್ನು ಅರ್ಥೈಸಿಕೊಳ್ಳಬೇಕು. ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ಯತ್ನಿಸುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಪ್ರತಿಪಕ್ಷಗಳ ಪ್ರಶ್ನೆಗೆ ಕರಾವಾಕ್ಕಾಗಿ ಉತ್ತರಿಸುವ ನಿಟ್ಟಿನಲ್ಲಿ ಸಚಿವರು ಸಿದ್ಧತೆ ಮಾಡಿಕೊಂಡು ಬರಬೇಕು. ಕಲಾಪಗಳಿಗೆ ತಪ್ಪದೇ ಹಾಜರಾಗಬೇಕು’ ಎಂದು ಸೂಚಿಸಿದರು ಎಂದು ಮೂಲಗಳು ಹೇಳಿವೆ.
ಇತ್ತೀಚೆಗೆ ಮೋದಿ ಮಂತ್ರಿಮಂಡಲದಲ್ಲಿ 43 ಸಚಿವರು ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ