
ಪಟನಾ (ಏ.11): ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದ 3 ಯುವಕರನ್ನು ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಪ್ರಧಾನಿ ಕಚೇರಿಯಿಂದ ಗೌಪ್ಯ ಮಾಹಿತಿಯನ್ನು ಪಡೆಯಲು ಯತ್ನಿಸಿದ್ದ ಮೂವರು, ಹಣ ಕೊಟ್ಟರೆ ಮೋದಿ ಕುರಿತ ರಹಸ್ಯ ಮಾಹಿತಿ ನೀಡುವುದಾಗಿ ಅಮೆರಿಕ ಗುಪ್ತಚರ ಸಂಸ್ಥೆ ಸಿಐಎಗೆ ಸಂದೇಶ ರವಾನಿಸಿದ್ದರು ಎನ್ನಲಾಗಿದೆ. ಬಂಧಿತರಲ್ಲಿ ಒಬ್ಬನಾದ ಅಮನ್ ಕುಮಾರ್ ಸಿಐಎಗೆ ಇ-ಮೇಲ್ ಮೂಲಕ ಕಳಿಸಿದ್ದ ಸಂದೇಶದಲ್ಲಿ, ‘ಪ್ರಧಾನಿ ಮೋದಿಯವರ ಭದ್ರತೆಯನ್ನು ಭೇದಿಸುತ್ತೇವೆ ಇಲ್ಲವೇ ನೇರವಾಗಿ ಕೊಲ್ಲುತ್ತೇವೆ. ಇದಕ್ಕೆ ಬದಲಾಗಿ ನಮಗೆ ಹಣ ಕೊಡಬೇಕು’ ಎಂದು ಬೇಡಿಕೆ ಇಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಜತೆಗೆ 3 ವಾರಗಳಲ್ಲಿ ಈ ಕೆಲಸ ಮುಗಿಸುವ ಗುರಿಯನ್ನೂ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಶಂಕಿತರ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು, ಅವರಿಗೆ ಸೇರಿದ ಲ್ಯಾಪ್‌ಟಾಪ್ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದು ಪರಿಶೀಲನೆಗೆ ಒಳಪಡಿಸಿದ್ದಾರೆ. ಜತೆಗೆ ಬಂಧಿತರನ್ನೂ ವಿಚಾರಣೆಯೂ ನಡೆಯುತ್ತಿದೆ. ಸೈಬರ್ ಕೆಫೆಯೊಂದನ್ನು ಹೊಂದಿರುವ ಅಮನ್, 2022ರಲ್ಲಿ ಕೋಲ್ಕತಾ ವಿಮಾನ ನಿಲ್ದಾಣದ ಕಂಪ್ಯೂಟರ್‌ಗಳನ್ನು ಹ್ಯಾಕ್ ಮಾಡುವುದಾಗಿ ಬೆದರಿಕೆ ಒಡ್ಡಿ ಬಂಧಿಸಲ್ಪಟ್ಟಿದ್ದ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ