
ನವದೆಹಲಿ(ಜು.10) ಉತ್ತರ ಭಾರತ ಮಳೆ ಹಾಗೂ ಪ್ರವಾಹಕ್ಕೆ ತತ್ತರಿಸಿದೆ. ಕಂಡು ಕೇಳರಿಯದ ಮಟ್ಟದಲ್ಲಿ ಹಾನಿಯಾಗಿದೆ. ಉತ್ತರ ಭಾರತದ ಪ್ರವಾಹ, ಭೂಕುಸಿತಕ್ಕೆ 34ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಅತೀ ಹೆಚ್ಚು ಹಾನಿಯಾಗಿರುವ ಹಾಗೂ ಭಾರಿ ಮಳೆಯಲ್ಲಿ ಮುಳುಗಡೆಯಾಗಿರುವ ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಮಳೆಯಿಂದ ತತ್ತರಿಸಿರುವ ರಾಜ್ಯಕ್ಕೆ ಅಗತ್ಯ ನೆರವು ನೀಡುವುದಾಗಿ ಮೋದಿ ಹೇಳಿದ್ದಾರೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಕು ಜೊತೆ ಮಾತನಾಡಿದ ಪ್ರಧಾನಿ ಮೋದಿ, ಹಿಮಾಚಲ ಪರಿಸ್ಥಿತಿ ಕುರಿತು ವಿವರಣೆ ಪಡೆದಿದ್ದಾರೆ. ಇದೇ ವೇಳೆ 10ಕ್ಕೂ ಹೆಚ್ಚು ಜಿಲ್ಲೆಗಳು ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿರುವ ಮಾಹಿತಿಯನ್ನು ನೀಡಿದ್ದಾರೆ. ರಕ್ಷಣಾ ಕಾರ್ಯಗಳು ಬಹುತೇಕ ಅಂತ್ಯಗೊಂಡಿದೆ. ಸುರಕ್ಷತೆಗಾಗಿ ಎನ್‌ಡಿಆರ್‌ಎಪ್ ಸೇರಿದಂತೆ ಹಲವು ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ ಎಂಗು ಸುಖವಿಂದರ್ ಸುಖು ಮಾಹಿತಿ ನೀಡದ್ದಾರೆ. ಪರಿಹಾರ ಸಾಮಾಗ್ರಿ ಸೇರಿದಂತೆ ಇತರ ಅಗತ್ಯ ನೆರವನ್ನು ಕೇಂದ್ರ ನೀಡಲಿದೆ ಎಂದು ಮೋದಿ ಭರವಸೆ ನೀಡಿದ್ದಾರೆ.
ಭಾರಿ ಮಳೆಗೆ ತತ್ತರಿಸಿದ ಭಾರತ, 5 ರಾಜ್ಯಗಳ ಶಾಲಾ ಕಾಲೇಜಿಗೆ ರಜೆ!
ಇತ್ತ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಜೊತೆ ಮಾತುಕತೆ ನಡೆಸಿದ ಮೋದಿ, ರಾಜ್ಯದ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಅವಲೋಕಿಸಿದ್ದಾರೆ. ಇದೇ ವೇಳೆ ಪರಿಹಾರ ಹಾಗೂ ನೆರವಿನ ಭರವಸೆ ನೀಡಿದ್ದಾರೆ.
ಇದಕ್ಕೂ ಮೊದಲು ಪ್ರಧಾನಿ ಮೋದಿ ಭಾರತದ ಹಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಭಾರತದ ಕೆಲವು ಭಾಗಗಳಲ್ಲಿ ಅತಿಯಾದ ಮಳೆಯ ಹಿನ್ನೆಲೆಯಲ್ಲಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಸ್ಥಳೀಯ ಆಡಳಿತಗಳು, ಎನ್ ಡಿಆರ್ ಎಫ್ ಮತ್ತು ಎಸ್ ಡಿಆರ್ ಎಫ್ ತಂಡಗಳು ಸಂತ್ರಸ್ತರ ಸುರಕ್ಷತೆಯನ್ನು ನೋಡಿಕೊಳ್ಳಲು ಕೆಲಸ ಮಾಡುತ್ತಿವೆ ಎಂದು ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಭೂಕುಸಿತಕ್ಕೆ ಕೊಚ್ಚಿ ಹೋದ ಗ್ರಾಮ; ಕಟ್ಟಡ, ಸೇತುವೆ, ವಾಹನ, ಮನೆ ನೀರು ಪಾಲು!
ಉತ್ತರಾಖಂಡದ ತೆಹ್ರಿ ಗಢವಾಲ್ ಜಿಲ್ಲೆಯ ಋುಷಿಕೇಶ -ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ಪರಿಣಾಮ 11 ಜನರಿದ್ದ ವಾಹನವೊಂದು ಗಂಗಾ ನದಿಗೆ ಉರುಳಿಬಿದ್ದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿ, ಇತರೆ ಮೂವರು ನಾಪತ್ತೆಯಾಗಿದ್ದಾರೆ. ಐವರನ್ನು ರಕ್ಷಿಸಲಾಗಿದೆ.
ಕಾಶ್ಮೀರದಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಐವರು ಬಲಿಯಾಗಿದ್ದಾರೆ. ಶನಿವಾರ ಸಂಜೆ ದಿಢೀರ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ದೇಹ, ಭಾನುವಾರ ಪೂಂಚ್ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮತ್ತೊಂದೆಡೆ ದೋಡಾ ಜಿಲ್ಲೆಯಲ್ಲಿ ಬಸ್ ಮೇಲೆ ಸಂಭವಿಸಿದ ಭೂಕುಸಿತದಲ್ಲಿ ಮೂವರು ಸಾವನ್ನಪಿದ್ದಾರೆ. ಇನ್ನು ಲಡಾಖ್‌ನಲ್ಲಿ ಶನಿವಾರದಿಂದೀಚೆಗೆ ಅಕಾಲಿಕ ಹಿಮಪಾತವಾಗುತ್ತಿದ್ದು, ಹಲವು ಭಾಗಳಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದ ಕಾರಣ ಲೇಹ್-ಕಾರ್ಗಿಲ್- ಶ್ರೀನಗರ ಹೆದ್ದಾರಿ ಮುಚ್ಚಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ