
ನವದೆಹಲಿ (ಜ.23): ಕೇಂದ್ರ ಸಚಿವ ಸಂಪುಟವು ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್ಎಂ) ಅನ್ನು ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲು ಬುಧವಾರ ಅನುಮೋದನೆ ನೀಡಿದೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಪೀಯೂಷ್ ಗೋಯೆಲ್, ‘ಈ ಯೋಜನೆ ಕಳೆದ 10 ವರ್ಷಗಳಲ್ಲಿ ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. 2021-22ರ ಅವಧಿಯಲ್ಲಿ ಸುಮಾರು 12 ಲಕ್ಷ ಆರೋಗ್ಯ ಕಾರ್ಯಕರ್ತರು ಮಿಷನ್‌ನೊಂದಿಗೆ ಜೋಡಿಸಿದ್ದು, ಇಡೀ ದೇಶ ಕೋವಿಡ್ ವಿರುದ್ಧ ಹೋರಾಡಲು ಸಾಧ್ಯವಾಯಿತು’ ಎಂದರು.
ಕೋವಿಡ್ ಸಮಯದಲ್ಲಿ ಎನ್‌ಎಚ್ಎಂ ಬಹುಮುಖ್ಯ ಪಾತ್ರ ವಹಿಸಿದ್ದು, 2021ರ ಜನವರಿಯಿಂದ 2024ರ ಮಾರ್ಚ್‌ವರೆಗೆ 200 ಕೋಟಿಗಿಂತಲೂ ಅಧಿಕ ವ್ಯಾಕ್ಸಿನ್ ಡೋಸ್ ಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ. ಗ್ರಾಮೀಣ ಜನರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಕಲ್ಪಿಸುವ ಉದ್ದೇಶದಿಂದ 2005ರಲ್ಲಿ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ (ಎನ್ಆರ್‌ಎಚ್ಎಂ) ಎಂಬ ಹೆಸರಿನಲ್ಲಿ ಯೋಜನೆ ಆರಂಭವಾಯಿತು. 2012ರಲ್ಲಿ, ರಾಷ್ಟ್ರೀಯ ನಗರ ಆರೋಗ್ಯ ಮಿಷನ್ (ಎನ್‌ಯುಎಚ್ಎಂ) ಪರಿಚಯಿಸುವ ಮೂಲಕ ನಗರ ಪ್ರದೇಶಕ್ಕೆ ಯೋಜನೆಯ ವ್ಯಾಪ್ತಿ ವಿಸ್ತರಿಸಿತು. ಮುಂದೆ ಎನ್ಆರ್‌ಎಚ್ಎಂ ಅನ್ನು ಎನ್‌ಎಚ್ಎಂ ಎಂದು ಬದಲಾಯಿಸಿ, ಅದರಡಿಯಲ್ಲಿಯೇ ಎನ್ಆರ್‌ಎಚ್ಎಂ ಮತ್ತು ಎನ್‌ಯುಎಚ್ಎಂ ಎರಡೂ ಉಪಯೋಜನೆಗಳನ್ನು ಅಳವಡಿಸಲಾಯಿತು.
ಕ್ಯಾನ್ಸರ್ ಪೀಡಿತರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಲಿ: ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಆದಿವಾಸಿ ಜನರ ಆರೋಗ್ಯ ಕಾಪಾಡುವಲ್ಲಿ ಸದಾ ಕಾರ್ಯಮಗ್ನರಾಗಬೇಕಾಗಿದೆ. ಮುಖ್ಯವಾಗಿ ಕ್ಯಾನ್ಸರ್ ಪೀಡಿತ ಜನರಿಗೆ ಸೂಕ್ತ ಚಿಕಿತ್ಸೆ ಹಾಗೂ ತಪಾಸಣೆ ತೀವ್ರಗೊಳಿಸಬೇಕು. ಅದಕ್ಕಾಗಿಯೇ ಕರ್ನಾಟಕದಲ್ಲಿ ಕೆಎಲ್‌ಇ ಸಂಸ್ಥೆ ಅತ್ಯಾಧುನಿಕವಾದ ಕ್ಯಾನ್ಸರ್ ಆಸ್ಪತ್ರೆ ಜನಸೇವೆಗೆ ಅರ್ಪಿಸಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಕೆಎಲ್ಇ ಸಂಸ್ಥೆ ನೂತನವಾಗಿ ಪ್ರಾರಂಭಿಸಿರುವ ಕೆಎಲ್ಇ ಡಾ.ಸಂಪತಕುಮಾರ ಹಾಗೂ ಡಾ. ಉದಯಾ ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಜನಸೇವೆಗೆ ಅರ್ಪಿಸಿ ಮಾತನಾಡಿ ಅವರು, ಭಾರತದಂತಹ ರಾಷ್ಟ್ರದಲ್ಲಿ ಎಲ್ಲರಿಗೂ ಆರೋಗ್ಯ ವ್ಯವಸ್ಥೆ ಕಲ್ಪಿಸುವುದು ಇಂದು ಅತ್ಯಗತ್ಯವಾಗಿದೆ. ಆದ್ದರಿಂದಲೇ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತದಂತಹ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ ಎಂದು ಹೇಳಿದರು.
ತೆಲಂಗಾಣದ ಬಾಲಾಜಿ ದೇಗುಲಕ್ಕೆ ಪ್ರಿಯಾಂಕಾ ಚೋಪ್ರಾ ಭೇಟಿ: ಹೊಸ ಅಧ್ಯಾಯ ಆರಂಭವಾಗಿದೆ ಎಂದಿದ್ಯಾಕೆ?
ಐಸಿಎಂಆರ್ ಸಮೀಕ್ಷೆಯಂತೆ ದೇಶದಲ್ಲಿ ಸುಮಾರು 20 ಮಿಲಿಯನ್‌ಗೂ ಅಧಿಕ ಜನ ಪ್ರತಿವರ್ಷ ಕ್ಯಾನ್ಸರ್ ಪೀಡಿತರಾಗುತ್ತಿದ್ದು, ಸುಮಾರು 7 ಮಿಲಿಯನ್‌ಗೂ ಅಧಿಕ ಜನರು ಪ್ರತಿವರ್ಷ ಸಾವಿಗೀಡಾಗುತ್ತಿದ್ದಾರೆ. ಆದ್ದರಿಂದ ಪ್ರತಿ ಮೂಲೆಯಲ್ಲೂ ಕ್ಯಾನ್ಸರ್ ಆಸ್ಪತ್ರೆ ಕಾರ್ಯನಿರ್ವಹಿಸುವಂತಾಗಬೇಕು. ಅಲ್ಲದೆ, ಉಚಿತ ಹಾಗೂ ಕೈಗೆಟಕುವ ದರದಲ್ಲಿ ಚಿಕಿತ್ಸೆ ಲಭ್ಯವಾಗಬೇಕು. ಅದರಲ್ಲಿಯೂ ಮುಖ್ಯವಾಗಿ ಹಿರಿಯ ನಾಗರಿಕರಿಗೆ ಅನೇಕ ರೋಗಗಳು ಬಾಧಿಸುತ್ತಿದ್ದು, ಅದರಲ್ಲಿ ಕ್ಯಾನ್ಸರ್ ಅತೀ ಹೆಚ್ಚು ಪರಿಣಾಮ ಬೀರುತ್ತದೆ. ಅದಕ್ಕಾಗಿ ಅದರ ಕುರಿತು ಹಚ್ಚೆಚ್ಚು ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಆರೋಗ್ಯಯುತ ಸಮಾಜ ನಿರ್ಮಾಣವಾದರೆ ಮಾತ್ರ ಸಮಾಜ ಸುಧಾರಣೆಯಾಗುತ್ತದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ