
ಬೆಂಗಳೂರು, (ಜ.11): ಕೊರೋನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಪ್ರದಾನಿ ನರೇಂದ್ರ ಮೋದಿ( Narendra Modi) ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಇಂದು (ಮಂಗಳವಾರ) ಸಂಜೆ 4:30ಕ್ಕೆ ಸಿಎಂ ಬೊಮ್ಮಾಯಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ.
Covid Guidelines ಕರ್ನಾಟಕದಲ್ಲಿ ಮತ್ತಷ್ಟು ಟಫ್ ರೂಲ್ಸ್, ನಾಳೆಯಿಂದಲೇ (ಜ.12) ಜಾರಿಗೆ
ಕರ್ನಾಟಕದಲ್ಲಿ ಕೊರೋನಾ ಸೋಂಕಿನ 3ನೇ ಅಲೆ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯುತ್ತಿದ್ದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂಗೆ ಕರೆ ಮಾಡಿದ್ದಾರೆ.
ಸುಮಾರು ಐದು ನಿಮಿಷ ಮಾತನಾಡಿದ ಮೋದಿ, ತಮ್ಮ ಆರೋಗ್ಯ ಕಾಪಾಡಿಕೊಳ್ಳಿ. ಸೂಕ್ತ ಚಿಕಿತ್ಸೆ ಪಡೆಯಿರಿ ಎಂಬ ಸಲಹೆ ನೀಡಿದ್ದಾರೆ.
ತನ್ನ ಜತೆಗೆ ಕುಟುಂಬದ ಇಬ್ಬರು ಸದಸ್ಯರಿಗೂ ಸೋಂಕು ತಗುಲಿದೆ ಎಂದು ಬೊಮ್ಮಾಯಿ ಹೇಳಿದಾಗ, ಎಲ್ಲರೂ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆಯೂ ಪ್ರಧಾನಿಗೆ ಸಿಎಂ ಮಾಹಿತಿ ನೀಡಿದ್ದು,, ಇದೀಗ ಬೆಂಗಳೂರಿನಲ್ಲಿ ವರ್ಚುವಲ್ ಆಗಿ ಸಭೆ ನಡೆಸುತ್ತಿದ್ದೇನೆ. ಜ. 13ರ ಸಂಜೆ ತಾವು ಕರೆದಿರುವ ಕೋವಿಡ್ ವರ್ಚುಯಲ್ ಸಭೆಗೆ ಪೂರ್ವಭಾವಿ ರೂಪದಲ್ಲಿ ಈ ಸಭೆ ನಡೆಸುತ್ತಿದ್ದೇನೆ. ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗಿದೆ. ತಜ್ಞರು ನೀಡುವ ಸಲಹೆಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮೋದಿಗೆ ವಿವರಿಸಿದ್ದಾರೆ.
ಇನ್ನು ನರೇಂದ್ರ ಮೋದಿ ಅವರು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಭಾರತದ ಸಂಗೀತ ಲೋಕದ ದಿಗ್ಗಜರಲ್ಲೊಬ್ಬರಾದ ಗಾಯಕಿ ಲತಾ ಮಂಗೇಶ್ಕರ್ (Lata Mangeshkar) ಅವರಿಗೂ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಬಿಹಾರ್ ಸಿಎಂ ನಿತೀಶ್ ಕುಮಾರ್ ಹಾಗೂ ಲತಾ ಮಂಗೇಶ್ಕರ್‌ಗೂ ಕೊರೋನಾ ದೃಢಪಟ್ಟಿದ್ದು. ಚಿಕಿತ್ಸೆ ಪಡೆಯುತ್ತಿದ್ದಾರೆ.
ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ
ಹೌದು... ರಾಜ್ಯದಲ್ಲಿ ಕೋವಿಡ್ ಸೋಂಕು ಭಾರೀ ಏರಿಕೆಯಾಗುತ್ತಿದ್ದು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ತೀವ್ರ ಏರಿಕೆ ಕಾಣ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತವರು ಅವಶ್ಯಕತೆ ಇದ್ದು, ಈ ಬಗ್ಗೆ ಇದೇ ಗುರುವಾರ ಪ್ರಧಾನಿ ನರೇಂದ್ರ ಮೋದಿ ಸಭೆ ಬಳಿಕ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ.
ಇನ್ನು ಕಳೆದ 10 ದಿನಗಳಲ್ಲಿ ಸುಮಾರು 8 ಸಾವಿರ ಮಕ್ಕಳಿಗೆ ಸೋಂಕು ತಗುಲಿದ್ದು, ಇವೇ ಮೊದಲಾದ ಕಾರಣದಿಂದ ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಚೈನ್ ಬ್ರೇಕ್ ಮಾಡಲು 10 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ. ಆದರೆ, ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡಲ್ಲವೆಂದು ಸಚಿವ ಸುಧಾಕರ್ ಹೇಳಿದ್ದು, ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಬಿಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ