ಕೊರೋನಾ ನಿಗ್ರಹಕ್ಕೆ ನಾನಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ವಿಷಯ ಸಂಬಂಧ ಚರ್ಚಿಸಲು ಏ.8 ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ನವದೆಹಲಿ (ಏ. 05): ಕೊರೋನಾ ನಿಗ್ರಹಕ್ಕೆ ನಾನಾ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ವಿಷಯ ಸಂಬಂಧ ಚರ್ಚಿಸಲು ಏ.8 ರಂದು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಏ.8 ರಂದು ಉಭಯ ಸದನಗಳಲ್ಲಿ 5 ಕ್ಕಿಂತ ಹೆಚ್ಚು ಸಂಸದರು ಇರುವ ಪಕ್ಷಗಳ ಸದನಗಳ ನಾಯಕರ ಜೊತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
undefined
ಕೊರೋನಾ ಎಫೆಕ್ಟ್: ಭಾರತದಲ್ಲಿ ನಡೆಯಬೇಕಿದ್ದ ಫುಟ್ಬಾಲ್ ವಿಶ್ವಕಪ್ ಮುಂದಕ್ಕೆ
ಈ ಸಭೆಯಲ್ಲಿ ಕೊರೋನಾ ವಿರುದ್ಧದ ಹೋರಾಟಗಳು, ಲಾಕ್‌ಡೌನ್ ಸೇರಿದಂತೆ ಇನ್ನಿತರ ಮಹತ್ವದ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆಯಿದೆ. ದೇಶಾದ್ಯಂತ 21 ದಿನಗಳ ಕೊರೋನಾ ಲಾಕ್‌ಡೌನ್ ಜಾರಿಯಾದಾಗಿನಿಂದ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷಗಳ ನಾಯಕರ ಜೊತೆ ನಡೆಸಲಿರುವ ಮೊದಲ ಸಮಾಲೋಚನಾ ಸಭೆ ಇದಾಗಿದೆ.
ಸೋಷಿಯಲ್ ಡಿಸ್ಟೆನ್ಸಿಂಗ್ ಕಾರಣದಿಂದ ಒಂದು ಪಕ್ಷದಿಂದ 5 ಸಂಸದರಿಗೆ ನಿರ್ಬಂಧ ಹೇರಿರುವುದರಿಂದ ಕೆಲವರಿಗೆ ಅಸಮಾಧಾನ ಉಂಟಾಗಿದೆ. ತೃಣಮೂಲ ಕಾಂಗ್ರೆಸ್ ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಭಾಗವಹಿಸುವ ನಿರೀಕ್ಷೆ ಇದೆ.
ಸಭೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಎಲ್ಲ ಪಕ್ಷಗಳ ನಾಯಕರನ್ನು ಇಂದು ಸಂಜೆ ಆಹ್ವಾನಿಸಿದ್ದಾರೆ. ತೃಣಮೂಲ ಕಾಂಗ್ರೆಸ್ ಸಂಸದ ಸುದೀಪಪ್ ಬಂಡೋಪಾಧ್ಯಾಯ ನನ್ನ ಕ್ಷೇತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದೇನೆ. ಬರಲಾಗುವುದಿಲ್ಲ' ಎಂದಿದ್ದಾರೆ.