
ನವದೆಹಲಿ(ಫೆ.24): ಕಳೆದ ಕೆಲ ದಿನಗಳಿಂದ ದೇಶಾದ್ಯಂತ ಕೊರೋನಾ ವೈರಸ್ ಹಬ್ಬುವಿಕೆ ತೀವ್ರತೆ ಹೆಚ್ಚಾಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದರು.
ಕೇಂದ್ರ ಆರೋಗ್ಯ ಇಲಾಖೆಯ ಕಾರ‍್ಯದರ್ಶಿ ರಾಜೇಶ್ ಭೂಷಣ್ ಸೇರಿದಂತೆ ಕೊರೋನಾ ನಿಯಂತ್ರಣದಲ್ಲಿ ಪಾಲುದಾರಿಕೆ ಹೊಂದಿದ ಎಲ್ಲಾ ಇಲಾಖೆಯ ಅಧಿಕಾರಿಗಳು ಈ ದಿಢೀರ್ ಸಭೆಯಲ್ಲಿ ಭಾಗಿಯಾಗಿದ್ದರು.
ಈ ವೇಳೆ ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ಪಂಜಾಬ್ ರಾಜ್ಯಗಳಲ್ಲಿ ಅತಿಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಕಾರಣವೇನು? ಈ ಸೋಂಕಿತರನ್ನು ಗುಣಮುಖಗೊಳಿಸಿ, ಸೋಂಕು ಹೆಚ್ಚು ತೀವ್ರತೆಯಿಂದ ವ್ಯಾಪಿಸದಂತೆ ಏನೆಲ್ಲಾ ಮುಂದಾಲೋಚನೆ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಅಧಿಕಾರಿಗಳಿಂದ ಮೋದಿ ಅವರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ.
ಜೊತೆಗೆ ಈ ಸಂಬಂಧ ಹೆಚ್ಚು ನಿಗಾ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ