ಲಾಲು ಸ್ಥಿತಿ ಗಂಭೀರ, ಪುತ್ರನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ !

Published : Jul 05, 2022, 11:17 PM ISTUpdated : Jul 05, 2022, 11:25 PM IST
ಲಾಲು ಸ್ಥಿತಿ ಗಂಭೀರ, ಪುತ್ರನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ !

ಸಾರಾಂಶ

ತೀವ್ರ ನಿಘಾ ಘಟಕದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಚಿಕಿತ್ಸೆ ತೇಜಸ್ವಿ ಯಾದವ್‌ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ ಶೀಘ್ರ ಚೇತರಿಕೆಗೆ ಪ್ರಧಾನಿ ಮೋದಿ ಪ್ರಾರ್ಥನೆ  

ಪಾಟ್ನಾ(ಜು.05): ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ದಾಖಲಾಗಿರುವ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ಗೆ ಸ್ಥಿತಿ ಗಂಭೀರವಾಗಿದೆ. ಸದ್ಯ ತೀವ್ರ ನಿಘಾ ಘಟಕದಲ್ಲಿ ಲಾಲೂ ಪ್ರಸಾದ್ ಯಾದವ್‌ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಲಾಲೂ ಪುತ್ರ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶೀಘ್ರ ಚೇತರಿಕೆಗೆ ಪಾರ್ಥಿಸಿದ್ದಾರೆ.

ಭಾನುವಾರ ಮನೆಯಲ್ಲಿ ಬಿದ್ದು ಭುಜದ ಮೂಳೆ ಮುರಿದುಕೊಂಡಿದ್ದ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ಗೆ  ಅನಾರೋಗ್ಯ ಸಮಸ್ಯೆಯೂ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 

ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಗೆ ದಾಖಲು, ICUನಲ್ಲಿ ಚಿಕಿತ್ಸೆ!

ಅವಶ್ಯಕತೆ ಬಿದ್ದರೆ ಲಾಲೂ ಪ್ರಸಾದ್ ಯಾದವ್‌ರನ್ನು ದೆಹಲಿಗೆ ಏರ್‌ಲಿಫ್ಟ್ ಮಾಡಲಾಗುವುದು ಎಂದು ಬಿಜೆಪಿ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಬಿಹಾರ ಸರ್ಕಾರ ಲಾಲೂ ಆರೋಗ್ಯ ಕುರಿತು ನಿಗಾವಹಿಸಿದೆ. ಎಲ್ಲಾ ರೀತಿ ನೆರವು ನೀಡಲಿದೆ ಎಂದು ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಇದೇ ವೇಳೆ ಶೀಘ್ರದಲ್ಲೇ ಲಾಲೂ ಪ್ರಸಾದ್ ಯಾದವ್ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಮೇವು ಹಗರಣದ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿಂದ ಹೊರಗಿರುವ ಲಾಲು ಕಳೆದ ತಿಂಗಳು ಜಾರ್ಖಂಡ್‌ ಹೈಕೋರ್ಚ್‌ ಬಳಿ ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ ಸಿಂಗಾಪುರ್‌ಗೆ ತೆರಳಲು ಅನುಮತಿ ಪಡೆದಿದ್ದರು.

ಮಾರ್ಚ್ ತಿಂಗಳಲ್ಲಿ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ರಾಂಚಿಯಿಂದ ಕರೆತಂದ ಲಾಲು ಅವರನ್ನು ಏಮ್ಸ್‌ಗೆ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಬಿಡುಗಡೆ ಮರುದಿನ ಮತ್ತೆ ದಿಢೀರ್‌ ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಮರಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಸತತ ಚಿಕಿತ್ಸೆ ಬಳಿಕ ಲಾಲು ಪ್ರಸಾದ್ ಯಾದವ್ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಮೇವು ಹಗರಣದಲ್ಲಿ 5 ವರ್ಷ ಶಿಕ್ಷೆ ಪ್ರಕಟಿಸಿದ್ದ ನ್ಯಾಯಾಲಯ:

ಮೇವು ಹಗರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ಗೆ ಜಾರ್ಖಂಡ್‌ನ ಸಿಬಿಐ ನ್ಯಾಯಾಲಯ 2022ರ ಫೆಬ್ರವರಿಯಲ್ಲಿ  5 ವರ್ಷ ಜೈಲುಶಿಕ್ಷೆ ಹಾಗೂ 60 ಲಕ್ಷ ರು. ದಂಡ ವಿಧಿಸಿದೆ. ಲಾಲು ವಿರುದ್ಧ ದಾಖಲಾಗಿದ್ದ ಮೇವು ಹಗರಣಗಳ ಒಟ್ಟು 6 ಪ್ರಕರಣಗಳ ಪೈಕಿ ಇದು ಅತಿಹೆಚ್ಚು ಮೊತ್ತದ (139 ಕೋಟಿ ರು.) ಹಾಗೂ 5ನೇ ಪ್ರಕರಣವಾಗಿತ್ತು. ಮುಖ್ಯಮಂತ್ರಿಯಾಗಿದ್ದಾಗ ಲಾಲು ಜಾರ್ಖಂಡ್‌ನ ಡೋರಂಡಾ ಬೊಕ್ಕಸದಿಂದ 139 ಕೋಟಿ ರು.ಗಳನ್ನು ದುರ್ಬಳಕೆ ಮಾಡಿಕೊಂಡಿದ್ದರು.

Lalu Prasad Yadav: 25 ವರ್ಷ ಬಳಿಕ ಲಾಲು ಜತೆ ಒಂದಾದ ಶರದ್‌ ಯಾದವ್‌

ಲಾಲು ಅವಧಿಯಲ್ಲಿ ಬಿಹಾರದ ದನಕರುಗಳಿಗೆ ಸರ್ಕಾರದಿಂದ ಮೇವು ಪೂರೈಸುವ ಯೋಜನೆಯಡಿ ಒಟ್ಟು 950 ಕೋಟಿ ರು.ಗಳನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳು ಕಬಳಿಸಿದ್ದರು. ಅದು ಮೇವು ಹಗಣರವೆಂದು ಕುಖ್ಯಾತಿ ಪಡೆದಿದೆ. ಅದನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಆ ಪೈಕಿ ಲಾಲು ವಿರುದ್ಧ 6 ಪ್ರಕರಣಗಳು ದಾಖಲಾಗಿದ್ದವು. ಈಗಾಗಲೇ 4 ಪ್ರಕರಣಗಳಲ್ಲಿ ಲಾಲುಗೆ 14 ವರ್ಷದವರೆಗೆ ಜೈಲುಶಿಕ್ಷೆಯಾಗಿದೆ. 5ನೇ ಪ್ರಕರಣದ ವಿಚಾರಣೆಯನ್ನು ಕಳೆದ ವಾರ ಪೂರ್ಣಗೊಳಿಸಿದ್ದ ರಾಂಚಿಯ ಸಿಬಿಐ ಕೋರ್ಟ್‌, ಶಿಕ್ಷೆಯ ಪ್ರಮಾಣವನ್ನು ಈಗ ಪ್ರಕಟಿಸಿದೆ. ಬಿಹಾರದ ಬಂಕಾ ಬೊಕ್ಕಸದ ಹಣ ಕಬಳಿಕೆ ಮಾಡಿದ 6ನೇ ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
India Latest News Live: ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್