ಐಎನ್‌ಎಸ್ ವಿಕ್ರಾಂತ್‌ನಲ್ಲಿ ಮೋದಿ ದೀಪಾವಳಿ ಸಂಭ್ರಮ

Kannadaprabha News   | Kannada Prabha
Published : Oct 21, 2025, 04:55 AM IST
PM Modi celebrates Diwali aboard INS Vikrant

ಸಾರಾಂಶ

ಯೋಧರೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಪರಿಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷವೂ ಮುಂದುವರಿಸಿದ್ದಾರೆ. ಕಾರವಾರ-ಗೋವಾ ಕರಾವಳಿಯಲ್ಲಿ ಲಂಗರು ಹಾಕಿರುವ ಐಎನ್‌ಎಸ್ ವಿಕ್ರಾಂತ್‌ ಯುದ್ಧನೌಕೆಯಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಪಣಜಿ : ಯೋಧರೊಂದಿಗೆ ದೀಪಾವಳಿ ಆಚರಿಸುವ ತಮ್ಮ ವಾರ್ಷಿಕ ಪರಿಪಾಠವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷವೂ ಮುಂದುವರಿಸಿದ್ದಾರೆ. ಕಾರವಾರ-ಗೋವಾ ಕರಾವಳಿಯಲ್ಲಿ ಲಂಗರು ಹಾಕಿರುವ ಐಎನ್‌ಎಸ್ ವಿಕ್ರಾಂತ್‌ ಯುದ್ಧನೌಕೆಯಲ್ಲಿ ನೌಕಾಪಡೆಯ ಸಿಬ್ಬಂದಿಯೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದ್ದಾರೆ.

ಭಾನುವಾರ ಸಂಜೆಯೇ ಕಾರವಾರ-ಗೋವಾ ಕರಾವಳಿಗೆ ಆಗಮಿಸಿದ ಪ್ರಧಾನಿ, ಸ್ವದೇಶಿ ನಿರ್ಮಿತ ವಿಕ್ರಾಂತ್‌ ಯುದ್ಧನೌಕೆಯನ್ನು ಏರಿದರು. ಈ ವೇಳೆ ಮಿಗ್ 29ಕೆ ಯುದ್ಧವಿಮಾನಗಳನ್ನು ನಿಲ್ಲಿಸುವ ಪಾರ್ಕಿಂಗ್‌ ತಾಣಕ್ಕೆ (ಫ್ಲೈಟ್‌ಡೆಕ್‌) ಭೇಟಿ ನೀಡಿದರು.

ಹಗಲು ಮತ್ತು ರಾತ್ರಿ ಎರಡೂ ಸಮಯದಲ್ಲಿ ವಿಮಾನವಾಹಕ ನೌಕೆಯ (ಏರ್‌ಕ್ರಾಫ್ಟ್‌ ಕ್ಯಾರಿಯರ್‌) ಸಣ್ಣ ರನ್‌ವೇಯಲ್ಲಿ ಮಿಗ್ 29 ಯುದ್ಧವಿಮಾನಗಳ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ವೀಕ್ಷಿಸಿದರು. ಈ ವೇಳೆ ನೌಕಾಪಡೆಯ ಅಧಿಕಾರಿಗಳು ಮತ್ತು ನಾವಿಕರು ಆಪರೇಷನ್‌ ಸಿಂದೂರದ ವಿಜಯವನ್ನು ವರ್ಣಿಸಿ ತಾವೇ ರಚಿಸಿದ ದೇಶಭಕ್ತಿಗೀತೆಗಳನ್ನು ಮೋದಿ ಅವರ ಮುಂದೆ ಹಾಡಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೋದಿ ಕಣ್ತುಂಬಿಕೊಂಡರು.

ಆ ಬಳಿಕ ಸಿಬ್ಬಂದಿಗಳೊಂದಿಗೆ ಭೋಜನ ಸವಿದರು. ಸೋಮವಾರ ಬೆಳಿಗ್ಗೆ ಐಎನ್ಎಸ್ ವಿಕ್ರಾಂತ್‌ನ ಡೆಕ್ (ಜಗುಲಿ)ನಲ್ಲಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಯುದ್ಧವಿಮಾನಗಳ ಹಾರಾಟವನ್ನು ವೀಕ್ಷಿಸಿದರು. ನಂತರ ಸಿಬ್ಬಂದಿಗಳನ್ನುದ್ದೇಶಿಸಿ ಸ್ಫೂರ್ತಿದಾಯಕ ಭಾಷಣ ಮಾಡಿ, ಸಿಹಿತಿಂಡಿಗಳನ್ನು ಹಂಚಿ ಸಂತಸಪಟ್ಟರು. 2014ರಲ್ಲಿ ಪ್ರಧಾನಿಯಾದಾಗಿನಿಂದಲೂ ಮೋದಿಯವರು ದೀಪಾವಳಿಯನ್ನು ಯೋಧರೊಂದಿಗೆ ಆಚರಿಸುತ್ತಾ ಬಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ