ಮನ್ ಕಿ ಬಾತ್: ಮಕ್ಕಳಲ್ಲಿ ಹೆಚ್ಚಾದ ಬೊಜ್ಜು ಸಮಸ್ಯೆಗೆ ಪ್ರಧಾನಿ ಮೋದಿ ಕಳವಳ

Published : Feb 23, 2025, 02:40 PM ISTUpdated : Feb 23, 2025, 02:48 PM IST
ಮನ್ ಕಿ ಬಾತ್: ಮಕ್ಕಳಲ್ಲಿ ಹೆಚ್ಚಾದ ಬೊಜ್ಜು ಸಮಸ್ಯೆಗೆ ಪ್ರಧಾನಿ ಮೋದಿ ಕಳವಳ

ಸಾರಾಂಶ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು, ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಸಾಧನೆ ಮತ್ತು ಮಹಿಳಾ ದಿನದ ಆಚರಣೆಯ ಬಗ್ಗೆ ಮಾತನಾಡಿದರು. ಮಹಿಳಾ ದಿನದಂದು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮಹಿಳೆಯರಿಗೆ ಪ್ರಧಾನಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 'ಮನ್ ಕಿ ಬಾತ್' ರೇಡಿಯೋ ಕಾರ್ಯಕ್ರಮದ 119 ನೇ ಸಂಚಿಕೆಯಲ್ಲಿ ಮಕ್ಕಳನ್ನು ಕಾಡುವ ಬಾಲ್ಯದ  ಬೊಜ್ಜುತನದ ಆರೋಗ್ಯ ಸಮಸ್ಯೆಯೂ ತೀವ್ರವಾಗಿ ಏರಿಕೆಯಾಗಿರುವ ವಿಚಾರ ಹಾಗೂ  ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗಳು,  ಮಹಾಕುಂಭ ಮೇಳ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದರು.

ಮಕ್ಕಳಲ್ಲಿ ಹೆಚ್ಚಾದ ಬೊಜ್ಜು ಸಮಸ್ಯೆಗೆ ಪ್ರಧಾನಿ ಕಳವಳ

ದೇಶದಲ್ಲಿ, ವಿಶೇಷವಾಗಿ ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಪ್ರಮಾಣದ ಬಗ್ಗೆ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದರು. ಇದೇ ವೇಳೆ ಅವರು ಈ ವಿಚಾರದ ಬಗೆಗಿನ ಆತಂಕಕಾರಿ ಅಂಕಿ ಅಂಶಗಳನ್ನು ಎತ್ತಿ ತೋರಿಸಿದರು, ಪ್ರತಿ ಎಂಟು ವ್ಯಕ್ತಿಗಳಲ್ಲಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಇತ್ತೀಚಿನ ವರ್ಷಗಳಲ್ಲಿ ಮಕ್ಕಳಲ್ಲಿ ಪ್ರಕರಣಗಳು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಆತಂಕ ವ್ಯಕ್ತಪಡಿಸಿದರು. ಹೃದಯದ ಕಾಯಿಲೆ, ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಅತಿಯಾದ ಎಣ್ಣೆ ಸೇವನೆಯಿಂದ ಉಂಟಾಗುವ ತೀವ್ರ ಆರೋಗ್ಯ ಅಪಾಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ನಾಗರಿಕರು ಈ ಬಗ್ಗೆ  ಎಚ್ಚರಿಕೆ ವಹಿಸುವಂತೆ ಮಾಸಿಕ ಎಣ್ಣೆ ಸೇವನೆಯನ್ನು ಶೇ. 10 ರಷ್ಟು ಕಡಿಮೆ ಮಾಡುವಂತೆ ಮನವಿ ಮಾಡಿದರು. 

ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಸಾಧನೆಗೆ ಶ್ಲಾಘನೆ
ನಂತರ ಬಾಹ್ಯಾಕಾಶ ಸಾಧನೆಗಳ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ , ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ 100ನೇ ರಾಕೆಟ್ ಉಡಾವಣೆಯನ್ನು ಯಶಸ್ವಿಯಾಗಿ ಸಾಧಿಸಿದ್ದಕ್ಕಾಗಿ ಅವರನ್ನು ಶ್ಲಾಘಿಸಿದರು.  ಇಸ್ರೋದ ಈ  ಸಾಧನೆಯನ್ನು ಬಾಹ್ಯಾಕಾಶ ವಿಜ್ಞಾನದಲ್ಲಿ ಭಾರತದ ಶ್ರೇಷ್ಠತೆಯ ಅನ್ವೇಷಣೆಯಲ್ಲಿ ಒಂದು ಸ್ಮರಣೀಯ ಹೆಜ್ಜೆ ಎಂದು ಪ್ರಧಾನಿ ಬಣ್ಣಿಸಿದರು. 'ಕಳೆದ ತಿಂಗಳು, ದೇಶವು ಇಸ್ರೋದ 100ನೇ ರಾಕೆಟ್ ಉಡಾವಣೆಗೆ ಸಾಕ್ಷಿಯಾಯಿತು. ಇದು ಕೇವಲ ಒಂದು ಸಂಖ್ಯೆಯಲ್ಲ, ಆದರೆ ಬಾಹ್ಯಾಕಾಶ ವಿಜ್ಞಾನದಲ್ಲಿ ಹೊಸ ಎತ್ತರವನ್ನು ಸಾಧಿಸುವ ನಮ್ಮ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು.

ಯಶಸ್ವಿ ಚಂದ್ರಯಾನ ಮತ್ತು ಮಂಗಳಯಾನ ಕಾರ್ಯಾಚರಣೆಗಳು ಮತ್ತು ಒಂದೇ ಕಾರ್ಯಾಚರಣೆಯಲ್ಲಿ ಭಾರತದ 104 ಉಪಗ್ರಹಗಳ ದಾಖಲೆಯ ಉಡಾವಣೆಯಂತಹ ಇಸ್ರೋ ಸಂಸ್ಥೆಯ ಕೆಲವು ಪ್ರಮುಖ ಸಾಧನೆಗಳನ್ನು ಅವರು ಇದೇ ವೇಳೆ ಉಲ್ಲೇಖಿಸಿದರು. ಕಳೆದ ದಶಕದಲ್ಲಿ ಭಾರತವು ಇತರ ರಾಷ್ಟ್ರಗಳಿಗೆ ಸೇರಿದವು ಸೇರಿದಂತೆ ಸುಮಾರು 460 ಉಪಗ್ರಹಗಳನ್ನು ಉಡಾವಣೆ ಮಾಡಿದೆ. ಜೊತೆಗೆ ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹಿಳೆಯರ ಹೆಚ್ಚುತ್ತಿರುವ ಭಾಗವಹಿಸುವಿಕೆಗೆ ಮೋದಿ ಖುಷಿ ಪಟ್ಟರು., ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ. ಬಾಹ್ಯಾಕಾಶ ಕ್ಷೇತ್ರವು ನಮ್ಮ ಯುವಕರಲ್ಲಿ ನೆಚ್ಚಿನದಾಗಿದೆ ಎಂದು ನೋಡಿ ನನಗೆ ತುಂಬಾ ಸಂತೋಷವಾಗಿದೆ. ಕೆಲವು ವರ್ಷಗಳ ಹಿಂದೆ, ಬಾಹ್ಯಾಕಾಶ ಸ್ಟಾರ್ಟ್ಅಪ್‌ಗಳು ಮತ್ತು ಖಾಸಗಿ ವಲಯದ ಕಂಪನಿಗಳ ಸಂಖ್ಯೆ ನೂರಾರು ತಲುಪುತ್ತದೆ ಎಂದು ಯಾರು ಊಹಿಸಿದ್ದರು ಎಂದು ಪ್ರಧಾನಿ ಹೇಳಿದರು. 

ಮಹಿಳಾ ದಿನದಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಮಹಿಳೆಯರಿಗೆ ನೀಡಲಿರುವ ಪ್ರಧಾನಿ

ಅಂತರರಾಷ್ಟ್ರೀಯ ಮಹಿಳಾ ದಿನದಂದು ಮಹಿಳೆಯರನ್ನು ಗೌರವಿಸುವ ಸಲುವಾಗಿ ಪ್ರಧಾನಿ ಮೋದಿ ಒಂದು ವಿಶಿಷ್ಟ ಕ್ರಮವನ್ನು ಬಹಿರಂಗಪಡಿಸಿದರು. ಈ ಬಾರಿ ಮಹಿಳಾ ದಿನದಂದು, ನಾನು ನಮ್ಮ ಮಹಿಳಾ ಶಕ್ತಿಗೆ ಸಮರ್ಪಿತವಾದ ಉಪಕ್ರಮವನ್ನು ತೆಗೆದುಕೊಳ್ಳಲಿದ್ದೇನೆ. ಈ ವಿಶೇಷ ಸಂದರ್ಭದಲ್ಲಿ, ನಾನು ನನ್ನ ಎಕ್ಸ್( X), ಇನ್ಸ್ಟಾಗ್ರಾಮ್‌ನಂತಹ ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ದೇಶದ ಕೆಲವು ಸ್ಪೂರ್ತಿದಾಯಕ ಮಹಿಳೆಯರಿಗೆ ಒಂದು ದಿನದ ಮಟ್ಟಿಗೆ ಹಸ್ತಾಂತರಿಸಲಿದ್ದೇನೆ ಎಂದು ಅವರು ಕಾರ್ಯಕ್ರಮದಲ್ಲಿ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಕೆಎಸ್‌ಸಿಎ ಚುನಾವಣೆ - ಅಸ್ತಿತ್ವದಲ್ಲೇ ಇಲ್ಲದ ಕ್ಲಬ್‌ಗಳ ಹೆಸರು ಮತದಾನ ಪಟ್ಟಿಯಲ್ಲಿ ಪತ್ತೆ!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌