ಸೋನಂ ವಾಂಗ್ಚುಕ್ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಕಾಳಜಿ; ಸೆಲ್ಫಿ ವಿಡಿಯೋ ಮೂಲಕ ನೀಡಿದ್ರು ಅಮೂಲ್ಯ ಸಲಹೆ

Published : Jul 24, 2026, 09:01 AM IST
PM modi Message To Sonam Wangchuk After Ending Fast

ಸಾರಾಂಶ

ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯವಾಗಿದೆ. ಬೆನ್ನಲ್ಲೇ  ಪ್ರೀತಿಯ ಸೋನಂ ಜೀ ತೂಕ ಹೆಚ್ಚಿಸಿಕೊಳ್ಳಿ, ಆರೋಗ್ಯ ಕಾಪಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ.

ಗುರುಗ್ರಾಮ: ಕಳೆದ 26 ದಿನಗಳಿಂದ ಲಡಾಖ್‌ ಹಿತರಕ್ಷಣೆ ಮತ್ತು ವಿದ್ಯಾರ್ಥಿಗಳ ಪರವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್ ಶನಿವಾರ ತಮ್ಮ ನಿರಶನವನ್ನು ಅಂತ್ಯಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಾಂಗ್ಚುಕ್ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವ್ಯಕ್ತಪಡಿಸಿ, ಮಹತ್ವದ ಸಲಹೆ ನೀಡಿದ್ದಾರೆ.

ಶೀಘ್ರವೇ ಹಳೆಯ ತೂಕಕ್ಕೆ ಮರಳಿ

ವಾಂಗ್ಚುಕ್ ಅವರು ಉಪವಾಸ ಕೈಬಿಟ್ಟ ಬೆನ್ನಲ್ಲೇ 'ಎಕ್ಸ್' (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಸೋನಂ ಜೀ ಅವರು ತಮ್ಮ ದೈನಂದಿನ ಜೀವನದಲ್ಲಿ ವೈದ್ಯರ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಆದಷ್ಟು ಬೇಗ ತಮ್ಮ ಹಳೆಯ ತೂಕವನ್ನು (Old Weight) ಮರಳಿ ಪಡೆಯಬೇಕು ಎಂದು ನಾನು ವಿನಂತಿಸುತ್ತೇನೆ. ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಸರ್ವಶಕ್ತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಉಪವಾಸ ಅಂತ್ಯಕ್ಕೆ ಕಾರಣವೇನು?

ಜೂನ್ 28 ರಿಂದ ದೆಹಲಿಯ ಜಂತರ್ ಮಂತರ್ ಪ್ರತಿಭಟನಾಕಾರರ ಪರವಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದ ವಾಂಗ್ಚುಕ್, ಕೇಂದ್ರ ಸರ್ಕಾರದ ಭರವಸೆಯ ಮೇರೆಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿರಶನ ಅಂತ್ಯಗೊಳಿಸಿದರು. ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರು ವಾಂಗ್ಚುಕ್ ಅವರಿಗೆ ಜ್ಯೂಸ್ ಕುಡಿಸುವ ಮೂಲಕ ಉಪವಾಸ ಮುರಿಸಿದರು.

ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಮತ್ತು ಪೇಪರ್ ಲೀಕ್ ಪ್ರಕರಣಗಳ ಬಗ್ಗೆ ಸಂಸತ್ತಿನಲ್ಲಿ ಸುಧಾರಣಾ ಕ್ರಮಗಳನ್ನು ಚರ್ಚಿಸಲಾಗುವುದು ಎಂಬ ಸರ್ಕಾರದ ಭರವಸೆಯ ನಂತರ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ಇದೇ ವೇಳೆ ಪೇಪರ್ ಲೀಕ್ ಹಗರಣದ ಬಗ್ಗೆಯೂ ಮಾತನಾಡಿರುವ ಪ್ರಧಾನಿ ಮೋದಿ, ಇದು ಲಕ್ಷಾಂತರ ವಿದ್ಯಾರ್ಥಿಗಳಿಗೆ ನೋವು ತಂದಿರುವ ವಿಚಾರ. ಈ ಬಗ್ಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ಸೂಚನೆ ನೀಡಿದ್ದೇನೆ. ಸೋಮವಾರದಿಂದ ಸಂಸತ್ತಿನಲ್ಲಿ ಈ ಕುರಿತು ಹೊಸ ಬಿಲ್ ಮಂಡಿಸಿ, ಕಠಿಣ ಕಾನೂನು ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಾಂಗ್ಚುಕ್ ಅವರ ನಿರ್ಧಾರವನ್ನು ಸ್ವಾಗತಿಸಿದ್ದು, ನಿಮ್ಮ ಜೀವನ ದೇಶಕ್ಕೆ ಬಹಳ ಅಮೂಲ್ಯವಾದುದು. ನಿಮ್ಮ ತ್ಯಾಗ ಇಡೀ ರಾಷ್ಟ್ರದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ ಎಂದು ಶ್ಲಾಘಿಸಿದ್ದಾರೆ.

 

 

ವಾಂಗ್ಚುಕ್ ಅವರು ಉಪವಾಸ ಕೈಬಿಟ್ಟಿರುವುದಕ್ಕೆ ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಿಮ್ಮ ಹೋರಾಟ ಇಡೀ ದೇಶದ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿದೆ ಎಂದು ಅವರು ವಾಂಗ್ಚುಕ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ಜಂತರ್ ಮಂತರ್‌ನಲ್ಲಿ ತಮ್ಮ ಪಕ್ಷದ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಂಡಿಗೋ-ಏರ್‌ಇಂಡಿಯಾಗೆ ಸವಾಲು, ವಿಮಾನಯಾನ ಕ್ಷೇತ್ರಕ್ಕೆ ಬರಲು ನಿಯಮ ಬದಲಿಸುವಂತೆ ಕೇಂದ್ರದ ಮೊರೆ ಹೋದ ಅದಾನಿ!
ವಿದ್ಯಾರ್ಥಿಗಳ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಿಲ್ಲ, ಅವರ ನಿರಾಸೆಗೆ ಅರ್ಥವಿದೆ; ವಿದ್ಯಾರ್ಥಿಗಳ ಹೋರಾಟದ ಪರ ಧ್ವನಿ ಎತ್ತಿದ ಸಚಿನ್ ತೆಂಡೂಲ್ಕರ್