ಭಾರತ್ ಬಂದ್: ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ ಜಾರಿ!

By Suvarna News  |  First Published Dec 7, 2020, 9:36 PM IST

ರೈತರ ಬೇಡಿಕೆ ಈಡೇರಿಸಿದ ಕೇಂದ್ರ ಸರ್ಕಾರದ ವಿರುದ್ಧ ರೈತ ಸಂಘಟನೆಗಳು ನಾಳೆ(ಡಿ.08) ಭಾರತ್ ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ಬಹುತೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಬಂದ್ ಯಶಸ್ವಿಯಾಗುವ ಎಲ್ಲಾ ಸೂಚನೆಗಳು ಸಿಕ್ಕಿವೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಮಹ್ವದ ಸೂಚನೆ ನೀಡಿದೆ.


ನವದೆಹಲಿ(ಡಿ.07); ರೈತ ಸಂಘಟನೆಗಳು ನಾಳಿನ(ಡಿ.07) ಭಾರತ್ ಬಂದ್‌ಗೆ ಎಲ್ಲಾ ತಯಾರಿ ಮಾಡಿಕೊಂಡಿದೆ. ವಿರೋಧ ಪಕ್ಷಗಳು, ಎಡಪಕ್ಷಗಳು ಸೇರಿದಂತೆ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ.  ರೈತರು ತಮ್ಮ ಪಟ್ಟು ಸಡಿಲಿಸಿಲ್ಲ. ಬೇಡಿಕೆ ಈಡೇರುವವರೆಗೆ ಹೋರಾಟ ಮಾಡುವುದಾಗಿ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ  ಕೇಂದ್ರ ಸರ್ಕಾರ ರಾಜ್ಯ ಹಾಗೂ ಕೇಂದ್ರಡಾಳಿತ ಪ್ರದೇಶಕ್ಕೆ ಮಹತ್ವದ ಸೂಚನೆ ನೀಡಿದೆ.

11AM ರಿಂದ 3PM ವರೆಗೆ ಭಾರತ್ ಬಂದ್; ಗಮನಿಸಬೇಕಾದ 10 ಅಂಶ ಇಲ್ಲಿವೆ!

Latest Videos

undefined

ಕೇಂದ್ರ ಗೃಹ ಸಚಿವಾಲಯ ಇದೀಗ ಸೂಚನೆ ಜಾರಿ ಮಾಡಿದೆ. ಈ ಸೂಚನೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಭಾರತ್ ಬಂದ್ ವೇಳೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಯಾವುದೇ ನಷ್ಟ ಸಂಭವಿಸಿದಂತೆ ನೋಡಿಕೊಳ್ಳಲು ಸೂಚಿಸಿದೆ. ಇದಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಿದೆ.  ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಹೇಳಿದೆ.

ಶಾಂತಿಯುತ ಪ್ರತಿಭಟನೆಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿದೆ. ಆದರೆ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಗೃಹ ಇಲಾಖೆ, ಎಲ್ಲಾ ರಾಜ್ಯ ಹಾಗೂ ಕೇಂದ್ರಡಾಳಿತಕ್ಕೆ ಸೂಚನೆ ನೀಡಿದೆ. ಇದರ ಜೊತೆಗೆ ಕೊರೋನಾ ವೈರಸ್ ಮಾರ್ಗಸೂಚಿಗಳನ್ನು ಯಾವುದೇ ಕಾರಣಕ್ಕೂ ಉಲ್ಲಂಘಿಸಿಬಾರದು. ಇದು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಸೂಚಿಸಲಾಗಿದೆ.

ಭಾರತ್ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆ, ದೇಶವ್ಯಾಪಿ ಪ್ರತಿಭಟನೆ ಕಿಚ್ಚು!.

ಪ್ರತಿಟನೆ, ಬಂದ್ ಯಾವುದೇ ಕಾರಣಕ್ಕೂ ಹಿಂಸಾಚಾರ ರೂಪ ಪಡೆಯಬಾರದು, ಇದಕ್ಕಾಗಿ ಭದ್ರತೆ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಿದೆ.

click me!