ರಾಹುಲ್ ಗಾಂಧಿ ಹೇಳಿಕೆಯ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅಮಿತ್ ಶಾ ನೇತೃತ್ವದ ಆಡಳಿತ ಪಕ್ಷಗಳ ಸದಸ್ಯರು ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಮಸ್ತ ಹಿಂದೂ ಸಮಾಜವನ್ನು ಹಿಂಸಾವಾದಿಗಳು ಎಂದು ಹೇಳುವುದು ಗಂಭೀರ ಟೀಕೆ ಎಂದು ಎಚ್ಚರಿಸಿದ್ದಾರೆ.
ನವದೆಹಲಿ (ಜು.1): ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯ ವೇಳೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಡಿರುವ ಮಾತು ವಿವಾದಕ್ಕೆ ಕಾರಣವಾಗಿದೆ. 'ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು, ಕೇವಲ ಹಿಂಸೆ ಭಾಷೆಯನ್ನು ಮಾತನಾಡುತ್ತಾರೆ..' ಎಂದು ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ಹೇಳಿದ್ದರು. ಅವರ ಈ ಮಾತಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮಿತ್ರ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಹೇಳಿಕೆ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ನೇತೃತ್ವದ ಆಡಳಿತ ಪಕ್ಷಗಳ ಸದಸ್ಯರು ಅವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ಸಮಸ್ತ ಹಿಂದೂ ಸಮಾಜವನ್ನು ಹಿಂಸಾವಾದಿಗಳು ಎಂದು ಹೇಳುವುದು ಗಂಭೀರ ಟೀಕೆ ಎಂದು ಎಚ್ಚರಿಸಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕರ ಮಾತುಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂವಿಧಾನ ತಮಗೆ ಕಲಿಸಿದೆ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ರಾಹುಲ್ ಗಾಂಧಿ ಮಾತಿಗೆ ಮಧ್ಯಪ್ರವೇಶಿಸಿ ಎಚ್ಚರಿಸಿದ್ದಾರೆ.
ಈ ದೇಶದ ಕೋಟ್ಯಂತರ ಜನರು ತಮ್ಮನ್ನು ತಾವು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತಾರೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಯ ಮೂಲಕ ಅವರೆಲ್ಲರನ್ನೂ ಹಿಂಸಾವಾದಿಗಳು ಎಂದು ಹೇಳಿದ್ದಾರೆ ಎಂದು ಅಮಿತ್ ಶಾ ಟೀಕೆ ಮಾಡಿದ್ದಾರೆ. ಇದಕ್ಕೆ ಅಲ್ಲಿಯೇ ಉತ್ತರ ನೀಡಿದ ರಾಹುಲ್ ಗಾಂಧಿ, ಬಿಜೆಪಿ ಎಂದರೆ, ಹಿಂದೂವಲ್ಲ, ನರೇಂದ್ರ ಮೋದಿ ಎಂದರೆ ಹಿಂದೂವಲ್ಲ. ಅಮಿತ್ ಶಾ ಎಂದರೆ ಹಿಂದೂವಲ್ಲ. ಆರೆಸ್ಸೆಸ್ ಎಂದರೆ ಹಿಂದೂವಲ್ಲ. ಇವರುಗಳನ್ನು ತಮ್ಮನ್ನು ತಾವೂ ಹಿಂದೂ ಧರ್ಮದ ಏಕೈಕ ಪ್ರತಿನಿಧಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸದನವು ಸ್ಥಾಪಿತ ನಿಯಮಗಳು, ಕಾರ್ಯವಿಧಾನಗಳು ಮತ್ತು ಸಂಪ್ರದಾಯಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ಸಂದರ್ಭದಲ್ಲಿ, ಐತಿಹಾಸಿಕವಾಗಿ ಯಾವುದೇ ವಿಷಯವನ್ನು ತೆಗೆದುಕೊಂಡಿಲ್ಲ ಎಂದು ಹೇಳಿದರು.
ಎಲ್ಲಾ ಧರ್ಮಗಳು ಧೈರ್ಯದ ಬಗ್ಗೆ ಮಾತನಾಡುತ್ತವೆ, ಇಸ್ಲಾಂ, ಕ್ರಿಶ್ಚಿಯನ್ ಧರ್ಮ, ಬೌದ್ಧ, ಜೈನ ಮತ್ತು ಸಿಖ್ ಧರ್ಮಗಳನ್ನು ಉಲ್ಲೇಖಿಸಿ ನಿರ್ಭಯತೆಯ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತವೆ ಎಂದು ಕಾಂಗ್ರೆಸ್ ನಾಯಕ ಒತ್ತಿ ಹೇಳಿದರು. ಬಿಜೆಪಿಯು ಸಂವಿಧಾನ ಮತ್ತು ಭಾರತದ ಮೂಲಭೂತ ಕಲ್ಪನೆಯ ಮೇಲೆ ವ್ಯವಸ್ಥಿತ ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಆಡಳಿತ ಪಕ್ಷವು ಪ್ರಸ್ತಾಪಿಸಿದ ವಿಚಾರಗಳನ್ನು ಲಕ್ಷಾಂತರ ಜನರು ವಿರೋಧಿಸಿದ್ದಾರೆ ಎಂದು ಹೇಳಿದರು.
ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ: ಸಿದ್ದರಾಮಯ್ಯ
ತಮ್ಮ ಭಾಷಣದ ಸಮಯದಲ್ಲಿ ರಾಹುಲ್ ಗಾಂಧಿ ಶಿವ ದೇವರ ಚಿತ್ರವನ್ನು ತೋರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ, ಸದನದಲ್ಲಿ ಫಲಕಗಳನ್ನು ಪ್ರದರ್ಶನ ಮಾಡಲು ಯಾವುದೇ ನಿಯಮಗಳು ಅನುಮತಿ ನೀಡುವುದಿಲ್ಲ ಎನ್ನುವುದನ್ನು ನೀವು ತಿಳಿದುಕೊಂಡಿರಬೇಕು ಎಂದು ಹೇಳಿದರು. ಇಸ್ಲಾಂ ಮತ್ತು ಸಿಖ್ ಧರ್ಮ ಸೇರಿದಂತೆ ಎಲ್ಲಾ ಧರ್ಮಗಳು ಧೈರ್ಯ ಮತ್ತು ನಿರ್ಭೀತರಾಗಿರುವುದರ ಮಹತ್ವವನ್ನು ಒತ್ತಿಹೇಳುತ್ತವೆ ಎಂದು ರಾಹುಲ್ ಗಾಂಧಿ ಹೇಳಿದರು.. ಎಲ್ಲಾ ಧರ್ಮಗಳು ಧೈರ್ಯದ ಬಗ್ಗೆ ಮಾತನಾಡುತ್ತವೆ, ಇಸ್ಲಾಂ, ಕ್ರಿಶ್ಚಿಯನ್ ಧರ್ಮ, ಬೌದ್ಧ, ಜೈನ ಮತ್ತು ಸಿಖ್ ಧರ್ಮಗಳನ್ನು ಉಲ್ಲೇಖಿಸಿ ನಿರ್ಭಯತೆಯ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತವೆ ಎಂದು ಕಾಂಗ್ರೆಸ್ ನಾಯಕ ಒತ್ತಿ ಹೇಳಿದರು.
ಎಮೆರ್ಜೆನ್ಸಿ ನೆನೆದು 2 ನಿಮಿಷದ ಮೌನ ಪ್ರಾರ್ಥನೆಗೆ ಕರೆಕೊಟ್ಟ ಸ್ಪೀಕರ್: ವಿಪಕ್ಷಗಳ ಗಲಾಟೆ ಕಲಾಪ ಮುಂದೂಡಿಕೆ
हिंदू के ख़िलाफ़ इस अभद्र टिप्पणी पर को माफ़ी माँगनी पड़ेगी 🚩🚩
ये किसी का सागा नहीं,
और ऐसा कोई नहीं जिसको इसने ठगा नहीं pic.twitter.com/3d0HE5fJn9