ಎಲ್ಲಾ ರಾಜ್ಯ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ, ಬೊಮ್ಮಾಯಿ ಗೈರು!

By Suvarna NewsFirst Published Aug 6, 2022, 2:52 PM IST
Highlights

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ. ಈ ಸಭೆಗೆ ಈಗಾಗಲೇ ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. 

ನವದೆಹಲಿ(ಆ.06): ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಕೇಂದ್ರ ಸರ್ಕಾರ ಆಜಾದಿ ಕಾ ಅಮೃತ ಮಹೋತ್ಸವದಡಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸ್ವಾತಂತ್ರ್ಯ ದಿನಾಚರಣೆಗೆ ಕೆಲವೇ ದಿನಗಳು ಬಾಕಿ ಇರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಜೊತೆ ಇಂದು(ಆ.06) ಮಹತ್ವದ ಸಭೆ ನಡೆಸಲಿದ್ದಾರೆ. ಆಜಾದಿಕಾ ಅಮೃತ ಮಹೋತ್ಸವ ಆಚರಣೆಯನ್ನು ಯಶಸ್ವಿಗೊಳಿಸಲು ಹಾಗೂ ದೇಶಾದ್ಯಂತ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ಯಶಸ್ವಿಗೊಳಿಸಲು ಈ ಸಭೆ ಕರೆಯಲಾಗಿದೆ. ದೇಶಭಕ್ತಿಯನ್ನು ಎಲ್ಲಡೆ ಪಸರಿಸಲು, ಬೃಹತ್ ಮೆರವಣಿಗೆ, ಹರ್ ಘರ್ ತಿರಂಗ ಅಭಿಯಾನ, ಬೀದಿ ನಾಟಕ ಸೇರಿದಂತೆ ಇತರ ಕಾರ್ಯಕ್ರಮಗಳ ಮೂಲಕ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಸ್ಮರಣೀಯವಾಗಿಸಲು ಪ್ರಧಾನಿ ನರೇಂದ್ರ ಕೆಲ ಸೂಚನೆಗಳನ್ನು ನೀಡಲಿದ್ದಾರೆ. ಈ ಮಹತ್ವದ ಸಭೆಗೆ ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಗೈರಾಗಿದ್ದಾರೆ. ಇಂದ ಬೆಳಕ್ಕೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟ ಕಾರಣ ಬೊಮ್ಮಾಯಿ ದೆಹಲಿ ಪ್ರವಾಸ ರದ್ದುಗೊಳಿಸಿದ್ದಾರೆ. 

ಕೇಂದ್ರ ಸರ್ಕಾರ ಈಗಾಗಲೇ ಹರ್ ಘರ್ ತಿರಂಗ(ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ) ಹಾರಿಸುವ ಆಂದೋಲನಕ್ಕೆ ಚಾಲನೆ ನೀಡಿದ್ದಾರೆ. ಆಗಸ್ಟ್ 13 ರಿಂದ 15ರ ವರೆಗೆ ಪ್ರತಿ ಮನೆಯಲ್ಲಿ ತಿರಂಗ ಹಾರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಇತ್ತೀಚೆಗಿನ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಎಲ್ಲರೂ ಸಾಮಾಜಿಕ ಜಾಲತಾಣ ಖಾತೆ, ವ್ಯಾಟ್ಆ್ಯಪ್‌ಗಳಲ್ಲಿ ಪ್ರೋಫೈಲ್ ಇಮೇಜ್ ತಿರಂಗ ಬಳಸುವಂತೆ ಕರೆ ನೀಡಿದ್ದರು.  ಈಮೂಲಕ ಅಜಾದಿಕಾ ಅಮೃತ ಮಹೋತ್ಸವ ಸಂಭ್ರಮ ಇಮ್ಮಡಿಗೊಳಿಸಲು ರಾಜ್ಯದ ಸಹಕಾರವನ್ನು ಮೋದಿ ಕೇಳಲಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ, ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಸಿಂಗ್ ಸೇರಿ ಗಣ್ಯರ ಮತದಾನ!

ಈ ಬಾರಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ವಿಶೇಷವಾಗಿದೆ. 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. 

ಹರ್‌ ಘರ್‌ ತಿರಂಗಾ ಬಗ್ಗೆ ನಡ್ಡಾ ಜತೆ ಸಿಎಂ ಸಂವಾದ
ದೇಶದ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ‘ಹರ್‌ ಘರ್‌ ತಿರಂಗಾ’ ಅಭಿಯಾನ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದರು. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಸೇರಿದಂತೆ ಇತರರು ಭಾಗಿಯಾಗಿದ್ದರು. ರಾಜ್ಯದಲ್ಲಿಯೂ ಮನೆಮನೆಯ ಮೇಳೆ ತ್ರಿವರ್ಣ ಧ್ವಜ ಹಾರಾಡಿಸಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಬಿಜೆಪಿಯ ಲಕ್ಷಾಂತರ ಕಾರ್ಯಕರ್ತರು ಅಗತ್ಯ ಸಿದ್ಧತಾ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಕ್ಷದ ಎಲ್ಲಾ 39 ಸಂಘಟನಾ ಜಿಲ್ಲಾ ಕೇಂದ್ರದಲ್ಲಿ ರಾಷ್ಟ್ರಧ್ವಜ ಮಾರಾಟ ಮಾಡಲಾಗುವುದು. ಬೂತ್‌, ಹೋಬಳಿ, ತಾಲೂಕು ಕೇಂದ್ರದಲ್ಲಿ ನೂರಾರು ಮಂದಿ ಸೇರಿ ದೇಶಭಕ್ತಿಯ ಪಥಸಂಚಲನ ಪ್ರಭಾತ್‌ ಫೇರಿ ಮಾಡಲಾಗುತ್ತದೆ. ಇದರಲ್ಲಿ ದೇಶಭಕ್ತಿ ಗೀತೆ, ವಂದೇ ಮಾತರಂ ಇತರೆ ಗೀತೆಗಳನ್ನು ಹಾಡಲಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ, ಸ್ವಾತಂತ್ರ್ಯ ಹೋರಾಟಗಾರರ ಪುತ್ಥಳಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ವೀರಗಾಥೆಯನ್ನು ನಾಡು-ದೇಶಕ್ಕೆ ತಿಳಿಸುವ ಕೆಲಸ ಮಾಡಲಾಗುತ್ತದೆ.
 

click me!