
ಗೋವಾ(ಡಿ.11): ಗೋವಾ ಪ್ರವಾಸೋದ್ಯಮಕ್ಕೆ ಮತ್ತಷ್ಟು ಬಲ ಸಿಕ್ಕಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಗೋವಾದ ಮೋಪಾದಲ್ಲಿ ಅಂತಾಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ಗೋವಾ ಮಾಜಿ ಮುಖ್ಯಮಂತ್ರಿ, ದಿವಂಗತ ಮನೋಹರ್ ಪರಿಕ್ಕರ್ ಹೆಸರು ಇಡಲಾಗಿದೆ. ಪಣಜಿಯಿಂದ 35 ಕಿಲೋಮೀಟರ್ ದೂರದಲ್ಲಿರುವ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಪರ್ಕ ಮತ್ತಷ್ಟು ಸುಲಭವಾಗಿದೆ. ವಿಮಾನ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಮೋದಿ, ಕಾಂಗ್ರೆಸ್ ಕಾಲೆಳೆದಿದ್ದಾರೆ. ಗೋವಾದ ಮೋಪಾದಲ್ಲಿನ ವಿಮಾನ ನಿಲ್ದಾಣಕ್ಕೆ ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಕಾಲದಲ್ಲಿ ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ನಂತರ ಬಂದ ಕಾಂಗ್ರೆಸ್ ಸರ್ಕಾರ ಕಣ್ಣೆತ್ತಿ ನೋಡಲಿಲ್ಲ. ಆದರೆ 2016ರಲ್ಲಿ ನಾವು ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಿಲನ್ಯಾಸ ಮಾಡಿದ್ದೇವು. ಇದೀಗ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯನ್ನು ಮಾಡಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಮೋದಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೊಂಡ ಬೆನ್ನಲ್ಲೇ ಇಂಡಿಗೋ ಹಾಗೂ ಗೋಫಸ್ಟ್ ವಿಮಾನ ಸೇವೆ ಘೋಷಿಸಿದೆ. ಇಂಡಿಗೋ 168 ವಿಮಾನ ಸೇವೆಗಳನ್ನು ಆರಂಭಿಸುತ್ತಿದೆ. ಇತ್ತ ಗೋಫಸ್ಟ್ 48 ವಿಮಾನ ಸೇವೆ ಆರಂಭಿಸುತ್ತಿದೆ. ನೂತನ ವಿಮಾನ ನಿಲ್ದಾಣದಿಂದ ಭಾರತದ ಇತರ ನಗರಗಳಿಗೆ ಸಂಪರ್ಕ ನೀಡಲು ವಿಮಾನ ಕಂಪನಿಗಳು ಮುಂದಾಗಿದೆ. ಶೀಘ್ರದಲ್ಲೇ ವಿಮಾನ ಸೇವೆ ಆರಂಭಗೊಳ್ಳಲಿದೆ.
karnataka assembly election 2023: ಕರ್ನಾಟಕಕ್ಕೆ ಬರಲಿದೆ ಮೋದಿ ಟೀಮ್: ರಾಜ್ಯದಲ್ಲಿಯೂ ಗುಜರಾತ್ ಫಾರ್ಮುಲಾ?
ದೇಶದಲ್ಲಿ ಮೂಲಭೂತ ಸೌಕರ್ಯ ಹೆಚ್ಚಿಸುವ ಕಾರ್ಯಕ್ಕೆ ಕಾಂಗ್ರೆಸ್ ಎಂದಿಗೂ ಗಮನಕೊಟ್ಟಿಲ್ಲ. ಹಲವು ಯೋಜನೆಗಳನ್ನು ಘೋಷಿಸಿದೆ. ಆದರೆ ಹೆಚ್ಚಿನ ಯೋಜನೆಗಳನ್ನು ಆರಂಭಿಸಿಲ್ಲ. ಹಲವು ಯೋಜನೆಗಳು ಅರ್ಧಕ್ಕೆ ಕೈಬಿಟ್ಟಿದೆ. ಆದರೆ ಬಿಜೆಪಿ ಸರ್ಕಾರ ಯೋಜನೆ ಘೋಷಿಸಿ ಶಿಲನ್ಯಾಸ ಮಾಡಿ ಉದ್ಘಾಟನೆ ಮಾಡುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಈ ಹಿಂದಿನ ಸರ್ಕಾರಗಳು ಮಧ್ಯಮ ವರ್ಗದ ಜನರ ಕುರಿತು ಆಲೋಚನೆ ಮಾಡಿಲ್ಲ. ವಿಮಾನ ನಿಲ್ದಾಣ ಅಭಿವೃದ್ಧಿ ಮಾಡುವ ಕಾರ್ಯಕ್ಕೆ ಕೈಹಾಕಿಲ್ಲ. ಕಾರಣ ಈ ಹಿಂದಿನ ಸರ್ಕಾರಗಳಿಗೆ ವಿಮಾನದಲ್ಲಿ ಪ್ರಯಾಣ ಶ್ರೀಮಂತರಿಗೆ ಮಾತ್ರ ಅನ್ನೋ ಭಾವನೆ ಇತ್ತು. ಆದರೆ ಇದೀಗ ದೇಶದ ಮೂಲೆ ಮೂಲೆಗೆ ವಿಮಾನ ನಿಲ್ದಾಣ ನೀಡಲಾಗಿದೆ. ಇದರಿಂದ ಸಂಪರ್ಕ ಅತೀ ಸರಳ ಹಾಗೂ ಸುಲಭವಾಗಿದೆ. ಇಷ್ಟೇ ಅಲ್ಲ ವಿಮಾನ ಪ್ರಯಾಣ ಈ ಹಿಂದಿನಂತೆ ದುಬಾರಿಯಲ್ಲ ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ಮೋದಿ ಇನ್ನು 15 ದಿನಕ್ಕೊಮ್ಮೆ ರಾಜ್ಯಕ್ಕೆ ಬರುತ್ತಾರೆ: ಸಚಿವ ಅಶೋಕ್
2014ರ ವರೆಗೆ ಭಾರತದಲ್ಲಿ 70 ವಿಮಾನ ನಿಲ್ದಾಣಗಳಿತ್ತು. ಈ ವಿಮಾನ ನಿಲ್ದಾಣಗಳು ಪ್ರಮುಖ ನಗರಗಳಲ್ಲಿ ಮಾತ್ರ ಇತ್ತು. ಆದರೆ ಕಳೆದ 8 ವರ್ಷದಲ್ಲಿ 72 ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗಿದೆ. ಪ್ರತಿ ರಾಜ್ಯಗಳಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿಯ ವೇಗ ಹೆಚ್ಚಾಗಲಿದೆ ಎಂದು ಮೋದಿ ಹೇಳಿದ್ದಾರೆ. ಮೋಪಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಾರ್ಷಿಕ 44 ಲಕ್ಷ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ಸೌಲಭ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ