ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಕೆನ್‌- ಬೆಟ್ವಾ ನದಿ ಜೋಡಣೆಗೆ ಪ್ರಧಾನಿ ಮೋದಿ ಶಂಕು

Published : Dec 26, 2024, 05:42 AM IST
ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಕೆನ್‌- ಬೆಟ್ವಾ ನದಿ ಜೋಡಣೆಗೆ ಪ್ರಧಾನಿ ಮೋದಿ ಶಂಕು

ಸಾರಾಂಶ

ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಮಧ್ಯಪ್ರದೇಶದ ಕೆನ್‌ ಮತ್ತು ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು. ಇದು ದೇಶದ ಮೊದಲ ನದಿ ಜೋಡಣೆ ಯೋಜನೆಯಾಗಿದೆ.

ಖಜುರಾಹೋ (ಮ.ಪ್ರ.) (ಡಿ.26): ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಮಧ್ಯಪ್ರದೇಶದ ಕೆನ್‌ ಮತ್ತು ಬೆಟ್ವಾ ನದಿಗಳ ಜೋಡಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು. ಇದು ದೇಶದ ಮೊದಲ ನದಿ ಜೋಡಣೆ ಯೋಜನೆಯಾಗಿದೆ. ಮಧ್ಯಪ್ರದೇಶದ ಖಜುರಾಹೋರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ನದಿ ಜೋಡಣೆ ಯೋಜನೆಯ ಮಾದರಿಯ ಮೇಲೆ ಕೆನ್‌ ಮತ್ತು ಬೆಟ್ವಾ ನದಿಗಳ ನೀರನ್ನು ಸುರಿಯುವ ಮೂಲಕ ಮೋದಿ ಅವರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಮಾತನಾಡಿದ ಪ್ರಧಾನಿ ಮೋದಿ, ‘21ನೇ ಶತಮಾನದಲ್ಲಿ ಜಲ ಸಂಪನ್ಮೂಲದ ಸಮರ್ಪಕ ಹಾಗೂ ಉತ್ತಮವಾಗಿ ನಿರ್ವಹಣೆ ಮಾಡುವ ದೇಶ ಮಾತ್ರ ಮುಂದುವರೆಯಲು ಸಾಧ್ಯ’ ಎಂದರು. ಇದೇ ವೇಳೆ ದೇಶವನ್ನಾಳಿದ ಹಿಂದಿನ ಕಾಂಗ್ರೆಸ್‌ ಸರ್ಕಾರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ‘ಜಲ ಸಂಪನ್ಮೂಲಗಳ ಅಭಿವೃದ್ಧಿಗೆ ಬಿ.ಆರ್‌. ಅಂಬೇಡ್ಕರ್‌ ನೀಡಿದ ಕೊಡುಗೆಯನ್ನು ಕಾಂಗ್ರೆಸ್‌ ಮರೆತಿದೆ. ನೀರಿನ ವಿಷಯದಲ್ಲಿ ದೂರದೃಷ್ಟಿ ಹೊಂದಿದ್ದ ಅಂಬೇಡ್ಕರ್‌ ಹಲವು ಡ್ಯಾಂಗಳನ್ನು ನಿರ್ಮಿಸಿದರು. ಪ್ರಮುಖ ನದಿ ಮುಖಜ ಯೋಜನೆ ಅಭಿವೃದ್ಧಿ ಹಾಗೂ ಕೇಂದ್ರ ಜಲ ಮಂಡಳಿ ಸ್ಥಾಪನೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ಈ ಶತಮಾನದದಲ್ಲಿ ನೀರಿನ ಭದ್ರತೆಯೇ ಬಹುದೊಡ್ಡ ಸವಾಲಾಗಿದೆ. 

ಧರ್ಮಸ್ಥಳಕ್ಕೆ ನಾನು ಬಿರ್ತಿನಿ, ನೀವು ಬನ್ನಿ ಆಣೆ ಮಾಡಿ: ಸಿ.ಟಿ.ರವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸವಾಲು

ಆದರೆ ಕಾಂಗ್ರೆಸ್‌ ಇದರ ಕುರಿತು ಗಮನವನ್ನೇ ಹರಿಸಲಿಲ್ಲ. ಯೋಜನೆಗಳನ್ನು ಉದ್ಘಾಟಿಸಿ 35-40 ವರ್ಷಗಳಾದರೂ ಅವುಗಳನ್ನು ಕಾರ್ಯರೂಪಕ್ಕೆ ತರದೆ ಮುಂದೂಡಲಾಯಿತು’ ಎಂದು ಕಿಡಿಕಾರಿದರು. ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಮುಂದಿಟ್ಟುಕೊಂಡು ಕಾಂಗ್ರೆಸ್‌, ಬಿಜೆಪಿ ವಿರುದ್ಧ ಮುಗಿಬಿದ್ದಿರುವ ಹೊತ್ತಿನಲ್ಲೇ, ಇತಿಹಾಸವನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ ತಿರುಗೇಟು ನೀಡುವ ಯತ್ನವನ್ನು ಪ್ರಧಾನಿ ಮೋದಿ ಮಾಡಿದರು.ಇದೆ ವೇಳೆ ಖಂ ಡ್ವಾ ಜಿಲ್ಲೆಯ ಓಂಕಾರೇಶ್ವರ ತೇಲುವ ಸೌರ ಯೋಜನೆಯನ್ನು ವರ್ಚುವಲ್‌ ಆಗಿ ಉದ್ಘಾಟಿಸಿದ ಮೋದಿ, ದೌಧನ್‌ ಅಣೆಕಟ್ಟು ನಿರ್ಮಾಣ ಯೋಜನೆ, ಕಾಲುವೆ ನಿರ್ಮಾಣ ಯೋಜನೆಗೂ ಮೋದಿ ಶಂಕುಸ್ಥಾಪನೆ ಮಾಡಿದರು.

ನದಿ ಜೋಡಣೆ ಪ್ರಯೋಜನ: ಬೆನ್‌ ನದಿಯ ಹೆಚ್ಚುವರಿ ನೀರನ್ನು ಅಣೆಕಟ್ಟಿನ ಮೂಲಕ ಸಂಗ್ರಹಿಸಿ ಅದನ್ನು ಬೆಟ್ವಾ ನದಿಗೆ ಹರಿಸುವ ಯೋಜನೆ ಇದಾಗಿದೆ. 8 ವರ್ಷಗಳಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಿರುವ ಈ ಯೋಜನೆಗೆ 44,605 ಕೋಟಿ ರು. ವೆಚ್ಚವಾಗುವ ನಿರೀಕ್ಷೆ ಇದೆ. ಯೋಜನೆಯಿಂದ ಮಧ್ಯಪ್ರದೇಶ, ಉತ್ತರಪ್ರದೇಶದ 10 ಲಕ್ಷ ಕೃಷಿಗೆ ನೀರಾವರಿ ಸೌಲಭ್ಯ, 65 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಸಿಗಲಿದೆ. ಜೊತೆಗೆ 130 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯ ಗುರಿಯನ್ನೂ ಹೊಂದಲಾಗಿದೆ.

ಎನ್‌ಕೌಂಟರ್‌ ಹೇಳಿಕೆ ಜೋಶಿಗೆ ಶೋಭೆ ತರದು: ಸಚಿವ ಎಚ್‌.ಕೆ.ಪಾಟೀಲ್‌

ವಾಜಪೇಯಿ ಸ್ಮರಣಾರ್ಥ ನಾಣ್ಯ, ಸ್ಟ್ಯಾಂಪ್‌ ಬಿಡುಗಡೆ: ದೇಶದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಯಪೇಯಿ ಅವರ ಜನ್ಮಶತಮಾನೋತ್ಸವದ ಪ್ರಯುಕ್ತ ಅವರ ಸ್ಮರಣಾರ್ಥವಾಗಿ ಪ್ರಧಾನಿ ಮೋದಿ ನಾಣ್ಯ ಹಾಗೂ ಸ್ಟ್ಯಾಂಪ್‌ ಬಿಡುಗಡೆ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್
ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ