ಜೆಪಿ ನಡ್ಡಾ, ಬಿಎಲ್ ಸಂತೋಷ್ ಭೇಟಿಯಾದ ಪ್ರಧಾನಿ ಮೋದಿ; ಮಹತ್ವದ ಚರ್ಚೆ!

Published : Jul 11, 2021, 09:14 PM IST
ಜೆಪಿ ನಡ್ಡಾ,  ಬಿಎಲ್ ಸಂತೋಷ್ ಭೇಟಿಯಾದ ಪ್ರಧಾನಿ ಮೋದಿ; ಮಹತ್ವದ ಚರ್ಚೆ!

ಸಾರಾಂಶ

BJP ರಾಷ್ಟ್ರೀಯ ಅಧ್ಯಕ್ಷ, ರಾಷ್ಟ್ರೀಯ ಕಾರ್ಯದರ್ಶಿ ಜೊತೆ ಮೋದಿ ಸಭೆ ಜೆಪಿ ನಡ್ಡಾ ಅಧೀಕೃತ ನಿವಾಸದಲ್ಲಿ ಮಹತ್ವದ ಸಭೆ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕರು ಭಾಗಿ

ನವದೆಹಲಿ(ಜು.11):  ಪ್ರಧಾನಿ ನರೇಂದ್ರ ಮೋದಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿಎಲ್ ಸಂತೋಷ್ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ನಡ್ಡಾ ಅಧೀಕೃತ ನಿವಾಸದಲ್ಲಿ ಈ ಸಭೆ ನೆಡಸಲಾಗಿದ್ದು, ಮುಂಬರುವ ಪಂಚ ರಾಜ್ಯಗಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ತಯಾರಿ ಹಾಗೂ ಸಿದ್ದತೆಗಳ ಕುರಿತು ಮಾತುಕತೆ ನಡೆಸಲಾಗಿದೆ.

#PeoplesPadma ಪ್ರಶಸ್ತಿಗೆ ಹೆಸರು ಸೂಚಿಸುವಂತೆ ಜನತೆಗೆ ಮೋದಿ ಆಹ್ವಾನ

ಬಿಜೆಪಿ ಮೂಲಗಳ ಪ್ರಕಾರ ಮಹಾರಾಷ್ಟ್ರದ ಮಾಜಿ ಮಂತ್ರಿ ವಿನೋದ್ ತಾವ್ಡೆ ಮತ್ತು ಪಂಕಜಾ ಮುಂಡೆ, ಉತ್ತರ ಪ್ರದೇಶದ ಸಂಸದರಾದ ಹರೀಶ್ ದ್ವಿವೇದಿ, ವಿನೋದ್ ಸೋಂಕರ್, ಅನುಪಮ್ ಹಜ್ರಾ ಮತ್ತು ಸತ್ಯ ಕುಮಾರ್ ಈ ಸಭೆಯಲ್ಲಿ ಉಪಸ್ಥಿತರಿದ್ದರು. 

ಮುಂದಿನ ವರ್ಷದ ಆರಂಭದಲ್ಲಿ ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ಹಾಗೂ ಗೋವಾ ವಿಧಾನ ಸಭಾ ಚುನಾವಣೆ ಎದುರಾಗಲಿದೆ. ಹೀಗಾಗಿ ಈ ಚುನಾವಣೆಗೆ ತಯಾರಿ ಕುರಿತು ಮಹತ್ವದ ಸಭೆ ನಡೆಸಲಾಗಿದೆ. ಕೇಂದ್ರ ಸಂಪುಟ ಪುನಾರಚನೆಯಾದ ಬೆನ್ನಲ್ಲೇ ಈ ಸಭೆ ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

ಉ.ಪ್ರ: ಮಂಡಲ ಪಂಚಾಯತ್‌ನಲ್ಲೂ ಕೇಸರಿ ಪತಾಕೆ, ಯೋಗಿಗೆ ಮೋದಿ ಹಾರೈಕೆ

ಸತತ 1 ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೊರೋನಾ ಲಸಿಕಾ ಅಭಿಯಾನ, ಲಸಿಕೆ ಪೂರೈಕೆ ಕುರಿತು ಜೆಪಿ ನಡ್ಡಾ ಮಾತುಕತೆ ನಡೆಸಿದ್ದಾರೆ. ಯಾವುದೇ ರಾಜ್ಯದಲ್ಲಿ ಲಸಿಕೆ ಕೊರತೆಯಾಗದಂತೆ ಕೈಗೊಂಡಿರುವ ಕ್ರಮಗಳ ಕುರಿತು ಮಾತುಕತೆ ನಡೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!