
ಆಯೋಧ್ಯೆ(ಮೇ.05) ಆಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ರಾಮನ ದರ್ಶನ ಪಡೆದಿದ್ದಾರೆ. ವಾರಣಾಸಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ಮೋದಿ, ನಾಮಪತ್ರ ಸಲ್ಲಿಕೆಗೂ ಮೊದಲು ಆಯೋಧ್ಯೆ ರಾಮ ಮಂದಿರಕ್ಕೆ ತೆರಳಿ ರಾಮಲಲ್ಲಾ ದರ್ಶನ ಪಡೆದಿದ್ದಾರೆ. ರಾಮಲಲ್ಲಾಗೆ ವಿಶೇಷ ಆರತಿ ಬೆಳಗಿ ಪೂಜೆ ಸಲ್ಲಿಸಿದ್ದಾರೆ. ರಾಮಲಲ್ಲಾ ದರ್ಶನದ ಬಳಿಕ ಮೋದಿ ರೋಡ್ ಶೋ ನಡೆಸಲಿದ್ದಾರೆ.
ಜನವರಿ 22ರಂದು ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆಯಾಗಿತ್ತು. ರಾಮ ಲಲ್ಲಾನ ಪ್ರಾಣಪ್ರತಿಷ್ಠೆಯನ್ನು ಪ್ರಧಾನಿ ಮೋದಿ ನೇರವೇರಿಸಿದ್ದರು. ಕಠಿಣ ವೃತ ಕೈಗೊಂಡು ಪ್ರಾಣಪ್ರತಿಷ್ಠೆ ನೆರವೇರಿಸಿದ್ದ ಪ್ರಧಾನಿ ಮೋದಿಗೆ ದೇಶ ವಿದೇಶಗಳಿಂದ ಅಭಿನಂದನೆಗಳು ವ್ಯಕ್ತವಾಗಿತ್ತು. ಇದಾದ ಬಳಿಕ ಸಾರ್ವಜನಿಕರಿಗೆ ದರ್ಶನಕ್ಕೆ ರಾಮ ಮಂದಿರ ಮುಕ್ತವಾಗಿತ್ತು. ಪ್ರಾಣಪ್ರತಿಷ್ಠೆ ಬಳಿಕ ಇದೇ ಮೊದಲ ಬಾರಿಗೆ ಆಯೋಧ್ಯೆ ಭೇಟಿ ನೀಡಿದ ಮೋದಿ, ರಾಮ ಮಂದಿರ ತೆರಳಿ ಸಾಷ್ಟಾಂಗ ನಮಸ್ಕಾರ ಹಾಕಿ ಪೂಡೆ ಸಲ್ಲಿಸಿದ್ದಾರೆ.
PM Modi Letter: ಬಡವರ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡೋ ಕಾಂಗ್ರೆಸ್ ಅಜೆಂಡಾ ಬಗ್ಗೆ ಎಲ್ಲರಿಗೂ ತಿಳಿಸಿ..
ಮೋದಿ ವಾರಣಾಸಿ ಕ್ಷೇತ್ರದಿಂದ ನಾಮ ಪತ್ರ ಸಲ್ಲಿಕೆಗೆ ಆಯೋಧ್ಯೆಯಿಂದಲೇ ಪ್ರಚಾರ ಆರಂಭಿಸಿದ್ದಾರೆ. ಆಯೋಧ್ಯಯಲ್ಲಿ ರೋಡ್ ಶೋ ಆರಂಭಕ್ಕೂ ಮೊದಲು ರಾಮ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಮಮಂದಿರಕ್ಕೆ ಬೇಟಿ ನೀಡಿ ದರ್ಶನ ಪಡೆದಿದ್ದರು. ರಾಮಮಂದಿರ ಪ್ರಾಣಪ್ರತಿಷ್ಠಾಪನೆಯಾದ ಬಳಿಕ ಮೊಟ್ಟಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬಾಲ ರಾಮನ ದರ್ಶನ ಪಡೆದಿದ್ದರು. ಮೊದಲಿಗೆ ಹನುಮಾನ್‌ಗಢಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಾಷ್ಟ್ರಪತಿ ಬಳಿಕ ರಾಮಮಂದಿರ ಪ್ರವೇಶಿಸಿ ಗರ್ಭಗುಡಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದರು. ಬಳಿಕ ಬಾಲಕರಾಮನಿಗೆ ಆರತಿ ಎತ್ತಿ ಪೂಜೆ ಸಲ್ಲಿಸಿದರು. ನಂತರದಲ್ಲಿ ಪವಿತ್ರ ಸರಯೂ ನದಿಯಲ್ಲಿ ನಡೆಯುವ ಆರತಿ ಪೂಜೆಯಲ್ಲಿ ಪಾಲ್ಗೊಂಡರು.
ಆದಿವಾಸಿ ಸಮುದಾಯಕ್ಕೆ ಸೇರಿದ ಕಾರಣ ರಾಷ್ಟ್ರಪತಿಯನ್ನು ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ ನೀಡಿಲ್ಲ ಅನ್ನೋ ವಿಪಕ್ಷಗಳ ಟೀಕೆ ಇದೀಗ ಬಿಜೆಪಿ ಈ ಭೇಟಿ ಮೂಲಕ ಉತ್ತರ ನೀಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ