ಮೈಸೂರು(ಜೂ.20): ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ನಾಡದೇವವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸಾಥ್ ನೀಡಿದರು.
ಸುತ್ತೂರು ಮಠದಲ್ಲಿನ ಕಾರ್ಯಕ್ರಮ ಮುಗಿಸಿದ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು. ಬೆಟ್ಟಕ್ಕೆ ತೆರಳು ಮಾರ್ಗದುದ್ದಕ್ಕೂ ಜನರು ಮೋದಿ ನೋಡಲು ಕಾದು ಕುಳಿತಿದ್ದರು. ಎಲ್ಲರತ್ತ ಕೈಬೀಸುತ್ತಾ ತೆರಳಿದ ಮೋದಿ ಚಾಮುಂಡೇಶ್ವರಿ ದೇಗುಲ ಪ್ರವೇಶಿಸಿದರು.
undefined
PM Modi in Mysuru ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ!
ಚಾಮುಂಡೇಶ್ವರಿ ದೇಗುಲ ಪ್ರೇವಶ ದ್ವಾರದಲ್ಲಿರುವ ಗಣಪತಿಗೆ ಪೂಜೆ ಸಲ್ಲಿಸಿದ ಮೋದಿ ಒಳ ಪ್ರವೇಶಿಸಿದರು. ಈ ವೇಳೆ ಅರ್ಚಕರು ಶಾಲು ಹೊದಿಸಿ ಪ್ರಧಾನಿಯನ್ನು ಸ್ವಾಗತಿಸಿದರು. ನಾಡದೇವತೆಗೆ ಪಾರ್ಥನೆ ಸಲ್ಲಿಸಿದ ಮೋದಿ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು.
ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. pic.twitter.com/lJvhVcn7ob
— Pratap Simha (@mepratap)
ದೇವಸ್ಥಾನದ ಗರ್ಭಗುಡಿ ಎದುರು ಕುಳಿತು ಪೂಜೆ ನೆರವೇರಿಸಿದರು. ಇದೇ ವೇಳೆ ಮೋದಿ ನಾಡದೇವತೆ ಎದರು ಸಂಕಲ್ಪ ಮಾಡಿದರು. ಬಳಿಕ ಗರ್ಭಗುಡಿಗೆ ಸುತ್ತು ಹಾಕಿದ ಮೋದಿ, ಚಾಮುಂಡಿ ತಾಯಿ ಪಾದಕ್ಕೆ ನಮಸ್ಕರಿಸಿದರು.ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಹೊರಬಂದ ಮೋದಿ ದೇಗುಲಕ್ಕೆ ಕಾಣಿಕೆ ಹಾಕಿದರು.
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಮೈಸೂರು ವಿವಿ ಕಾರ್ಯಸೌಧದ ಎದುರಿನ ಓವಲ್ ಮೈದಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜತೆಗೂಡಿ ವಿಶೇಷ ಸೇನಾ ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಅವರನ್ನು ಸಚಿವ ಕೆ. ಗೋಪಾಲಯ್ಯ, ಡಾ.ಕೆ. ಸುಧಾಕರ್, ಶಾಸಕರಾದ ಜಿ.ಟಿ. ದೇವೇಗೌಡ, ಎಲ…. ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮೇಯರ್ ಸುನಂದಾ ಪಾಲನೇತ್ರ ಆತ್ಮೀಯವಾಗಿ ಸ್ವಾಗತಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳ ಆಯ್ದ ಫಲಾನುಭವಿಗಳೊಡನೆ ಸಂವಾದ ನಡೆಸಿ ವೇದಿಕೆಗೆ ಆಗಮಿಸಿದ ಪ್ರಧಾನಿಗೆ ಸಿಎಂ ಬೊಮ್ಮಾಯಿ ವಿಶೇಷವಾಗಿ ರೇಷ್ಮೆಯಿಂದ ಸಿದ್ಧಪಡಿಸಿದ ಮೈಸೂರು ಪೇಟ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.
ಕರ್ನಾಟಕದಲ್ಲಿ ಮೋದಿ ಸಂಚಲನ, ಬೆಂಗಳೂರು ಮೈಸೂರಿನಲ್ಲಿ ಹಲವು ಕಾರ್ಯಕ್ರಮ!
ಕೇಂದ್ರ ಯೋಜನೆಗಳ ಫಲಾನುಭವಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಸಂವಾದ ನಡೆಸಿ, ಸಾರ್ವಜನಿಕರು ಯೋಜನೆಯ ಪ್ರಯೋಜನ ಪಡೆಯುವಂತೆ ಕಿವಿಮಾತು ಹೇಳಿದರು. ಬೆಂಗಳೂರಿನಿಂದ ಮೈಸೂರು ವಿವಿ ಓವೆಲ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸಿ ನಂತರ ಮಹಾರಾಜ ಕಾಲೇಜು ಮೈದಾನದ ವೇದಿಕೆ ಹಿಂಭಾಗದಲ್ಲಿ ಏರ್ಪಡಿಸಿದ್ದ ಕೇಂದ್ರದ ಯೋಜನೆಗಳ 15 ಫಲಾನುಭವಿಗಳ ಜತೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚರ್ಚಿಸಿದರು. ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಯಿಂದ ಬಂದ ಫಲಾನುಭವಿಗಳು ಪ್ರಧಾನಿ ಮೋದಿ ಅವರ ಜತೆ ಚರ್ಚಿಸಿ ಕೇಂದ್ರ ಯೋಜನೆಯಿಂದ ಆದ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.