ಶಹೀದ್ ದಿವಸ್: ಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ನಮನ

Suvarna News   | Asianet News
Published : Jan 30, 2020, 01:09 PM ISTUpdated : Jan 30, 2020, 01:16 PM IST
ಶಹೀದ್ ದಿವಸ್: ಗಾಂಧಿ ಸಮಾಧಿಗೆ ಪ್ರಧಾನಿ ಮೋದಿ ನಮನ

ಸಾರಾಂಶ

ಹುತಾತ್ಮ ದಿನ ಅಂಗವಾಗಿ ಮಹಾತ್ಮಾ ಗಾಂಧಿ ಸಮಾಧಿಗೆ ಮೋದಿ ಪುಷ್ಪ ನಮನ| ಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿಜೀ ಸಮಾಧಿ| ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರಿಂದ ರಾಷ್ಟ್ರಪಿತನಿಗೆ ಗೌರವ ನಮನ| ಹುತಾತ್ಮ ದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವೀಟ್|

ನವದೆಹಲಿ(ಜ.30): ಮಹಾತ್ಮಾ ಗಾಂಧಿಜೀ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ಮೋದಿ, ದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿಜೀ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಮಹಾತ್ಮಾ ಗಾಂಧಿಜೀ ಪುಣ್ಯತಿಥಿಯನ್ನು ಶಹೀದ್ ದಿವಸ್(ಹುತಾತ್ಮ ದಿನ) ಎಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಗಾಂಧಿ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಹಿರಿಯ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮೂರೂ ಸೇನಾಪಡೆ ಮುಖ್ಯಸ್ಥರು ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರಿಗೆ ಗೌರವ ನಮನ ಸಲ್ಲಿಸಿದರು.

ಸ್ವಾತಂತ್ರ್ಯ ಸಿಕ್ಕ ದಿನ ಪಾಕ್‌ನಲ್ಲಿ ಇರಲು ಬಯಸಿದ್ದರು ಗಾಂಧಿ!

ಇದಕ್ಕೂ ಮೊದಲು ಹುತಾತ್ಮ ದಿನದ ಅಂಗವಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಬಾಪು ಅವರ ವ್ಯಕ್ತಿತ್ವ, ಸಿದ್ಧಾಂತ ಮತ್ತು ತತ್ವಗಳು ಯಾವಾಗಲೂ ಶ್ರೀಮಂತ ಭಾರತದ ಅಭ್ಯದಯಕ್ಕಾಗಿ ಪ್ರಯತ್ನಿಸಲು ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ನೇಪಾಳ ಜೆನ್‌-ಝೀ ದಂಗೆ: ₹8.5 ಸಾವಿರ ಕೋಟಿ ನಷ್ಟ
ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು