
ನವದೆಹಲಿ(ಏ.01): ತುಮಕೂರು ಸಿದ್ದಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ 114ನೇ ವರ್ಷದ ಜಯಂತಿಯನ್ನು, ಸಿದ್ದಗಂಗಾ ಮಠದಲ್ಲಿ ಕೊರೋನಾದಿಂದಾಗಿ ಅತ್ಯಂತ ಸರಳವಾಗಿ ಆಚರಿಸಲಾಗಿದೆ. ಸಿದ್ಧಲಿಂಗ ಸ್ವಾಮೀಜಿ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸಿ ಪೂಜೆ ನೆರವೇರಿಸಿದ್ದಾರೆ. ಹೀಗಿರುವಾಗ ಸಮಾಜದ ಏಳಿಗೆಗೆ ಶ್ರಮಿಸಿ, ಬಡವರ ಪಾಲಿನ ದೇವರಾಗಿದ್ದ ತ್ರಿವಿಧದಾಸೋಹಿಯನ್ನು ಪ್ರಧಾನಿ ಮೋದಿ ಸ್ಮರಿಸಿ, ನಮಿಸಿದ್ದಾರೆ.
'ಕಾಯಕಯೋಗಿ'ಯ 15 ನುಡಿಮುತ್ತುಗಳು: ಪಾಲಿಸಿದರೆ ಕೈಲಾಸವೇ ನಮ್ಮದು
ಹೌದಿ ಶಿವಕುಮಾರ ಸ್ವಾಮೀಜಿ ಜಯಂತಿಯನ್ನು ಅವರನ್ನು ಸ್ಮರಿಸಿ ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ಮೋದಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುವೆ. ಸಮಾಜಕ್ಕೆ ಸ್ವಾಮಿಗಳು ಸಲ್ಲಿಸಿದ ಸೇವೆ, ಬಡವರ ಬಗೆಗಿನ ಅವರ ಕಾಳಜಿ ಸ್ಮರಣಾರ್ಹ. ಶಿವಕುಮಾರ ಸ್ವಾಮೀಜಿಯವರ ಉದಾತ್ತ ಆಲೋಚನೆ, ಆದರ್ಶಗಳಿಂದ ನಾವು ಸ್ಪೂರ್ತಿ ಪಡೆದಿದ್ದೇವೆ ಎಂದಿದ್ದಾರೆ.
ಇನ್ನು ಪ್ರಧಾನಿ ನರೇಮದ್ರ ಮೋದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದಾಗ ಶಿವಕುಮಾರ ಸ್ವಾಆಮೀಜಿ ಜೊತೆ ತೆಗೆಸಿಕೊಂಡಿರುವ ಪೋಟೋಗಳನ್ನು ಟ್ವೀಟ್ ಮಾಡಿದ್ದಾರೆ.,
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ