
ನವದೆಹಲಿ(ಮೇ 28) ಸ್ವಾತಂತ್ರ್ಯ ಸೇನಾನಿ, ಬರಹಗಾರ, ಕವಿ, ರಾಷ್ಟ್ರೀಯವಾದಿ, ದಾರ್ಶನಿಕ ವೀರ ಸಾವರ್ಕರ್ ಅವರಿಗೆ ಪ್ರಧಾನಿ ಮೋದಿ ನಮನ ಸಲ್ಲಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ, ರಾಷ್ಟ್ರಭಕ್ತ ಸಾವರ್ಕರ್ ಅವರಿಗೆ ನಮನ ಸಲ್ಲಿಸುತ್ತಿದ್ದೇನೆ ಎಂದು ಪ್ರಧಾನಿ ತಿಳಿಸಿದ್ದಾರೆ. ಪ್ರತಿಯೊಬ್ಬ ರಾಷ್ಟ್ರೀಯವಾದಿಗಳ ಹೃದಯ ಮತ್ತು ಮನಸ್ಸಿನಲ್ಲಿ ವೀರ ಸಾವರ್ಕರ್ ಸ್ಥಾನ ಪಡೆದಿದ್ದಾರೆ ಎಂದಿದ್ದಾರೆ.
ಪರ-ವಿರೋಧ ಎಲ್ಲವೂ ಇದೆ, ಸಾವರ್ಕರ್ ಬಗ್ಗೆ ತಿಳಿಯಬೇಕಾದದ್ದು
ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ನಮನ ಸಲ್ಲಿಸಿದ್ದಾರೆ. ಸಾವರ್ಕರ್ 1883 ರಲ್ಲಿ ಮಹಾರಾಷ್ಟ್ರದಲ್ಲಿ ಜನಿಸಿದರು. ನಾಸಿಕ್ ಜಿಲ್ಲೆಯಲ್ಲಿ ಹುಟ್ಟಿದ ವಿ.ಡಿ.ಸಾವರ್ಕರ್ ಸ್ವಾತಂತ್ರ್ಯವೀರ ಸಾವರ್ಕರ್ ಅಥವಾ ಸಾವರ್ಕರ್ ಎಂದೇ ಭಾರತದಾದ್ಯಂತ ಜನಪ್ರಿಯ.
ಹಿಂದೂ ಮಹಾಸಭಾವನ್ನು ಮುನ್ನಡೆಸಿಕೊಂಡು ಹೋಗಿ ಹಿಂದುತ್ವವನ್ನು ಜನಪ್ರಿಯಗೊಳಿಸಿದರು. 1966ರ ಫೆಬ್ರವರಿ 26ರಂದು ತಮ್ಮ 82ನೇ ವಯಸ್ಸಿನಲ್ಲಿ ನಿಧನರಾದರು. ಸಾವರ್ಕಕರ್ ಕವಿ ಮತ್ತು ಬರಹಗಾರರಾಗಿಯೂ ಹೆಸರು ಪಡೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ