
ನವದೆಹಲಿ(ಜ.26): ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ಮೋದಿ ತಮ್ಮ ವರ್ಷದ ಮೊದಲ ‘ಮನ್ ಕಿ ಬಾತ್’ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದು, ಖಾದಿಯತ್ತ ಆಕರ್ಷಿತರಾಗುವಂತೆ ಯುವ ಪೀಳಿಗೆಗೆ ಕರೆ ನೀಡಿದ್ದಾರೆ.
ದೇಶದ ಜನತೆಗೆ 71ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ದೇಶ ಸಾಗಿ ಬಂದ ಹಾದಿಯನ್ನು ಮೆಲುಕು ಹಾಕಿದರು.
ಈ ವೇಳೆ ಖಾದಿಯ ಮಹತ್ವವನ್ನು ಸಾರಿದ ಪ್ರಧಾನಿ ಮೋದಿ, ದೇಶದ ಯುವ ಪೀಳಿಗೆ ಮಹಾತ್ಮಾ ಗಾಂಧಿಜೀ ಅವರ ಖಾದಿ ಕರೆಗೆ ಓಗೊಟ್ಟು ಖಾದಿ ಬಟ್ಟೆಯತ್ತ ಆಕರ್ಷಿತರಾಗಬೇಕು ಎಂದು ಕರೆ ನೀಡಿದರು.
ಮನ್ ಕಿ ಬಾತ್‌ನಲ್ಲಿ ಯುವಕರ ಮನದಾಳ ಬಿಚ್ಚಿಟ್ಟ ಪ್ರಧಾನಿ ಮೋದಿ!
ದೇಶದ ಜಲ ಸಂಪನ್ಮೂಲದ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಸರ್ಕಾರ ಕೈಗೊಂಡ ಕ್ರಮಗಳು ತೃಪ್ತಿದಾಯಕ ಎಂದು ಪ್ರಧಾನಿ ಮೋದಿ ನುಡಿದರು.
ಭಾರತೀಯ ಕ್ರೀಡಾ ಕ್ಷೇತ್ರದ ಚಹರೆ ಬದಲಾಗುತ್ತಿದ್ದು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತೀಯ ಕ್ರೀಡಾಪಟುಗಳು ಮಿಂಚುತ್ತಿರುವುದು ಹೆಮ್ಮೆಯ ವಿಷಯ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು.
ಭಾರತದ ವಿಜ್ಞಾನ ಕ್ಷೇತ್ರದ ಬೆಳವಣಿಗೆ ಇಡೀ ಜಗತ್ತಿನ ಗಮನ ಸೆಳೆದಿದ್ದು, ಭಾರತೀಯ ವಿಜ್ಞಾನಿಗಳ ಸಾಧನೆಗೆ ವಿಶ್ವ ಬೆರಗಾಗಿದೆ ಎಂದು ಪ್ರಧಾನಿ ಮೋದಿ ಹೆಮ್ಮಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ