
ವಾರಣಾಸಿ (ಆ.2): ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ 'ಭಾರತ ಸತ್ತ ಆರ್ಥಿಕತೆ' ಎಂಬ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ.
ಟ್ರಂಪ್‌ರ 25% ಸುಂಕ ಘೋಷಣೆಗೆ ಇಂದು ವಾರಣಾಸಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ವಿಶ್ವ ಆರ್ಥಿಕತೆಯು ಅನೇಕ ಆತಂಕಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಭಾರತ ತನ್ನ ರೈತರು, ಸಣ್ಣ ಕೈಗಾರಿಕೆಗಳು ಮತ್ತು ಯುವಕರ ಉದ್ಯೋಗಕ್ಕೆ ಆದ್ಯತೆ ನೀಡುತ್ತಿದೆ. ನಮ್ಮ ಸರ್ಕಾರ ದೇಶದ ಹಿತಾಸಕ್ತಿಗಾಗಿ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೋದಿ ಹೇಳಿದ್ದಾರೆ.
ಸ್ವದೇಶಿ ಚಳವಳಿಗೆ ಕರೆ:
ಪ್ರಧಾನಿ ಮೋದಿ ಎಲ್ಲ ಭಾರತೀಯರಿಗೆ 'ಸ್ವದೇಶಿ' ಉತ್ಪನ್ನಗಳಿಗೆ ಪ್ರತಿಜ್ಞೆ ಮಾಡುವಂತೆ ಮನವಿ ಮಾಡಿದ್ದಾರೆ. 'ಜಗತ್ತು ಅಸ್ಥಿರತೆಯ ವಾತಾವರಣವನ್ನು ಎದುರಿಸುತ್ತಿರುವಾಗ, ಸ್ವದೇಶಿ ವಸ್ತುಗಳನ್ನು ಖರೀದಿಸುವ ಮತ್ತು ಮಾರಾಟ ಮಾಡುವ ನಿರ್ಣಯವು ದೇಶಕ್ಕೆ ನಿಜವಾದ ಸೇವೆಯಾಗಲಿದೆ. ಇದು ಮಹಾತ್ಮ ಗಾಂಧಿಯವರಿಗೆ ಒಂದು ಗೌರವವಾಗಿರುತ್ತದೆ' ಎಂದರು.
ಟ್ರಂಪ್‌ರ ಟೀಕೆಗೆ ತಿರುಗೇಟು:
ಜುಲೈ 31 ರಂದು ಟ್ರಂಪ್ ಭಾರತದ ಆಮದುಗಳ ಮೇಲೆ 25% ಸುಂಕ ವಿಧಿಸುವುದಾಗಿ ಘೋಷಿಸಿದ್ದರು. ಒಂದು ದಿನದ ನಂತರ, ಭಾರತ-ರಷ್ಯಾ ಸಂಬಂಧಗಳನ್ನು ಟೀಕಿಸಿ, ಎರಡೂ ದೇಶಗಳನ್ನು 'ಸತ್ತ ಆರ್ಥಿಕತೆಗಳು' ಎಂದು ಟ್ರೂತ್ ಸೋಶಿಯಲ್‌ನಲ್ಲಿ ಕರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮೋದಿ, ಭಾರತದ ಆರ್ಥಿಕ ಪ್ರಗತಿ ಬೆಳವಣಿಗೆ ಏರಿಕೆಯಾಗುತ್ತಿದೆ. ದೇಶದ ಹಿತಾಸಕ್ತಿಗಳಿಗೆ ಆದ್ಯತೆ ನೀಡುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ