ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ಮೋದಿ ಕನ್ನಡದಲ್ಲೇ ಶುಭಾಶಯ!

By Chethan KumarFirst Published Nov 1, 2024, 12:07 PM IST
Highlights

ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಕನ್ನಡದಲ್ಲಿ ಶುಭಾಶಯ ತಿಳಿಸಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ,  ಶಿವರಾಜ್ ಕುಮಾರ್ ಸೇರಿದಂತೆ ಹಲವು ಗಣ್ಯರು ಶುಭಕೋರಿದ್ದಾರೆ.

ಬೆಂಗಳೂರು(ನ.01) ರಾಜ್ಯದಲ್ಲಿಂದು ಡಬಲ್ ಧಮಾಕ. ಒಂದೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ, ಮತ್ತೊಂದೆಡೆ ದೀಪಾವಳಿ ಹಬ್ಬದ ಸಡಗರ. ಕನ್ನಡ ಹಬ್ಬದ ದಿನ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ನಟ ಶಿವರಾಜ್ ಕುಮಾರ್ ಸೇರಿದಂತೆ ಗಣ್ಯರು ಸೆಲೆಬ್ರೆಟಿಗಳು ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ತಿಳಿಸಿದ್ದಾರೆ. 

ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಯ ಕೋರಿದ್ದಾರೆ.

Latest Videos

 

ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ…

— Narendra Modi (@narendramodi)

 

ಹೊರ ರಾಜ್ಯದಿಂದ ಬಂದು ಕನ್ನಡಕ್ಕೆ ಹೆಗಲು ಕೊಟ್ಟು 'ಪ್ರೇಮ ಭಾಷೆ ಕನ್ನಡ' ಎಂದ ತಾರೆಯರಿವರು!

ರಾಜ್ಯದಲ್ಲಿಂದು 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗಿದೆ. ಸಂಭ್ರಮ ಸಡಗ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಸ್ತ ಕನ್ನಡಗರಿಗೆ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಎಂದರೆ ನಮ್ಮ ಜನ, ಭಾಷೆ, ಸಂಸ್ಕೃತಿ, ನೆಲ, ಜಲ ಎಲ್ಲವನ್ನೂ ಒಳಗೊಂಡ ಕನ್ನಡತನವನ್ನು ಉಳಿಸಿ-ಬೆಳೆಸುವ ಕಾರ್ಯಕ್ಕೆ ನಮ್ಮನ್ನು ಸಮರ್ಪಿಸಿಕೊಳ್ಳಬೇಕಾದ ದಿನ. ಕನ್ನಡದ ಬಗೆಗಿನ ಪ್ರೀತಿ - ಕಾಳಜಿ ಇಂದಿಗಷ್ಟೆ ಸೀಮಿತವಾಗದೆ, ನಮ್ಮೆಲ್ಲರ ಬದುಕಿನ ನಿತ್ಯೋತ್ಸವವಾಗಲಿ. ಸಮಸ್ತ ಕನ್ನಡಿಗರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. " ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ  ಎಂದು ಟ್ವೀಟ್ ಮೂಲಕ ಸಂದೇಶ ಸಾರಿದ್ದಾರೆ.

ನಟ ಶಿವರಾಜ್ ಕುಮಾರ್ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಬ್ಬಕ್ಕೆ ಶುಭಾಯ ಕೋರಿದ್ದಾರೆ. ವಿಡಿಯೋ ಮೂಲಕ ಕನ್ನಡ ಜನತೆಗೆ ಶುಭಾಶಯ ತಿಳಿಸಿದ್ದಾರೆ. ಕನ್ನಡ ಮಾತನಾಡಿ, ಕನ್ನಡ ಸಿನಿಮಾ ನೋಡಿ, ಕನ್ನಡ ಸಿನಿಮಾ ಬೆಳೆಸಿ ಎಂದು ಮನವಿ ಮಾಡಿದ್ದಾರೆ. 

 

ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು 💛❤️
pic.twitter.com/RUdd7fZnhZ

— DrShivaRajkumar (@NimmaShivanna)

 

ಇತ್ತ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಹಿರಿಮೆ, ಗೌರವಗಳು ಸದಾ ಬೆಳಗುತ್ತಿರಲಿ ಎಂದು ಟ್ವೀಟ್ ಮಾಡಿದ್ದಾರೆ.ರಾಷ್ಟ್ರಕವಿ ಕುವೆಂಪು ಅವರ ಕನ್ನಡಕ್ಕಾಗಿ ಕೈ ಎತ್ತು ಕವನದ ಮೂಲಕ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ್ದಾರೆ. 

click me!