
ನವದೆಹಲಿ(ಸೆ.10): ಪ್ರಧಾನಿ ನರೇಂದ್ರ ಮೋದಿ ಸೌದಿ ಅರೆಬಿಯಾದ ದೊರೆ ಸಲ್ಮಾನ್ ಬಿನ್ ಅಬ್ದುಲ್ಲಾಜೀಜ್ ಜೊತೆ ಫೋನ್ ಮೂಲಕ ಮಾತನಾಡಿದ್ದಾರೆ. ಕೊರೋನಾ ವೈರಸ್‌ನಿಂದ ಜಾಗತಿಕವಾಗಿ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ನಾಯಕರು ಪರಸ್ಪರ ಚರ್ಚೆ ನಡೆಸಿದ್ದಾರೆ.
ಜಿ-20 ಬಳಗದ ಅಧ್ಯಕ್ಷತೆ ವಹಿಸಿಕೊಳ್ಳಲು ಸೌದಿ ಅರೆಬಿಯಾ ತೋರಿಸುತ್ತಿರುವ ನಾಯಕತ್ವದ ಬಗ್ಗೆ ಪ್ರಧಾನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿ-20ಯಲ್ಲಿ ತೆಗೆದುಕೊಳ್ಳಲಾದ ಕ್ರಮಗಳು ಕೊರೋನಾ ನಿಯಂತ್ರಿಸಲು ಸಮನ್ವಯ ಕಾರ್ಯಗಳನ್ನು ನಡೆಸಲು ನೆರವಾಗಲಿದೆ ಎಂದು ನಾಯಕರು ಹೇಳಿದ್ದಾರೆ. ಇಬ್ಬರೂ ಜಿ.20 ಮುಂದಿರುವ ವಿಚಾರಗಳಲ್ಲಿ ಆದ್ಯತೆಗಳ ಬಗ್ಗೆಯೂ ಮೋದಿ ಹಾಗೂ ಸೌದಿ ದೊರೆ ಚರ್ಚಿಸಿದ್ದಾರೆ.
NEPಯಿಂದ ಶಿಕ್ಷಣದ ಯಶಸ್ಸು ಅಡಗಿದೆ: ಮಹತ್ವದ ಅಂಶಗಳನ್ನು ಬಿಚ್ಚಿಟ್ಟ ಮೋದಿ
ಭಾರತ ಮತ್ತು ಸೌದಿ ಅರೆಬಿಯಾದ ನಡುವಿನ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಕುರಿತು ಉಭಯ ನಾಯಕರು ಚರ್ಚಿಸಿ ಈ ಬಗ್ಗೆ ತಮಗಿರುವ ತೃಪ್ತಿಯನ್ನೂ ವ್ಯಕ್ತಪಡಿಸಿದ್ದಾರೆ. ಎಲ್ಲ ವಲಯಗಳಲ್ಲಿ ಸಂಬಂಧಗಳನ್ನು ಬಲಿಷ್ಠಗೊಳಿಸಿ ಮತ್ತಷ್ಟು ಬಲವರ್ಧನೆ ಮಾಡುವ ಬದ್ಧತೆಯನ್ನೂ ನೆನಪಿಸಿಕೊಂಡಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತೀಯ ವಲಸಿಗರನ್ನು ರಕ್ಷಿಸಲು ಸೌದಿ ಅರೆಬಿಯಾದ ಅಧಿಕಾರಿಗಳು ಬೆಂಬಲ ನೀಡಿದ್ದಕ್ಕಾಗಿ ಪ್ರಧಾನಿ ಸಲ್ಮಾನ್ ಅವರಿಗೆ ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
'LPG ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ'
ದೊರೆ ಸಲ್ಮಾನ್ ಬಿನ್ ಅಬ್ದುಲ್ಲಾಜೀಜ್ ಅಲ್ ಸೌದ್, ಸೌದಿ ಅರೆಬಿಯಾದ ರಾಜಮನೆತನದ ಎಲ್ಲಾ ಸದಸ್ಯರು ಹಾಗೂ ಪ್ರಜೆಗಳಿಗೆ ಉತ್ತಮ ಆರೋಗ್ಯ ಲಭಿಸಲಿ ಹಾಗೂ ಒಳ್ಳೆಯದಾಗಲಿ ಎಂದು ಪ್ರಧಾನಮಂತ್ರಿ ಶುಭಾಶಯ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ