ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆದಿದೆ. 60 ಸ್ಥಾನಗಳ ಪೈಕಿ 46 ಸ್ಥಾನ ಗೆದ್ದಿರುವ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದೆ. ಇತ್ತ ಕಾಂಗ್ರೆಸ್ ಕೇವಲ 1 ಸ್ಥಾನದಲ್ಲಿ ಮಾತ್ರ ಗೆಲುವು ಕಂಡಿದೆ.
ಅರುಣಾಚಲ ಪ್ರದೇಶ(ಜೂನ್ 02) ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮೊದಲು ಅರುಣಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದಿದೆ. ಇಂದು ಬೆಳಗ್ಗೆಯಿಂದ ನಡೆದ ಮತ ಎಣಿಕೆಯಲ್ಲಿ ಬಿಜೆಪಿ 60 ಸ್ಥಾನಗಳ ಪೈಕಿ 46 ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರಿದೆ. ಈ ಮೂಲಕ ಬಿಜೆಪಿ ಸತತ 3ನೇ ಬಾರಿಗೆ ಅಧಿಕಾರಕ್ಕೇರಿದ ಸಾಧನೆ ಮಾಡಿದೆ.
ಅರುಣಾಚಲ ಪ್ರದೇಶ ಚುನಾವಣೆ ಹಲವು ಕುತೂಹಲಕ್ಕೆ ಕಾರಣವಾಗಿತ್ತು. ಚುನಾವಣೆ ವೇಳೆಯ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಪೇಮಾ ಖಂಡು ಸೇರಿದಂತೆ 10 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ಹೀಗಾಗಿ ಒಟ್ಟು 60 ಸ್ಥಾನಗಳ ಬೈಕಿ ಇಂದು ಕೇವಲ 50 ಸ್ಥಾನಗಳಿಗೆ ಮಾತ್ರ ಮತ ಎಣಿಕೆ ನಡೆದಿತ್ತು. ಇದೀಗ ಬಿಜೆಪಿ ಒಟ್ಟು 46 ಸ್ಥಾನಗಳನ್ನು ಗೆಲ್ಲುವ ಮೂಲಕ ಅರುಣಾಚಲ ಪ್ರದೇಶದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದೆ.
undefined
ಅರುಣಾಚಲದಲ್ಲಿ ಬಿಜೆಪಿ ಗೆಲುವಿನತ್ತ ದಾಪುಗಾಲು: ಸಿಕ್ಕಿಂ ಕ್ಲೀನ್ ಸ್ವೀಪ್‌ಗೆ ಎಸ್‌ಕೆಎಂ ಸಜ್ಜು
ಬಿಜೆಪಿ 46 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಕೇವಲ 1 ಸ್ಥಾನ ಗೆದ್ದುಕೊಂಡಿದೆ. ಇನ್ನು ಅರುಣಾಚಲ ಪ್ರದೇಶದ ಪ್ರಬಲ ಪ್ರಾದೇಶಿಕ ಪಕ್ಷ ನ್ಯಾಷನಲ್ ಪೀಪಲ್ಸ್ ಪಾರ್ಟಿ(NPEP) 5 ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ವಿಶೇಷ ಅಂದರೆ ಮೂವರು ಪಕ್ಷೇತರರು ಶಾಸಕರಾಗಿದ್ದಾರೆ.
ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ
ಭಾರತೀಯ ಜನತಾ ಪಾರ್ತಿ(BJP): 46
ನ್ಯಾಷನಲ್ ಪೀಪಲ್ಸ್ ಪಾರ್ಟಿ(NPEP): 5
ನ್ಯಾಷಲಿಸ್ಟ್ ಕಾಂಗ್ರೆಸ್ ಪಾರ್ಟಿ(NCP): 3
ಪೀಪಲ್ಸ್ ಪಾರ್ಟಿ ಆಫ್ ಅರುಣಾಚಲ( PPA):2
ಇಂಡಿಯನ್ ನ್ಯಾಷನಲ್ ಕಾಂಗ್ರೆಸ್(INC): 1
ಪಕ್ಷೇತರರು : 3
ಅರುಣಾಚಲ ಪ್ರದೇಶದ ಹಾಲಿ ಬಿಜೆಪಿ ಮುಖ್ಯಮಂತ್ರಿ ಪೇಮಾ ಖಂಡು ಮತ್ತೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಸರ್ಕಾರ ರಚಿಸಲಿದೆ. ಇದಕ್ಕಾಗಿ ರಾಜ್ಯಪಾಲರ ಭೇಟಿಯಾಗಿ ಮನವಿ ಸಲ್ಲಿಸಲಿದೆ. ಇತ್ತ ಬಿಜೆಪಿ ಕಾರ್ಯಕರ್ತರ ಸಂಭ್ರಮ ಶುರುವಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅರುಣಾಚಲ ಪ್ರದೇಶದ ಜನತೆ, ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಗುಡ್ಡ ಹತ್ತಿ, ಮಳೆಯಲ್ಲೇ ಎಷ್ಟೋ ದೂರ ನಡೆದು, ಸೇತುವೆ ದಾಟಿ ಹೋಗಿ ಮರು ಮತದಾನ ಪೂರೈಸಿದ ಚುನಾವಣಾ ಸಿಬ್ಬಂದಿ
ಧನ್ಯವಾದ ಅರುಣಾಚಲ ಪ್ರದೇಶ, ಅದ್ಬುತ ರಾಜ್ಯದ ಜನರು ಮತ್ತೆ ಬಿಜೆಪಿ ಮೇಲೆ ವಿಶ್ವಾಸವನ್ನಿಟ್ಟು ಮತ ನೀಡಿದ್ದೀರಿ. ಬಿಜೆಪಿಗೆ ನೀವು ಅಭೂತಪೂರ್ವ ಗೆಲುವು ನೀಡಿದ್ದೀರಿ. ನಮ್ಮ ಪಕ್ಷ ಮತ್ತಷ್ಟು ಅಭಿವೃದ್ಧಿಯೊಂದಿಗೆ ಹಾಗೂ ಅರುಣಾಚಲ ಪ್ರದೇಶದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಆಡಳಿತ ನೀಡಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.