
ಆಲಿಘರ್(ಡಿ.17): ಡಿಸೆಂಬರ್ 22ರಂದು ನಡೆಯಲಿರುವ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ(ಎಎಂಯು)ದ ಶತಮಾನೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಎಎಂಯುನಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿರುವ ಮೊಟ್ಟಮೊದಲ ಕಾರ‍್ಯಕ್ರಮ ಇದಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾರಂಭ ನಡೆಯಲಿದ್ದು, ಮೋದಿ ಜೊತೆಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಕೂಡ ಪಾಲ್ಗೊಳ್ಳಲಿದ್ದಾರೆ.
ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ತಾರೀಕ್ ಮನ್ಸೂರ್ ಅವರು ಎಎಂಯು ಪರವಾಗಿ ಪ್ರಧಾನಿಗೆ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಿದ್ದಾರೆ. ಇದಕ್ಕೂ ಮೊದಲು ರಾಷ್ಟ್ರಪತಿ ರಾಮನಾಥ ಕೋವಿಂದ್ ಈ ಕಾರ‍್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಶ್ವವಿದ್ಯಾಲಯ ಘೋಷಿಸಿತ್ತು.
ಮಹಮ್ಮದನ್ ಆಗ್ಲೋ ಓರಿಯಂಟಲ್ ಕಾಲೇಜು ಡಿ.1,1920ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯವಾಗಿ ಪರಿವರ್ತನೆಯಾಗಿತ್ತು. ಡಿ.17ರಂದು ಅದರ ಅಧಿಕೃತ ಉದ್ಘಾಟನೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ