ನವದೆಹಲಿ(ಏ.27: ದೇಶದಲ್ಲಿ ಕೋವಿಡ್ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಭೆ ನಡೆಸಲಿದ್ದಾರೆ. ಈ ವೇಳೆ ಅವರು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡುವ ಸಾಧ್ಯತೆ ಇದೆ.ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
‘ಬುಧವಾರ ಮಧ್ಯಾಹ್ನ 12 ಗಂಟೆಗೆ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸಹ ಭಾಗಿಯಾಗಲಿದ್ದು, ಪರಿಸ್ಥಿತಿಯ ವಿವರಣೆ ನೀಡಲಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿ ಸಭೆ ನಡೆಯಲಿರುವ ಮಾಹಿತಿ ನೀಡಿದ್ದಾರೆ.
ಕೋವಿಡ್ ಹೆಚ್ಚಾಗುವ ಬಗ್ಗೆ ಎಚ್ಚರಿಕೆ, ವರ್ಷಕ್ಕೊಂದು ಡೋಸ್ ಪಡೆಯುವ ಬಗ್ಗೆ ಸುಧಾಕರ್ ಹೇಳಿದ್ದು ಹೀಗೆ
ಮುಂದಿನ ದಿನಗಳಲ್ಲಿ ಹಬ್ಬಗಳು ಬರುತ್ತಿರುವುದರಿಂದ ಎಲ್ಲರೂ ಎಚ್ಚರವಾಗಿರಬೇಕು. ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಭಾನುವಾರ ನಡೆದ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ ಹೇಳಿದ್ದರು.
ದೇಶದಲ್ಲಿ ಕಳೆದ 15 ದಿನಗಳಲ್ಲಿ ಕೋವಿಡ್ ಸೋಂಕು ದ್ವಿಗುಣಗೊಂಡಿದೆ. ಏ.17ಕ್ಕೆ ಅಂತ್ಯವಾದ ವಾರದಲ್ಲಿ 8050 ಪ್ರಕರಣ ದಾಖಲಾಗಿದ್ದವು. ಆದರೆ ಏ.24ಕ್ಕೆ ಅಂತ್ಯವಾದ ವಾರದಲ್ಲಿ 15,700 ಪ್ರಕರಣ ವರದಿಯಾಗಿದ್ದವು. ಇದು ಶೇ.95ರಷ್ಟುಹೆಚ್ಚಳದ ಸಂಕೇತವಾಗಿತ್ತು. ದಿಲ್ಲಿ ಹಾಗೂ ಸುತ್ತಮುತ್ತ ಸೋಂಕು ವ್ಯಾಪಕವಾಗಿದ್ದು, ದೇಶದ ನಿತ್ಯದ ಸುಮಾರು 2500 ಕೇಸುಗಳಲ್ಲಿ 1000ಕ್ಕೂ ಹೆಚ್ಚು ಕೇಸುಗಳು ದಿಲ್ಲಿಯಿಂದಲೇ ವರದಿಯಾಗುತ್ತಿವೆ. ಕರ್ನಾಟಕದಲ್ಲೂ 1 ವಾರದಲ್ಲಿ ಸೋಂಕಿನ ಪ್ರಮಾಣ ಶೇ.71ರಷ್ಟುಹೆಚ್ಚಿದೆ.
ಕೋವಿಡ್ ಅಲ್ಪ ಏರಿಕೆಗೆ ಗಾಬರಿ ಬೇಡ-ಸಿಎಂ
ರಾಜ್ಯದಲ್ಲಿ ಇದೀಗ ಕೋವಿಡ್ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿವೆ. ಕೋವಿಡ್ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾದರೆ ಗಾಬರಿಯಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಗಡಿ ಭಾಗದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲಾಗುವುದು. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಹೆಚ್ಚಿಸಲಾಗುವುದು. ಮಹಾರಾಷ್ಟ್ರ ಮತ್ತು ಕೇರಳ ಗಡಿ ಭಾಗಗಳಲ್ಲಿ ತಪಾಸಣೆ ಮತ್ತು ಎಲ್ಲ ಸುರಕ್ಷತೆ ಕ್ರಮಗಳನ್ನು ಅನುಸರಿಸಲಾಗುವುದು ಎಂದರು. ಬುಧವಾರ ಪ್ರಧಾನಿ ನರೇಂದ್ರ ಮೋದಿ ಕೋವಿಡ್ ಸ್ಥಿತಿಗತಿ ಕುರಿತು ವಿಡಿಯೋ ಕಾನ್‌್ಫರೆನ್ಸ್ ನಡೆಸಲಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕೈಗೊಂಡ ಕ್ರಮಗಳ ಕುರಿತು ಅವರ ಗಮನಕ್ಕೆ ತರಲಾಗುವುದು. ಸಭೆ ಬಳಿಕ ಮುಂಜಾಗ್ರತೆ ಕ್ರಮದ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಮತ್ತೆ ಆತಂಕ ಹುಟ್ಟಿಸಿದ ಕೊರೋನಾ, ಯಾವ ರಾಜ್ಯದ ಸ್ಥಿತಿ ಹೇಗಿದೆ? ಇಲ್ಲಿದೆ ವಿವರ
ತಾಂತ್ರಿಕ ಸಲಹಾ ಸಮಿತಿ ಸಭೆ ಸೇರಿ ಕೆಲವು ಕೊರೋನಾ ಸೂಕ್ತ ನಡವಳಿಕೆಗಳನ್ನು ಪುನಃ ಜಾರಿಗೊಳಿಸಲು ಸೂಚಿಸಲಾಗಿದೆ. ಮಾಸ್‌್ಕ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಎಲ್ಲರೂ ಇದನ್ನು ಪಾಲಿಸಿದರೆ ಉತ್ತಮ. ಇದುವರೆಗೆ ಆಸ್ಪತ್ರೆಗೆ ಯಾರೂ ದಾಖಲಾಗಿಲ್ಲ ಎಂದು ಹೇಳಿದರು.
ಇತ್ತೀಚೆಗೆ ನೆರೆಯ ದೇಶಗಳಾದ ಥಾಯ್ಲೆಂಡ್, ಇಂಡೋನೇಷ್ಯಾ ಹಾಗೂ ಚೈನಾದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿಯೂ ಪ್ರಕರಣ ಸಂಖ್ಯೆ ಹೆಚ್ಚಳವಾಗಿರುವುದರಿಂದ ಮೋದಿ ಅವರು ಮುಂಜಾಗ್ರತೆ ವಹಿಸಿ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.