ರೋಜ್ಗಾರ್ ಮೇಳ ಅಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗೆ ಹೊಸದಾಗಿ ಸೇರ್ಪಡೆಗೊಂಡ 71,000 ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ನವದೆಹಲಿ(ಮೇ.15): ಕೇಂದ್ರ ಬಿಜೆಪಿ ಸರ್ಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲಿ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆ ಭರ್ತಿ ಮಾಡುವ ಯೋಜನೆ ಪ್ರಮುಖವಾಗಿದೆ. ಯುವ ಸಮುಹಕ್ಕೆ ಉಗ್ಯೋದ ಒದಗಿಸಿಕೊಡಲು ಹಲವು ಯೋಜನೆ ಜಾರಿಗೆ ತಂದಿರುವ ಬಿಜೆಪಿ ಸರ್ಕಾರ ಇದೀಗ, ರೋಜ್‌ಗಾರ್ ಮೇಳ ಅಡಿಯಲ್ಲಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ 71,000 ಉದ್ಯೋಗಿಗಳನ್ನು ನೇಮಕ ಮಾಡಲಾಗಿದೆ. ಹೀಗೆ ನೇಮಕವಾದ ಹೊಸ ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮೇ16 ರಂದು ನೇಮಕಾತಿ ಪತ್ರ ವಿತರಿಸಲಿದ್ದಾರೆ.
ನಾಳೆ ಬೆಳಗ್ಗ 10.30ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ದೇಶದ 45 ಕಡೆಗಳಲ್ಲಿ ಪ್ರಧಾನಿ ಮೋದಿ ರೋಜ್‌ಗಾರ್ ಮೇಳ ಕಾರ್ಯಕ್ರಮ ಆಯೋಜಿಸಲಾಗಿದೆ. ನೇಮಕಾತಿ ಪತ್ರ ವಿತರಿಸಿದ ಬಳಿಕ ಕೇಂದ್ರ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾದ ಉದ್ಯೋಗಿಳನ್ನುದ್ದೇಶಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
undefined
ಪ್ರತಿ ವರ್ಷ 10 ಲಕ್ಷ ಉದ್ಯೋಗ ಗುರಿ: ಕೇಂದ್ರ ಸಚಿವ ಭಗವಂತ ಖೂಬಾ
ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಕಾರ್ಯಕ್ರಮ ಬೆಂಬಲಿಸುವ ಕೇಂದ್ರ ಸರ್ಕಾರಿ ಇಲಾಖೆಗಳು ಮತ್ತು ರಾಜ್ಯ ಸರ್ಕಾರಗಳು , ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿಗಳು ನಡೆಯುತ್ತಿವೆ. ಗ್ರಾಮೀಣ ಡಾಕ್ ಸೇವಕ್, ಇನ್ಸ್ ಪೆಕ್ಟರ್ ಆಫ್ ಪೋಸ್ಟ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಅಕೌಂಟ್ಸ್ ಕ್ಲರ್ಕ್, ಟ್ರ್ಯಾಕ್ ಮೆಂಟೇನರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಲೋವರ್ ಡಿವಿಷನ್ ಕ್ಲರ್ಕ್, ಸಬ್ ಡಿವಿಜನಲ್ ಆಫೀಸರ್, ಟ್ಯಾಕ್ಸ್ ಅಸಿಸ್ಟೆಂಟ್, ಅಸಿಸ್ಟೆಂಟ್ ಜಾರಿ ಆಫೀಸರ್, ಇನ್ಸ್ ಪೆಕ್ಟರ್, ನರ್ಸಿಂಗ್ ಆಫೀಸರ್, ಅಸಿಸ್ಟೆಂಟ್ ಸೆಕ್ಯುರಿಟಿ ಆಫೀಸರ್, ಫೈರ್ಮ್ಯಾನ್, ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್, ಅಸಿಸ್ಟೆಂಟ್ ಆಡಿಟ್ ಆಫೀಸರ್ ಮುಂತಾದ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ವಿಭಾಗೀಯ ಲೆಕ್ಕಾಧಿಕಾರಿ, ಲೆಕ್ಕ ಪರಿಶೋಧಕ, ಕಾನ್ಸ್ ಸ್ಟೇಬಲ್, ಹೆಡ್ ಕಾನ್ಸ್ ಸ್ಟೇಬಲ್, ಸಹಾಯಕ ಕಮಾಂಡೆಂಟ್, ಪ್ರಾಂಶುಪಾಲರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಸಹಾಯಕ ರಿಜಿಸ್ಟ್ರಾರ್, ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಇತರರು ಸೇರಿದ್ದಾರೆ.
ರೈಲ್ವೆಯಲ್ಲಿ 200 ಜನರ ನೇಮಕ, ನೇಮಕಾತಿ ಪತ್ರ ವಿತರಿಸಿದ ಸಚಿವೆ ಶೋಭಾ ಕರಂದ್ಲಾಜೆ
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿ ಅವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳ ಒಂದು ಹೆಜ್ಜೆಯಾಗಿದೆ. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಕರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಅರ್ಥಪೂರ್ಣ ಅವಕಾಶಗಳನ್ನು ಒದಗಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
ಹೊಸದಾಗಿ ನೇಮಕಗೊಂಡವರು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡ ಎಲ್ಲರಿಗೂ ಆನ್ ಲೈಲ್ ಓರಿಯಂಟೇಶನ್ ಕೋರ್ಸ್ ಆಗಿರುವ ಕರ್ಮಯೋಗಿ ಪ್ರಾರಂಭದ ಮೂಲಕ ತರಬೇತಿ ಪಡೆಯುವ ಅವಕಾಶವನ್ನು ಸಹ ಪಡೆಯುಲಿದ್ದಾರೆ.