ಜ.3ಕ್ಕೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ಮೋದಿ

Published : Jan 02, 2023, 09:27 PM IST
ಜ.3ಕ್ಕೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆ ಮಾಡಲಿದ್ದಾರೆ ಪ್ರಧಾನಿ ಮೋದಿ

ಸಾರಾಂಶ

 ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಧ್ಯೇಯವಾಕ್ಯದೊಂದಿಗೆ ಭಾರತೀಯ ವಿಜ್ಞಾನ ಕಾಂಗ್ರೆಸ್ ಕಾರ್ಯಕ್ರಮ ನಾಳೆ ಉದ್ಘಾಟನೆಗೊಳ್ಳಲಿದೆ.

ನವದೆಹಲಿ(ಜ.02): ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಂದು 108ನೇ ʻಭಾರತೀಯ ವಿಜ್ಞಾನ ಕಾಂಗ್ರೆಸ್ ಉದ್ಘಾಟನೆ ಮಾಡಲಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಮೋದಿ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಿಳಾ ಸಬಲೀಕರಣದೊಂದಿಗೆ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಅನ್ನೋದು ಕಾರ್ಯಕ್ರಮದ ಧ್ಯೇಯವಾಕ್ಯವಾಗಿದೆ. ಸಾರ್ವಜನಿಕ ಭಾಷಣಗಳು ಮತ್ತು ಪ್ರದರ್ಶನಗಳು ಜನಸಾಮಾನ್ಯರಿಗೆ ಮುಕ್ತವಾಗಿವೆ. ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯ ಅಮರಾವತಿ ರಸ್ತೆ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.    

108ನೇ ʻಭಾರತೀಯ ವಿಜ್ಞಾನ ಕಾಂಗ್ರೆಸ್ʼನ ತಾಂತ್ರಿಕ ಗೋಷ್ಠಿಗಳನ್ನು 14 ವಿಭಾಗಗಳಾಗಿ ವಿಂಗಡಿಸಲಾಗಿದೆ. ಇದರ ಭಾಗವಾಗಿ ವಿಶ್ವವಿದ್ಯಾಲಯದ ʻಮಹಾತ್ಮ ಜೋತಿಬಾ ಫುಲೆ ಶೈಕ್ಷಣಿಕ ಕ್ಯಾಂಪಸ್ʼನ ವಿವಿಧ ಸ್ಥಳಗಳಲ್ಲಿ ಸಮಾನಾಂತರವಾಗಿ ಗೋಷ್ಠಿಗಳನ್ನು ನಡೆಸಲಾಗುತ್ತದೆ. ಈ 14 ವಿಭಾಗಗಳನ್ನು ಹೊರತುಪಡಿಸಿ, ʻಮಹಿಳಾ ವಿಜ್ಞಾನ ಕಾಂಗ್ರೆಸ್ʼ, ʻರೈತರ ವಿಜ್ಞಾನ ಕಾಂಗ್ರೆಸ್ʼ, ʻಮಕ್ಕಳ ವಿಜ್ಞಾನ ಕಾಂಗ್ರೆಸ್ʼ, ʻಬುಡಕಟ್ಟು ಸಮಾವೇಶʼ, ʻವಿಜ್ಞಾನ ಮತ್ತು ಸಮಾಜʼದ ಬಗ್ಗೆ ಒಂದು ವಿಭಾಗ ಹಾಗೂ ʻವಿಜ್ಞಾನ ಸಂವಹನಕಾರರ ಕಾಂಗ್ರೆಸ್ ವಿಭಾಗಗಳು ಇರಲಿವೆ.

ಪ್ರೈಡ್ ಆಫ್ ಇಂಡಿಯಾ ಎಂಬ ಬೃಹತ್‌ ಪ್ರದರ್ಶನವು ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದೆ. ಈ ಪ್ರದರ್ಶನದಲ್ಲಿ ಪ್ರಮುಖ ಬೆಳವಣಿಗೆಗಳು, ಪ್ರಮುಖ ಸಾಧನೆಗಳು ಮತ್ತು ಸಮಾಜಕ್ಕೆ ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಮುಖ ಕೊಡುಗೆಗಳನ್ನು ಅನಾವರಣಗೊಳಿಸಲಾಗುವುದು. ಈ ಪ್ರದರ್ಶನವು ವೈಜ್ಞಾನಿಕ ಪ್ರಪಂಚದ ಸಂಪೂರ್ಣ ಚಿತ್ರಣವನ್ನು ಒಳಗೊಂಡಿರುವ ನೂರಾರು ಹೊಸ ಆಲೋಚನೆಗಳು, ಆವಿಷ್ಕಾರಗಳು ಮತ್ತು ಉತ್ಪನ್ನಗಳನ್ನು ಒಟ್ಟುಗೂಡಿಸುತ್ತದೆ. ದೇಶಾದ್ಯಂತದ ಸರಕಾರ, ಕಾರ್ಪೊರೇಟ್ ಸಂಸ್ಥೆಗಳು, ಸಾರ್ವಜನಿಕ ವಲಯದ ಉದ್ಯಮಗಳು(ಪಿ.ಎಸ್‌.ಯು), ಶೈಕ್ಷಣಿಕ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌&ಡಿ) ಸಂಸ್ಥೆಗಳು, ಅನ್ವೇಷಕರು ಮತ್ತು ಉದ್ಯಮಿಗಳ ಸಾಮರ್ಥ್ಯ ಹಾಗೂ ಸಾಧನೆಗಳ ಪ್ರದರ್ಶನವನ್ನು ʻಪ್ರೈಡ್ ಆಫ್ ಇಂಡಿಯಾʼ ಒಳಗೊಂಡಿರಲಿದೆ. 

ಈ ಕಾರ್ಯಕ್ರಮದ ಪೂರ್ವಭಾವಿಯಾಗಿ, ʻಭಾರತೀಯ ವಿಜ್ಞಾನ ಕಾಂಗ್ರೆಸ್ʼನ ಸಂಪ್ರದಾಯದಂತೆ ʻವಿಜ್ಞಾನ್ ಜ್ಯೋತಿʼ ಕಾರ್ಯಕ್ರಮವು ಇಂದು ನಡೆಯಿತು. 400ಕ್ಕೂ ಹೆಚ್ಚು ಶಾಲಾ ಕಾಲೇಜು ವಿದ್ಯಾರ್ಥಿಗಳು ʻಝೀರೋ ಮೈಲ್ ಸ್ಟೋನ್ʼನಲ್ಲಿ ಸೇರಿದ್ದರು. ವಿಶೇಷ ಟೋಪಿಗಳು ಮತ್ತು ಟಿ-ಶರ್ಟ್‌ಗಳನ್ನು ಧರಿಸಿ, ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಮೆರವಣಿಗೆ ಮೂಲಕ ತೆರಳಿದರು. ತಮ್ಮ ಜೀವನದಲ್ಲಿ ವೈಜ್ಞಾನಿಕ ಚಿಂತನೆಯನ್ನು ಅಳವಡಿಸಿಕೊಳ್ಳುವ ಪ್ರತಿಜ್ಞೆಯನ್ನು ಅವರು ಕೈಗೊಂಡರು. ʻಐಎಸ್‌ಸಿಎʼ ಪ್ರಧಾನ ಅಧ್ಯಕ್ಷರಾದ ಡಾ. (ಶ್ರೀಮತಿ) ವಿಜಯ್ ಲಕ್ಷ್ಮಿ ಸಕ್ಸೇನಾ ಅವರು “ವಿಜ್ಞಾನವನ್ನು ವಿದ್ಯಾರ್ಥಿಗಳು ಕೇವಲ ಒಂದು ವಿಷಯವಾಗಿ ಅಧ್ಯಯನ ಮಾಡಬಾರದು, ತಾವು ಮಾಡುವ ಯಾವುದೇ ಕೆಲಸದಲ್ಲಿ ಅದನ್ನು ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು,ʼʼ ಎಂದು ಒತ್ತಾಯಿಸಿದರು.

ಜ್ಞಾನದ ಜ್ಯೋತಿಯಾದ - ʻವಿಜ್ಞಾನ್ ಜ್ಯೋತಿʼಯನ್ನು ಒಲಿಂಪಿಕ್ ಜ್ಯೋತಿಯ ಮಾದರಿಯಲ್ಲಿ ರೂಪಿಸಲಾಗಿದೆ. ಇದು ಸಮಾಜದಲ್ಲಿ, ವಿಶೇಷವಾಗಿ ಯುವಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಸಮರ್ಪಿತವಾದ ಆಂದೋಲನವಾಗಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಈ ಜ್ಯೋತಿಯನ್ನು ಸ್ಥಾಪಿಸಲಾಗಿದ್ದು, 108ನೇ ʻಭಾರತೀಯ ವಿಜ್ಞಾನ ಕಾಂಗ್ರೆಸ್ʼ ಸಮಾಪ್ತಿಯವರೆಗೂ ಅದು ಉರಿಯುತ್ತಲೇ ಇರುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!