
ನವದೆಹಲಿ(ಅ.03): ಸಮುದ್ರಮಟ್ಟದಿಂದ 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಾಣವಾಗಿರುವ, ‘ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’ ಎಂಬ ಹಿರಿಮೆಗೆ ಪಾತ್ರವಾಗಿರುವ 9.02 ಕಿ.ಮೀ ಉದ್ದದ ಮನಾಲಿ-ಲೇಹ್ ನಡುವಿನ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ.
"
ಹಿಮಾಚಲಪ್ರದೇಶದಲ್ಲಿರುವ ಈ ಸುರಂಗಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದ್ದು, ಈ ಸುರಂಗದಿಂದ ಮನಾಲಿ ಹಾಗೂ ಲೇಹ್ ನಗರಗಳ ನಡುವಣ ಅಂತರ 46 ಕಿ.ಮೀ.ಯಷ್ಟುತಗ್ಗಲಿದೆ. ಪ್ರಯಾಣ ಅವಧಿ 4ರಿಂದ 5 ತಾಸಿನಷ್ಟುಉಳಿತಾಯವಾಗಲಿದೆ.
ವ್ಯೂಹಾತ್ಮಕವಾಗಿ ಮಹತ್ವವಾಗಿರುವ ಈ ಯೋಜನೆಗೆ 2002ರಲ್ಲಿ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರ ಚಾಲನೆ ನೀಡಿತ್ತು. 2002ರಲ್ಲಿ ಅಡಿಗಲ್ಲು ಹಾಕಲಾಗಿದ್ದ ಈ ಕಾಮಗಾರಿ 3300 ಕೋಟಿ ರು. ವೆಚ್ಚದಲ್ಲಿ ಪೂರ್ಣಗೊಂಡಿದೆ. ಶುಕ್ರವಾರ ಮನಾಲಿಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉದ್ಘಾಟನೆಗೆ ಸಜ್ಜಾಗಿರುವ ಸುರಂಗವನ್ನು ಪರಿಶೀಲನೆ ನಡೆಸಿದರು.
9.02 ಕಿ.ಮೀ.: ಸುರಂಗದ ಉದ್ದ
5 ತಾಸು: ಸುರಂಗದಿಂದ ಅವಧಿ ಉಳಿತಾಯ
46 ಕಿ.ಮೀ.: ಮನಾಲಿ, ಲೇಹ್ ನಡುವಣ ಅಂತರ ಇಳಿಕೆ
2002ರಲ್ಲಿ ಅಟಲ್‌ರಿಂದ ಶಂಕುಸ್ಥಾಪನೆ
2020ರಲ್ಲಿ ಮೋದಿಯಿಂದ ಉದ್ಘಾಟನೆ
3300 ಕೋಟಿ ರು. ವೆಚ್ಚದ ಸುರಂಗ
4500 ವಾಹನಗಳಿಗೆ ನಿತ್ಯ ಸಂಚಾರಕ್ಕೆ ಅವಕಾಶ
ವಿಶೇಷತೆಗಳು
- ಕುದುರೆ ಲಾಳಾಕೃತಿಯ ದ್ವಿಪಥ ಮಾರ್ಗವನ್ನು ಸುರಂಗ ಹೊಂದಿದೆ
- 8 ಮೀ. ಅಗಲದ ರಸ್ತೆ. 5.525 ಮೀ. ಎತ್ತರದ ವಾಹನ ಚಲಿಸಬಹುದು
- ನಿತ್ಯ 3000 ಕಾರು, 1500 ಲಾರಿಗಳ ಸಂಚಾರಕ್ಕೆ ಅವಕಾಶ
- ಗರಿಷ್ಠ 80 ಕಿ.ಮೀ. ವೇಗದಲ್ಲಿ ಹೋಗಬಹುದು
- ಸರ್ವಋುತು ಸುರಂಗ. ಹಿಮಪಾತ ವೇಳೆಯೂ ವಾಹನ ಸಂಚಾರ
- 150 ಮೀಟರ್‌ಗಳಿಗೊಂದು ಟೆಲಿಫೋನ್ ವ್ಯವಸ್ಥೆ
- ಪ್ರತೀ 1 ಕಿ.ಮೀ.ಗೊಂದು ಗಾಳಿಯ ಶುದ್ಧತೆಯ ಪರೀಕ್ಷಾ ವ್ಯವಸ್ಥೆ
- ಪ್ರತೀ 250 ಮೀಟರ್‌ಗೊಂದು ಬ್ರಾಡ್‌ಕಾಸ್ಟ್ ವ್ಯವಸ್ಥೆ, ಸಿಸಿ ಕ್ಯಾಮೆರಾ, ಸ್ವಯಂಚಾಲಿತ ಅನಾಹುತ ಘಟನೆ ಪತ್ತೆ ವ್ಯವಸ್ಥೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ