
ನವದೆಹಲಿ(ಏ.19): ಕೊರೋನಾ ವೈರಸ್ ಭಾರತದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದೆ. ದಿನವೊಂದಕ್ಕೆ 2.7 ಲಕ್ಷ ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಸಿಕ್ಕವರಿಗೆ ಆಕ್ಸಿಜನ್ ಇಲ್ಲ, ಲಸಿಕೆ ಇಲ್ಲ ಸೇರಿದಂತೆ ನೊರೊಂದು ಸಮಸ್ಯೆಗಳು ಉದ್ಭವಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೊರೋನಾ ಪರಿಸ್ಥಿತಿ ಕುರಿತು ದೇಶದ ವೈದ್ಯರ ಜೊತೆ ಸಭೆ ನಡೆಸಲಿದ್ದಾರೆ.
ಕೊರೋನಾ ಸಭೆ ಬಳಿಕ ಮಹತ್ವದ ಸೂಚನೆ ನೀಡಿದ ಪ್ರಧಾನಿ ಮೋದಿ!
ದೇಶದ ಪ್ರಮುಖ ವೈದ್ಯರ ಜೊತೆ ಇಂದು(ಏ.19) ಸಂಜೆ 4.30ಕ್ಕೆ ಮೋದಿ ಸಭೆ ನಡೆಸಲಿದ್ದಾರೆ. ಈ ವೇಳೆ ದೇಶದಲ್ಲಿನ ಕೊರೋನಾ ಪರಿಸ್ಥಿತಿ. ಕೈಗೊಳ್ಳಬೇಕಾದ ಮೆಡಿಕಲ್ ಮುನ್ನಚ್ಚೆರಿಕೆಗಳು, ವೈದ್ಯಕೀಯ ಸಲಕರಣೆ, ಔಷಧಿ, ಲಸಿಕೆ, ಆಕ್ಸಿಜನ್ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.
ವೈದ್ಯರ ಜೊತೆ ಕೊರೋನಾ ನಿಯಂತ್ರಕ್ಕೆ ಸಲಹೆಗಳನ್ನು ಮೋದಿ ಪಡೆಯಲಿದ್ದಾರೆ. ದೇಶದಲ್ಲಿ ಕೈಮೀರಿ ಹೋಗುತ್ತಿರುವ ಕೊರೋನಾ ನಿಯಂತ್ರಣ ದೃಷ್ಟಿಯಿಂದ ಇದು ಅತ್ಯಂತ ಮಹತ್ವದ ಸಭೆ ಎನ್ನಲಾಗುತ್ತಿದೆ. ಈ ಸಭೆ ಬಳಿಕ 6 ಗಂಟೆಗೆ ಮೋದಿ, ಲಸಿಕೆ ಉತ್ಪಾದಕ ಕಂಪನಿಗಳ ಜೊತೆ ಸಭೆ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಮನವಿ ಮೇರೆಗೆ ಕುಂಭಮೇಳಕ್ಕೆ ತೆರೆ!
ಫಾರ್ಮ ಕಂಪನಿ ಜೊತೆಗಿನ ವಿಡಿಯೋ ಸಭೆಯಲ್ಲಿ ಮೋದಿ, ಹೆಚ್ಚಿನ ಲಸಿಕೆ ಉತ್ಪಾದನೆ, ಪೂರೈಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಈ ಎರಡೂ ಸಭೆಗಳು ಇದೀಗ ಅತ್ಯಂತ ಮಹತ್ವದ್ದಾಗಿದೆ.
ಮೋದಿ ಈಗಾಗಲೇ ಉನ್ನತ ಮಟ್ಟದ ಅಧಿಕಾರಿಗಳ ಜೊತೆ, ಎಲ್ಲಾ ಮುಖ್ಯಮಂತ್ರಿಗಳ ಜೊತೆ, ರಾಜ್ಯಪಾಲರ ಜೊತೆ ವಿಡಿಯೋ ಸಭೆ ನಡೆಸಿದ್ದಾರೆ. ಎಲ್ಲಾ ಸಭೆಗಳಲ್ಲೂ ಲಾಕ್‌ಡೌನ್ ಹೇರದೆ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ