ಮೋದಿಯಿಂದಲೇ ಆ.5ಕ್ಕೆ ಮಂದಿರಕ್ಕೆ ಭೂಮಿಪೂಜೆ ಶುಭಾರಂಭ| ಎಲ್ಲಾ ರಾಜ್ಯಗಳ ಸಿಎಂಗಳಿಗೆ ಆಹ್ವಾನ
ನವದೆಹಲಿ(ಜು.23): ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆ.5ರಂದು ಶಿಲಾನ್ಯಾಸ ನೆರವೇರಿಸುವುದು ಖಚಿತವಾಗಿದೆ. ಜೊತೆಗೆ ಸ್ವತಃ ಪ್ರಧಾನಿ ಮೋದಿ ಅವರೇ ಭೂಮಿಪೂಜೆ ನೆರವೇರಿಸಲಿದ್ದಾರೆ ಎಂದು ದೇಗುಲ ನಿರ್ಮಾಣ ಮಂಡಳಿ ಟ್ರಸ್ಟಿಗಳಲ್ಲಿ ಒಬ್ಬರಾದ ಸ್ವಾಗಿ ಗೋವಿಂದ ದೇವ್‌ಗಿರಿ ಮಹಾರಾಜ್ ತಿಳಿಸಿದ್ದಾರೆ.
ವಿನ್ಯಾಸದಲ್ಲಿ ಸಣ್ಣ ಬದಲಾವಣೆ: ರಾಮ ಮಂದಿರ ಜಗತ್ತಿನಲ್ಲಿಯೇ ಮೂರನೇ ದೊಡ್ಡ ಹಿಂದೂ ದೇಗುಲ ..!
ಇದೇ ವೇಳೆ ಕೋರಾನಾ ಹೆಚ್ಚಳ ಹಿನ್ನೆಲೆಯಲ್ಲಿ ಭೂಮಿಪೂಜೆ ಸೇರಿ 3 ದಿನಗಳ ಕಾಲ ನಡೆಯುವ ವಿವಿಧ ಕಾರ್ಯಕ್ರಮದ ವೇಳೆ ಕೋವಿಡ್ ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಶಿಲಾನ್ಯಾಸ ಕಾರ್ಯಕ್ರಮದಲ್ಲಿ 150 ರಾಜಕೀಯ ಗಣ್ಯರು ಸೇರಿ 200 ಜನರಿಗೆ ಮಾತ್ರ ಆಹ್ವಾನ ನೀಡಲಾಗುತ್ತಿದೆ. ಇದರಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಆಹ್ವಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಭೂಮಿಪೂಜೆ ವೇಳೆ ಪ್ರಧಾನಿ ಮೋದಿ ಅವರೇ ಬೆಳ್ಳಿ ಇಟ್ಟಿಗೆಗಳನ್ನು ಇಡಲಿದ್ದಾರೆ. ಒಟ್ಟು ಒಂದೂವರೆ ಗಂಟೆ ಕಾಲ ಅವರು ಅಯೋಧ್ಯೆಯಲ್ಲಿ ಇರಲಿದ್ದಾರೆ. ಶ್ರೀರಾಮ ಮಂದಿರ, ಹನುಮಾನ್ ಗಢಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಮಹಾರಾಜ್ ತಿಳಿಸಿದ್ದಾರೆ.